ಪ್ರೇಮಿಗಳ ದಿನದಂದೇ ಡೀಸಿ, ಸಿಇಒ ವಿವಾಹ
Team Udayavani, Feb 3, 2019, 1:36 AM IST
ದಾವಣಗೆರೆ: ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್, ಜಿಲ್ಲಾ ಪಂಚಾಯತ್ ಸಿಇಒ ಎಸ್. ಅಶ್ವತಿ ಅವರು ಫೆ. 14ರ ಪ್ರೇಮಿಗಳ ದಿನದಂದು ಕೇರಳದ ಕಲ್ಲಿಕೋಟೆಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಮೂಲತಃ ಆಂಧ್ರ ಪ್ರದೇಶದ ವಿಶಾಖಪಟ್ಟಣಂ (ವೈಜಾಗ್)ನ ಡಾ| ಬಗಾದಿ ಗೌತಮ್ ಕಾಕಿನಾಡಿನ ರಂಗರಾಯ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ಪದವಿ ನಂತರ ಭಾರತ ಸೇವಾ ಆಯೋಗದ ಪರೀಕ್ಷೆ ಬರೆದವರು. 2009ನೇ ಬ್ಯಾಚ್ ಐಎಎಸ್ ಅಧಿಕಾರಿ ಯಾಗಿರುವ ಅವರು ಬೆಳಗಾವಿ ಜಿ.ಪಂ. ಸಿಇಒ, ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ 4 ತಿಂಗಳ ಹಿಂದೆ ದಾವಣಗೆರೆ ಡೀಸಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಕೇರಳದ ಕಲ್ಲಿಕೋಟೆಯ ನಿವಾಸಿ ಎಸ್. ಅಶ್ವತಿ 2013ನೇ ಸಾಲಿನ ಐಎಎಸ್ ಅಧಿಕಾರಿ. ಮಣಿಪಾಲದಲ್ಲಿ ಎಂಬಿಎ ಮುಗಿಸಿದ ನಂತರ ಐಎಎಸ್ ಪರೀಕ್ಷೆ ಬರೆದಿದ್ದರು. ಡಾ| ಬಗಾದಿ ಗೌತಮ್ ಮತ್ತು ಎಸ್. ಅಶ್ವತಿ ಅವರದ್ದು ನಾಲ್ಕು ವರ್ಷದ ಗೆಳೆತನ. ಈಗ ಪ್ರೇಮಿಗಳ ದಿನದಂದೇ ಇಬ್ಬರೂ ವಿವಾಹ ಬಂಧನಕ್ಕೆ ಒಳಗಾಗಲಿದ್ದಾರೆ. ಫೆ. 14 ರ ಗುರುವಾರ ಬೆಳಗ್ಗೆ 10ಕ್ಕೆ ಎಸ್.ಅಶ್ವತಿಯವರ ತವರೂರು ಕಲ್ಲಿಕೋಟೆಯ ಟ್ಯಾಗೋರ್ ಹಾಲ್‌ನಲ್ಲಿ ವಿವಾಹ ಮಹೋತ್ಸವ ನಡೆಯಲಿದೆ. ಫೆ. 17 ರಂದು ವಿಶಾಖಪಟ್ಟಣಂನ ಪಾರ್ಕ್ ಹೋಟೆಲ್‌ನಲ್ಲಿ ಆರತಕ್ಷತೆ ಆಯೋಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
MUST WATCH
ಹೊಸ ಸೇರ್ಪಡೆ
Maharastra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.