ಹಿಂದೂ ಮಹಾಸಾಗರ ಪ್ರವೇಶಿಸಿದ ಚೀನದ ಬೇಹುಗಾರಿಕಾ ನೌಕೆ
10, 11ಕ್ಕೆ ಒಡಿಶಾದಲ್ಲಿ ಕ್ಷಿಪಣಿ ಪರೀಕ್ಷೆ ನಡೆಯಲಿರುವಂತೆಯೇ ಬೆಳವಣಿಗೆ
Team Udayavani, Nov 4, 2022, 10:28 PM IST
ನವದೆಹಲಿ: ಭಾರತದ ಯೋಜಿತ ಕ್ಷಿಪಣಿ ಪರೀಕ್ಷೆಯ ದಿನ ಸಮೀಪಿಸುತ್ತಿದ್ದಂತೆ, ಹಿಂದೂ ಮಹಾಸಾಗರಕ್ಕೆ ಚೀನ ಮತ್ತೊಂದು ಬೇಹುಗಾರಿಕಾ ಹಡಗನ್ನು ಕಳುಹಿಸಿಕೊಟ್ಟಿದೆ.
ಶ್ರೀಲಂಕಾದ ಹಂಬಂತೋಟ ಬಂದರಿನಲ್ಲಿ ಚೀನ ಗೂಢಚರ್ಯೆ ನೌಕೆಯೊಂದನ್ನು ನಿಯೋಜಿಸಿದ ಮೂರು ತಿಂಗಳಲ್ಲೇ ಈ ಬೆಳವಣಿಗೆ ನಡೆದಿದೆ.
ಚೀನದ ಈ ಹೊಸ ಬೇಹುಗಾರಿಕಾ ಹಡಗು ಯುವಾನ್ ವಾಂಗ್ 6ನ ಚಲನವಲನಗಳನ್ನು ಭಾರತೀಯ ನೌಕಾಪಡೆಯು ಸಕ್ರಿಯವಾಗಿ ಟ್ರ್ಯಾಕ್ ಮಾಡುತ್ತಿದೆ ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ.
ಕ್ಷಿಪಣಿ ಪರೀಕ್ಷೆಗಳು ಮತ್ತು ಉಪಗ್ರಹಗಳ ಚಲನವಲನಗಳ ಮೇಲೆ ನಿಗಾ ಇಡುವಂತೆಯೇ ಎರಡೂ ಹಡಗುಗಳನ್ನು ವಿನ್ಯಾಸಗೊಳಿಸಲಾಗಿದೆ.
ಯುವಾನ್ ವಾಂಗ್ 6 ನೌಕೆ ಈಗಾಗಲೇ ಹಿಂದೂ ಮಹಾಸಾಗರವನ್ನು ಪ್ರವೇಶಿಸಿದ್ದು, ಇಂಡೋನೇಷ್ಯಾದ ಬಾಲಿ ಕರಾವಳಿಯಾಚೆ ತಲುಪಿದೆ.
ಒಡಿಶಾ ಕರಾವಳಿಯಾಚೆ ನ.10-11ರ ವೇಳೆಗೆ 2,200 ಕಿ.ಮೀ. ವ್ಯಾಪ್ತಿಯ ಕ್ಷಿಪಣಿಯೊಂದನ್ನು ಪರೀಕ್ಷಿಸಲು ಭಾರತ ಸಿದ್ಧವಾಗುತ್ತಿರುವಂತೆಯೇ ಚೀನ ಗುಟ್ಟಾಗಿ ಈ ನೌಕೆಯನ್ನು ಕಳುಹಿಸಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.