ಈ ಬಾರಿ ಅದ್ಧೂರಿ ದಸರಾ ಆಚರಣೆಗೆ ನಿರ್ಧಾರ; ಮೈಸೂರು ದಸರಾ ಬ್ರ್ಯಾಂಡ್ ಸೃಜನೆ; ಸಿಎಂ ಬೊಮ್ಮಾಯಿ

Team Udayavani, Jul 19, 2022, 7:31 PM IST

ಈ ಬಾರಿ ಅದ್ಧೂರಿ ದಸರಾ ಆಚರಣೆಗೆ ನಿರ್ಧಾರ; ಮೈಸೂರು ದಸರಾ ಬ್ರ್ಯಾಂಡ್ ಸೃಜನೆ; ಸಿಎಂ ಬೊಮ್ಮಾಯಿ

ಬೆಂಗಳೂರು: ಮೈಸೂರು ದಸರಾ ಕುರಿತು ಬ್ರ್ಯಾಂಡ್ ಸೃಜಿಸಿ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಲು ನಿರ್ಧರಿಸಲಾಗಿದೆ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ- 2022 ರ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಅವರು ಪತ್ರಿಕಾಗೋಷ್ಠಿ ನಡೆಸಿದರು.

ಪ್ರಚಾರ:

ಸರ್ಕಾರದ ಎಲ್ಲಾ ಜಾಹೀರಾತು, ಪ್ರಕಟಣೆಗಳು, ವೆಬ್ ಸೈಟ್, ಸಾಮಾಜಿಕ ಮಾಧ್ಯಮಗಳಲ್ಲಿ  ಮೈಸೂರು ದಸರಾ ಲಾಂಛನವನ್ನು ಪ್ರಕಟಿಸಬೇಕು.  ಮುಂಬೈ, ದೆಹಲಿ ಹಾಗೂ ಚನ್ನೈ ವಿಮಾನನಿಲ್ದಾಣಗಳಲ್ಲಿ  ಹಾಗೂ ಇತರೆ ಸಾವಾಜನಿಕ ಸ್ಥಳಗಳಲ್ಲಿ ಮೈಸುರು ದಸರಾ ಕುರಿತು ಪ್ರಚಾರ ಮಾಡಬೇಕೆಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.

ಒಂದು ವಾರದೊಳಗೆ ಮೈಸೂರು ಟೂರಿಸಂ ಸರ್ಕಿಟ್ ಕುರಿತ ಆದೇಶ:  ಒಂದು ವಾರದೊಳಗೆ ಮೈಸೂರು ಟೂರಿಸಂ ಸರ್ಕಿಟ್ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗುವುದು. ಪ್ರವಾಸೋದ್ಯಮ ಇಲಾಖೆ ಹಾಗೂ ಖಾಸಗಿ ವಲಯದ ಸಹಯೋಗದೊಂದಿಗೆ ಕಾರ್ಯಕ್ರಮ ರೂಪಿಸಲಾಗುವುದು.  ಸರ್ಕಿಟ್ ನಲ್ಲಿ ಬೇಲೂರು, ಹಳೇಬೀಡು ಮುಂತಾದ ಪ್ರದೇಶಗಳಿಗೆ ಪ್ರವಾಸದ ಯೋಜನೆ, ಪ್ರಯಾಣ ಹಾಗೂ ವಸತಿ ಎಲ್ಲವೂ ಒಂದೇ ಟಿಕೆಟ್‍ನಲ್ಲಿ ಸಾಧ್ಯವಾಗಲಿದೆ.  ಇದಕ್ಕೆ ವೆಬ್‍ಸೈಟ್ ಕೂಡ ಅಭಿವೃದ್ಧಿಪಡಿಸಲಾಗುತ್ತಿದೆ. ಮೈಸೂರು ದಸರಾಕ್ಕೆ ಇದು ಪೂರಕವಾಗಲಿದೆ ಎಂದರು.

