ಡಿ. 12-21: ದತ್ತಮಾಲಾ ಅಭಿಯಾನ

Team Udayavani, Dec 11, 2018, 10:02 AM IST

datta.jpg

ಮಂಗಳೂರು: ಹಿಂದೂಗಳ ಶ್ರದ್ಧಾ ಕೇಂದ್ರವಾದ ಚಿಕ್ಕಮಗಳೂರಿನ ದತ್ತಪೀಠದಲ್ಲಿ ದತ್ತಜಯಂತಿ ಅಂಗವಾಗಿ ದತ್ತ ಮಾಲಾ ಅಭಿಯಾನ ಡಿ. 12ರಿಂದ 21ರ ವರೆಗೆ ನಡೆಯಲಿದ್ದು, ಡಿ. 22ರಂದು ಮಾಲಾಧಾರಿಗಳು ದತ್ತ ಪೀಠಕ್ಕೆ ತೆರಳಿ ದತ್ತ ಪಾದುಕೆ ದರ್ಶನ ಅಭಿಯಾನ ಕೈಗೊಳ್ಳಲಿದ್ದಾರೆ.

ಈ ಅಭಿಯಾನದಲ್ಲಿ ರಾಜ್ಯದಿಂದ 50 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಜರರಂಗದಳ ದಕ್ಷಿಣ ಪ್ರಾಂತದ ಪ್ರಾಂತ ಸಂಯೋಜಕ್‌ ಸುನೀಲ್‌ ಕೆ.ಆರ್‌. ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಡಿ. 20ರಂದು ದತ್ತಪೀಠದಲ್ಲಿ ಅನುಸೂಯ ದೇವಿ ಪೂಜೆ, ಗಣಪತಿ ಹೋಮ ಮತ್ತು ದುರ್ಗಾಹೋಮ, ಬೆಳಗ್ಗೆ 9.30ಕ್ಕೆ ಮಹಿಳೆಯರಿಂದ ಸಂಕೀರ್ತನಾಯಾತ್ರೆ ಮತ್ತು ದತ್ತಪೀಠ ದರ್ಶನ ನಡೆಯಲಿದೆ. ಡಿ. 21ರಂದು ಗಣಪತಿ ಹೋಮ, ರುದ್ರಹೋಮ ಹಾಗೂ ಚಿಕ್ಕಮಗಳೂರು ನಗರದಲ್ಲಿ ಶೋಭಾಯಾತ್ರೆ, ಸಾರ್ವಜನಿಕ ಸಭೆ, ಡಿ. 22ರಂದು ದತ್ತಜಯಂತಿಯಂದು ಗಣಪತಿ ಹೋಮ, ದತ್ತಹೋಮ ಹಾಗೂ ದತ್ತಪೀಠ, ದತ್ತಪಾದುಕೆ ದರ್ಶನ ನಡೆಯಲಿದೆ ಎಂದರು.

ಬಜರಂಗದಳ ದಕ್ಷಿಣ ಪ್ರಾಂತದ ಪ್ರಾಂತ ಸಹಸಂಯೋಜಕ ಮುರಳಿ ಹಸಂತ್ತಡ್ಕ ಮಾತನಾಡಿ, ದತ್ತಮಾಲಾ ಅಭಿಯಾನದಲ್ಲಿ ಮಂಗಳೂರು, ಉಡುಪಿ, ಪುತ್ತೂರು, ಕೊಡಗು ಮತ್ತು ಕಾಸರಗೋಡು ಜಿಲ್ಲೆಗಳಿಂದ ಒಟ್ಟು 15 ಸಾವಿರ ದತ್ತಮಾಲಾಧಾರಿಗಳು ಪಾಲ್ಗೊಳ್ಳಲಿದ್ದಾರೆ. ಡಿ. 12ಕ್ಕೆ ನೂರಾರು ಕಾರ್ಯಕರ್ತರು ಮಾಲಾಧಾರಣೆ ಮಾಡುವ ಮೂಲಕ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಮಂಗಳೂರಿನ ವಿಶ್ವಶ್ರೀ ಕಾರ್ಯಾಲಯ, ಉಡುಪಿ ಜಿಲ್ಲೆಯಲ್ಲಿ ಕೃಷ್ಣ ಮಠದಲ್ಲಿ, ಪುತ್ತೂರು ಮಹಾಲಿಂಗೇಶ್ವರ ಸನ್ನಿಧಾನ, ಕೊಡಗಿನ ಓಂಕಾರೇಶ್ವರ ಸನ್ನಿಧಾನ, ಕಾಸರಗೋಡಿನ ಹೊಸಂಗಡಿ ಕಾರ್ಯಾಲಯದಲ್ಲಿ ಬಜರಂಗದಳ ಕಾರ್ಯಕರ್ತರು ಮಾಲೆ ಧಾರಣೆ ಮಾಡಲಿದ್ದಾರೆ ಎಂದರು. ಬಜರಂಗದಳ ವಿಭಾಗ ಸಂಯೋಜಕ್‌ ಭುಜಂಗ ಕುಲಾಲ್‌, ಜಿಲ್ಲಾ ಸಂಯೋಜಕ್‌ ಪ್ರವೀಣ್‌ ಕುತ್ತಾರ್‌, ಜಿಲ್ಲಾ ಸಹಸಂಯೋಜಕ್‌ ಪುನೀತ್‌ ಅತ್ತಾವರ, ಮುಖಂಡ ಶ್ರೀಧರ್‌ ತೆಂಕಿಲ ಉಪಸ್ಥಿತರಿದ್ದರು.
 
