ದಾವಣಗೆರೆ: ಸಂಚಾರದ ಒತ್ತಡದಲ್ಲಿ ಸಿಲುಕಿದ ರಾಹುಲ್ ಗಾಂಧಿ
Team Udayavani, Aug 3, 2022, 2:21 PM IST
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಮಧ್ಯಾಹ್ನ 2.30ರ ಒಳಗಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬೆಂಗಳೂರಿಗೆ ವಾಪಾಸ್ಸಾಗಿ, ದೆಹಲಿಗೆ ತೆರಳಬೇಕಾಗಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಕೂಡ ಸಂಚಾರದ ಒತ್ತಡದಲ್ಲಿ ಸಿಲುಕಿದ್ದಾರೆ.
ಕೇವಲ ರಾಹುಲ್ ಗಾಂಧಿ ಮಾತ್ರವಲ್ಲದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಕೂಡ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ್ದಾರೆ. ಕಾರ್ಯಕ್ರಮದ ಸ್ಥಳದಿಂದ ಸುಮಾರು 20 ಕಿ.ಮೀ. ದೂರದಲ್ಲಿ ವಾಹನಗಳ ಸಂಚಾರದ ಒತ್ತಡದಿಂದಾಗಿ ಟ್ರಾಫಿಕ್ ಜಾಮ್‍ನಲ್ಲಿ ಸಿಲುಕಿದ್ದರು, ಕೈ ನಾಯಕರೂ ಸಹ ಟ್ರಾಫಿಕ್ ಜಾಮ್ ಬಿಸಿ ಅನುಭವಿಸಿದ್ದಾರೆ.
ಕಾರ್ಯಕ್ರಮದ ಸ್ಥಳಕ್ಕೆ ಚಿತ್ರದುರ್ಗದಿಂದ ದಾವಣಗೆರೆ ಕಡೆಗೆ ಆಗಮಿಸಿದ ರಾಹುಲ್ ಗಾಂಧಿ ಇತರರು ದಾವಣಗೆರೆಗಿಂತ ಮುಂಚೆಯೇ ಇರುವ ಆವರಗೆರೆಯ ರಾಷ್ಟ್ರೀಯ ಹೆದ್ದಾರಿಯಿಂದಲೂ ಟ್ರಾಫಿಕ್ ಜಾಮ್ ಆಗಿದೆ. ಕೇವಲ ವಾಹನಗಳು ಮಾತ್ರವಲ್ಲದೇ ಸಮಾರಂಭಕ್ಕೆ ಜನರು ರಸ್ತೆ ಮೂಲಕವೇ ಸಾಗುತ್ತಿರುವ ಕಾರಣ ಭದ್ರತೆ, ಝೀರೋ ಟ್ರಾಫಿಕ್‍ನಲ್ಲಿ ಸಾಗಬೇಕಾಗಿದ್ದ ಕೈ ವರಿಷ್ಠರು ಟ್ರಾಫಿಕ್‍ನಲ್ಲಿ ಸಿಲುಕಿದ್ದಾರೆ.
ಕಾರಣ ಅವರು ಕಾರ್ಯಕ್ರಮಕ್ಕೆ ಬರುವುದು ತಡವಾಗಲಿದೆ. ಅಲ್ಲದೇ ಕಾರ್ಯಕ್ರಮ ಮುಗಿಸಿಕೊಂಡು ಹೋಗುವುದು ನಿಗಧಿತ ಅವಧಿಯಲ್ಲಿ ನವದೆಹಲಿಗೆ ತೆರಳುವುದು ಅಸಾಧ್ಯ ಎನ್ನಲಾಗುತ್ತಿದೆ. ಈ ಮಧ್ಯೆ ದಾವಣಗೆರೆಯ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯವರನ್ನು ಬೇರೊಂದು ಮಾರ್ಗದ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ಕರೆತರಲು ಪ್ರಯತ್ನ ಮಾಡುತ್ತಿದ್ದಾರೆ.
ಪೊಲೀಸರ ಹರಸಾಹಸ
ರಾಹುಲ್ ಗಾಂಧಿ ಅವರು ಸಂಚಾರದ ಒತ್ತಡದಿಂದಾಗಿ ಕಾರ್ಯಕ್ರಮದ ಸ್ಥಳಕ್ಕೆ ತಡವಾಗಿ ಆಗಮಿಸಿದರೂ ಸಹ ವೇದಿಕೆ ಬಳಿ ಸಾಗಲು ಹರಸಾಹಸ ಪಡಬೇಕಾಯಿತು. ಪೊಲೀಸರು ದಾರಿ ಮಾಡಿಕೊಡಲು ಪ್ರಯತ್ನ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.