ದಸರಾ ಫಲಪುಷ್ಪ ಪ್ರದರ್ಶನಕ್ಕೆ ತಾರಾ ಮೆರಗು
Team Udayavani, Sep 20, 2017, 10:14 AM IST
ಮೈಸೂರು: ದಸರಾ ಹಿನ್ನೆಲೆಯಲ್ಲಿ ನಗರದ ನಿಶಾದ್‌ಬಾಗ್ (ಕುಪ್ಪಣ್ಣ ಪಾರ್ಕ್)ನಲ್ಲಿ ಶನಿವಾರದಿಂದ ಅ.1ರವರೆಗೆ ಫಲ ಪುಷ್ಪ ಪ್ರದರ್ಶನ ನಡೆಯಲಿದ್ದು, ಫಲಪುಷ್ಪ ಪ್ರದರ್ಶನದ ವೇದಿಕೆಯಲ್ಲಿ ಪ್ರತಿನಿತ್ಯ ಸಂಜೆ ಸಿನಿಮಾ ತಾರೆಯರು ವಿವಿಧ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ.
ಸೆ.24ರಂದು ಯೋಗೋತ್ಸವ: ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಸೆ.24 ರಂದು ಬೆಳಗ್ಗೆ 6 ಗಂಟೆಯಿಂದ 8 ಗಂಟೆಯವರೆಗೆ ಯೋಗೋತ್ಸವ ಕಾರ್ಯ ಕ್ರಮ ನಡೆಯಲಿದ್ದು, ಸುಮಾರು 5 ಸಾವಿರ ಜನರನ್ನು ನಿರೀಕ್ಷಿಸಲಾಗಿದೆ. 25 ರಿಂದ 28 ಆಸನಗಳನ್ನು ಈ ವೇಳೆ
ಪ್ರದರ್ಶಿಸಲಾಗುವುದು.
ಬಿಗಿ ಪೊಲೀಸ್ ಬಂದೋಬಸ್ತ್: ದಸರಾ ಮಹೋತ್ಸವದ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು 5056 ಪೊಲೀಸರನ್ನು ಭದ್ರತೆಗೆ ನಿಯೋಜಿಸ ಲಾಗುತ್ತಿದೆ. ಭದ್ರತೆಗಾಗಿ ನಗರದಲ್ಲಿ ಈಗಾಗಲೇ ಅಳವಡಿಸಿ
ರುವ ಕಾಯಂ ಸಿಸಿ ಕ್ಯಾಮರಾಗಳ ಜತೆಗೆ ತಾತ್ಕಾಲಿಕವಾಗಿ ಅರಮನೆ, ಬನ್ನಿಮಂಟಪ ಮೈದಾನ, ಜಂಬೂಸವಾರಿ ಮೆರವಣಿಗೆ ಸಾಗುವ ಮಾರ್ಗ ಮತ್ತು ಇತರ ಸ್ಥಳಗಳಲ್ಲಿ ಒಟ್ಟು 66 ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.
ಬೆಟ್ಟಕ್ಕೆ ಖಾಸಗಿ ವಾಹನ ಪ್ರವೇಶ ನಿರ್ಬಂಧ: ಸೆ.22 ರಿಂದ 24 ಹಾಗೂ ಸೆ.28ರಿಂದ ಅ.2ರವರೆಗೆ ಪ್ರತಿದಿನ ಬೆಳಗ್ಗೆ 6 ರಿಂದ ರಾತ್ರಿ 9.30ರವರೆಗೆ ಖಾಸಗಿ ವಾಹನಗಳನ್ನು ತಾವರೆ ಕಟ್ಟೆಯಿಂದ ಚಾಮುಂಡಿಬೆಟ್ಟಕ್ಕೆ ಸಂಚರಿಸುವುದನ್ನು ನಿರ್ಬಂಧಿಸಲಾಗಿದೆ. ಜೊತೆಗೆ, ಲಲಿತ ಮಹಲ್ ಹೆಲಿಪ್ಯಾಡ್
ಬಳಿಯಿಂದ ಚಾಮುಂಡಿ ಬೆಟ್ಟಕ್ಕೆ ಉಚಿತ ಸಾರಿಗೆ ಬಸ್ಸುಗಳ ಸೇವೆ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.