ಆಗ್ರಹಗಳು
ದತ್ತಪೀಠಕ್ಕೆ ಒಬ್ಬ ಶಾಶ್ವತ ಹಿಂದೂ ಕಾರ್ಯನಿರ್ವಹಣಾಧಿಕಾರಿಯನ್ನು  ನೇಮಿಸಬೇಕು, ದತ್ತಪೀಠದಲ್ಲಿ ಇಸ್ಲಾಂನ ಯಾವುದೇ ಚಟುವಟಿಕೆ ಗಳಿಗೆ ಅವಕಾಶ ನೀಡಬಾರದು, ಇಸ್ಲಾಂ ವಿಧಾನಗಳು ಮತ್ತು ಗೋರಿ ಗಳನ್ನು ನಾಗೇಹಳ್ಳಿಯಲ್ಲಿರುವ ಮೂಲ ಬಾಬಾಬುಡಾನ್‌ ದರ್ಗಾಕ್ಕೆ ವರ್ಗಾಯಿಸಬೇಕು, ಗುರು ದತ್ತಾತ್ರೇಯ ಪೀಠ ಮತ್ತು ಪರಿಸರವನ್ನು ಹಿಂದೂಗಳ ಪುಣ್ಯಕ್ಷೇತ್ರವೆಂದು ಘೋಷಿಸಬೇಕು, ದತ್ತಪೀಠದಲ್ಲಿದ್ದ ಅಮೂಲ್ಯ ವಿಗ್ರಹಗಳು, ಕಾಣೆಯಾಗಿರುವ ಕಾಣಿಕೆ ವಸ್ತುಗಳು ಮತ್ತು ಆಸ್ತಿಪಾಸ್ತಿ ಅಕ್ರಮ ಹಸ್ತಾಂತರ ಹಾಗೂ ಮಾರಾಟವಾಗಿದ್ದರ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಂಡು ಅವುಗಳನ್ನು ಮರುಸ್ಥಾಪಿಸಬೇಕು, ದತ್ತಪೀಠಕ್ಕೆ ಬರುವ ಹಿಂದೂ ಭಕ್ತರಿಗೆ, ಸ್ವಾಮೀಜಿಗಳಿಗೆ ಪೂಜೆಗೆ ಸೂಕ್ತ ಅವಕಾಶ ಕಲ್ಪಿಸಿಕೊಡಬೇಕು ಎಂದು ಸರಕಾರಕ್ಕೆ ಆಗ್ರಹದೊಂದಿಗೆ ದತ್ತಮಾಲಾ ಅಭಿಯಾನ ನಡೆಯಲಿದೆ ಎಂದು ಸುನೀಲ್‌ ಕೆ.ಆರ್‌. ಹೇಳಿದರು.

ಅರ್ಚಕರ ನೇಮಕ,  ತ್ರಿಕಾಲ ಪೂಜೆ  ನಡೆಯಲಿ 
ಹಿಂದೂಗಳ ಶ್ರದ್ಧಾ ಕೇಂದ್ರವಾದ ದತ್ತಪೀಠದಲ್ಲಿ ಹಿಂದೂ ಅರ್ಚಕರನ್ನು ನೇಮಿಸುವಂತೆ ಕೋರ್ಟ್‌ ಸರಕಾರಕ್ಕೆ ಸೂಚಿಸಿತ್ತು. ಆದರೆ ಸರಕಾರ ಈವರೆಗೆ ಅರ್ಚಕರನ್ನು ನೇಮಿಸಿಲ್ಲ. ಶಾಖಾದ್ರಿಯವರೇ ತೀರ್ಥ, ಪ್ರಸಾದ ನೀಡುತ್ತಿದ್ದಾರೆ. ಇದು ಬದಲಾಗಬೇಕು. ಸರಕಾರ ಅರ್ಚಕರನ್ನು ನೇಮಿಸಿ ಪ್ರತಿದಿನ ತ್ರಿಕಾಲ ಪೂಜೆ ನಡೆಯುವಂತಾಗಬೇಕು ಎಂದು ಸುನೀಲ್‌ ಕೆ.ಆರ್‌. ತಿಳಿಸಿದರು. 

ಟಾಪ್ ನ್ಯೂಸ್

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

war alert in sweden and finland

ಯುದ್ಧ ಸನ್ನದ್ಧರಾಗಿ: ನಾಗರಿಕರಿಗೆ ಸ್ವೀಡನ್‌, ಫಿನ್‌ ಲ್ಯಾಂಡ್‌ ಎಚ್ಚರಿಕೆ!

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BIMS: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ: ಕುಟುಂಬಿಕರ ಪ್ರತಿಭಟನೆ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

BBK11: ಮಂಜು ಮಾತಿಗೆ ಕೆರಳಿ ಕೆಂಡವಾದ ಶೋಭಾ; ಒಂದೇ ದಿನದಲ್ಲಿ ಡಾಮಿನೇಟ್ ಆಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brahmavar

Mangaluru: ಕಾರು ಢಿಕ್ಕಿ; ಕಾರ್ಮಿಕ ಮೃತ್ಯು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

9

Mangaluru: ಬೊಂದೇಲ್‌-ಕಾವೂರು ರಸ್ತೆಯಲ್ಲಿಲ್ಲ ಫುಟ್‌ಪಾತ್‌

5

Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ

4

Mangaluru: ಪಿಲಿಕುಳದಲ್ಲಿ ಚಿಟ್ಟೆಪಾರ್ಕ್‌; ಪ್ರವಾಸಿಗರಿಗೆ ಹೊಸ ಆಕರ್ಷಣೆ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

cm-sidd

ಡಿ. 5ರಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ?

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.