ಇದನ್ನೂ ಓದಿ: ವಿಷಪೂರಿತ ನಾಗರಹಾವಿಗೆ ಚಿಕಿತ್ಸೆ ನೀಡಿ ಗಮನ ಸೆಳೆದ ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕ

ಪಾರಂಪರಿಕ ಪದ್ದತಿಗಳ ಪುನರಾರಂಭ:  ನಾಡಹಬ್ಬಕ್ಕೆ ಸಂಬಂಧಿಸಿದಂತೆ ಹಿಂದೆ ಅನುಸರಿಸುತ್ತಿದ್ದ ಗಜಪಯಣ ಸೇರಿದಂತೆ ಪಾರಂಪರಿಕ ಪದ್ದತಿಗಳನ್ನು ಪುನ: ಪ್ರಾರಂಭಿಸಲಾಗುವುದು ಎಂದರು. ಇದರಿಂದ ಸ್ಥಳೀಯ ಹಾಗೂ ಗ್ರಾಮೀಣ ಭಾಗದ ಜನರು ತೊಡಗಿಕೊಂಡಂತಾಗುತ್ತದೆ ಎಂದು ತಿಳಿಸಿದರು.

ವಸ್ತುಪ್ರದರ್ಶನ: ದಸರಾ ಹಬ್ಬಕ್ಕೆ 15 ದಿನಗಳ ಮುನ್ನವೇ ವಸ್ತು ಪ್ರದರ್ಶನ ಉದ್ಘಾಟಿಸಲು ಸೂಚಿಸಲಾಗಿದೆ ಎಂದರು.

ಶ್ರೀರಂಗಪಟ್ಟಣ ಹಾಗೂ ಚಾಮರಾಜನಗರ ದಸರಾಕ್ಕೆ ತಲಾ 1.00 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಿದೆ.

ಅನುದಾನ: ಅರಮನೆ ಆಡಳಿತ ಮಂಡಳಿಯು ಅರಮನೆ ವ್ಯಾಪಿಯೊಳಗಿನ ವೆಚ್ಚವನ್ನು ಭರಿಸಲಿದೆ. ಮೂಡಾ ವತಿಯಿಂದ 10 ಕೋಟಿ ರೂ.ಗಳನ್ನು ಒದಗಿಸಲಾಗುತ್ತಿದೆ. ಈ ಬಾರಿ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆಯಡಿಯಲ್ಲಿ ಅನುದಾನ ಬಳಕೆ ಮಾಡುವ  ಬಗ್ಗೆ  ತೀರ್ಮಾನಿಸಲಾಗಿದೆ. ಉಳಿದ ಮೊತ್ತವನ್ನು ಸರ್ಕಾರ ಭರಿಸಲಿದೆ ಎಂದರು.

ಸ್ಥಳೀಯ ಮತ್ತು ರಾಷ್ಟ್ರಮಟ್ಟದ ಕಲಾವಿದರಿಗೆ ಪ್ರೋತ್ಸಾಹ: ಸ್ಥಳೀಯ ಕಲಾವಿದರಿಗೆ  ಅವಕಾಶ ನೀಡುವುದರ ಜೊತೆ ಪ್ರತಿನಿತ್ಯ ಒಬ್ಬ ರಾಷ್ಟ್ರಮಟ್ಟದಲ್ಲಿ ಖ್ಯಾತಿಯಳ್ಳ ಕಲಾವಿದರಿಂದ  ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಅದ್ಧೂರಿ ದಸರಾ:

ಎರಡು ವರ್ಷಗಳಿಂದ ಸಾಂಪ್ರದಾಯಿಕ ಸರಳ ದಸರಾ ಆಚರಿಸಲಾಗಿದೆ. ಈ ಬಾರಿ ವಿಜೃಂಭಣೆಯಿಂದ ದಸರಾ ಆಚರಿಸಬೇಕೆಂಬ ಎಲ್ಲರ ಅಭಿಪ್ರಾಯವನ್ನು  ಸರ್ಕಾರ ಮನ್ನಿಸಿದೆ. ಸೆಪ್ಟೆಂಬರ್ 26, 2022 ರಂದು ನವರಾತ್ರಿ   ನವರಾತ್ರಿ ದಸರಾ ಪ್ರಾರಂಭ. ಅಕ್ಟೋಬರ್  5 ವಿಜಯದಶಮಿಯಂದು ನಂದಿಧ್ವಜ ಪೂಜೆ, ಪುಷ್ಪಾರ್ಚನೆ, ಏಳು ಮತ್ತು ಎಂಟರಂದು ವೀರಹೊಸಹಳ್ಳಯಿಂದ ಗಜಪಯಣ ಪ್ರಾರಂಭ, ಗಜಪಡೆಯ ನಿರ್ಗಮನದ  ಬಗ್ಗೆ ತೀರ್ಮಾನಿಸಲಾಗಿದೆ ಎಂದರು.

ಟಾಪ್ ನ್ಯೂಸ್

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.