ಬಹುನಿರೀಕ್ಷಿತ ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ
ಮೂರು ದಿನಗಳ ಕಾಲ ಸಮ್ಮೇಳನ ನಡೆಸುವುದಕ್ಕೆ ರಾಜ್ಯ ಸರಕಾರ ನಿರ್ಧಾರ
Team Udayavani, Oct 12, 2022, 6:14 PM IST
ಬೆಂಗಳೂರು : ಬಹುನಿರೀಕ್ಷಿತ ಹಾವೇರಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿಯಾಗಿದೆ. ಜನವರಿ 6,7,8 ರಂದು ಮೂರು ದಿನಗಳ ಕಾಲ ಸಮ್ಮೇಳನ ನಡೆಸುವುದಕ್ಕೆ ರಾಜ್ಯ ಸರಕಾರ ಬುಧವಾರ ನಿರ್ಧರಿಸಿದೆ.
ಕನ್ನಡ ಮತ್ತು ಸಂಸ್ಕ್ರತಿ, ಇಂಧನ ಸಚಿವ ವಿ ಸುನಿಲ್ ಕುಮಾರ್, ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ , ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಷಿ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆ ಬಳಿಕ ದಿನಾಂಕ ನಿಗದಿ ಮಾಡಿದ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಅನುಮೋದನೆ ಪಡೆದು ಸಚಿವ ಸುನೀಲ್ ಕುಮಾರ್ ದಿನಾಂಕ ಘೋಷಣೆ ಮಾಡಿದ್ದಾರೆ.
ಈ ಸಮ್ಮೇಳನದಲ್ಲಿ 8 ರಿಂದ 10 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಬಹಳ ಅದ್ದೂರಿಯಾಗಿ 86 ನೇ ಸಾಹಿತ್ಯ ಸಮ್ಮೇಳನವನ್ನು ನಡೆಸುವುದಕ್ಕೆ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಈ ಸಂಬಂಧ ಜಿಲ್ಲಾಡಳಿತ ಹಾಗೂ ಸ್ವಯಂ ಸೇವಕರ ಜತೆಗೆ ಚರ್ಚೆ ನಡೆಸುವುದಕ್ಕಾಗಿ ಅಕ್ಟೋಬರ್ 20 ರಂದು ಹಾವೇರಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಲಾಗುವುದು. ಯಾವುದೇ ನ್ಯೂನ್ಯತೆ ಇಲ್ಲದಂತೆ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು ಎಂದು ಸುನಿಲ್ ಕುಮಾರ್ ತಿಳಿಸಿದರು.
ಸಮ್ಮೇಳನ ಹಿನ್ನೆಲೆಯಲ್ಲಿ 45 ದಿನಗಳ ಕಾಲ ಕನ್ನಡ ರಥ ಇಡಿ ರಾಜ್ಯಾದ್ಯಂತ ಮೆರವಣಿಗೆ ನಡೆಸುತ್ತದೆ. 30 ರಿಂದ 40 ಸಾವಿರ ಜನರಿಗೆ ವಸತಿ ವ್ಯವಸ್ಥೆ ಮಾಡಲಾಗುತ್ತದೆ. ಪ್ರತಿ ದಿನ 2.50 ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತದೆ. 86 ನೇ ಕನ್ನಡ ಸಾಹಿತ್ಯ ಸಮ್ಮೇಳನವಾಗಿರುವುದರಿಂದ 86 ಸಾಧಕರಿಗೆ ಈ ಬಾರಿ ಸನ್ಮಾನಿಸಲಾಗುತ್ತದೆ ಎಂದು ಹೇಳಿದರು.
ಸಮ್ಮೇಳನದ ಭಾಗವಾಗಿ 20 ಕ್ಕೂ ಹೆಚ್ಚು ಉಪಸಮಿತಿಗಳನ್ನು ರಚನೆ ಮಾಡಲಾಗುತ್ತದೆ. ನಾನಾ ಗೋಷ್ಠಿಗಳು, ಪುಸ್ತಕ ಪ್ರದರ್ಶನದ ಜತೆಗೆ ಸಾಹಿತ್ಯಕ್ಕೆ ಸಂಬಂಧಪಟ್ಟ ಅನೇಕ ಚಟುವಟಿಕೆಗಳು ನಡೆಯುತ್ತವೆ ಎಂದು ಹೇಳಿದರು.
ಉದ್ಘಾಟನೆಗೆ 50 ಸಾವಿರ ಜನ
ಉದ್ಘಾಟನಾ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲಾಗುವುದು. ಸುಮಾರು 50 ಸಾವಿರ ಜನರು ಕುಳಿತುಕೊಳ್ಳುವ ಸಾಮರ್ಥ್ಯ ಇರುವ ಬೃಹತ್ ಸಭಾಂಗಣ ನಿರ್ಮಿಸಲಾಗಿವುದು. ಹಿಂದೆಂದೂ ಕಾಣದಷ್ಟು ಅಚ್ಚುಕಟ್ಟಾಗಿ ಸಮ್ಮೇಳನ ಯಶಸ್ವಿಗೊಳಿಸುವುದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.