ಡಿಸಿಇಟಿ: ಪ್ರವೇಶ ಪರೀಕ್ಷೆ ಅಂಕ 100ಕ್ಕೆ ಇಳಿಕೆ: ಈ ವರ್ಷದಿಂದಲೇ ಹೊಸ ನಿಯಮ

ಪ್ರಶ್ನೆಪತ್ರಿಕೆ ಬಗ್ಗೆ ಅಧಿಸೂಚನೆ ವೇಳೆಗೆ ಅಂತಿಮ

Team Udayavani, Sep 18, 2022, 7:40 AM IST

ಡಿಸಿಇಟಿ: ಪ್ರವೇಶ ಪರೀಕ್ಷೆ ಅಂಕ 100ಕ್ಕೆ ಇಳಿಕೆ: ಈ ವರ್ಷದಿಂದಲೇ ಹೊಸ ನಿಯಮ

ಬೆಂಗಳೂರು: ಡಿಪ್ಲೊಮಾ ಸಿಇಟಿ (ಡಿಸಿಇಟಿ) ಕೋರ್ಸ್‌ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮಹತ್ವದ ಬದಲಾವಣೆ ಮಾಡಿದೆ. ಪ್ರವೇಶ ಪರೀಕ್ಷೆ ಅಂಕಗಳನ್ನು 180ರಿಂದ 100ಕ್ಕೆ ಇಳಿಸಿದ್ದು, ಡಿಪ್ಲೊಮೊ ವ್ಯಾಸಂಗಕ್ಕೆ ಅಪ್ಲೆ„ಡ್‌ ವಿಜ್ಞಾನ ಮತ್ತು ಗಣಿತವಿಷಯಗಳನ್ನು ಮಾತ್ರ ಪರಿಗಣಿಸಿ ಎಲ್ಲ ಕೋರ್ಸ್‌ಗಳಿಗೆ ಅನ್ವಯವಾಗು ವಂತೆ ಪರೀಕ್ಷೆ ನಡೆಸಲಿದೆ.

ಯಾವುದೇ ಎಂಜಿನಿಯರಿಂಗ್‌ ವಿಭಾಗದಲ್ಲಿ ಡಿಪ್ಲೊಮಾ ಪದವಿ ಪಡೆದಿರುವ ಅಭ್ಯರ್ಥಿಗಳು ಬೇರೆ ಯಾವುದೇ ಎಂಜಿನಿಯರಿಂಗ್‌ ಪದವಿ ಪ್ರವೇಶಕ್ಕೆ ಅರ್ಹರು ಎಂದು ಅಖೀಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿ ಷತ್ತು (ಎಐಸಿಟಿಇ) 2020ರಲ್ಲಿ ನಿಯಮಗಳನ್ನು ಬದಲಾವಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೂತನ
ನಿಯಮಗಳನ್ನು ಅಳವಡಿಸಿಕೊಳ್ಳಲಾಗಿದೆ. ಆರಂಭಿಕ ಹಂತದಲ್ಲಿ ಡಿಸಿಇಟಿ- 2022ರ ಪರೀಕ್ಷೆಗೆ ಮಾತ್ರ ಪರಿಗಣಿಸಿ ಪರೀಕ್ಷಾ ಪ್ರಾಧಿಕಾರವು ನಿಯಮಗಳನ್ನು ಆದೇಶಿಸಿದೆ.

ಹೊಸ ನಿಯಮಗಳೇನು?
ಡಿಸಿಇಟಿ-2022ರ ಪರೀಕ್ಷೆಯಲ್ಲಿ ಡಿಪ್ಲೊಮಾ ವ್ಯಾಸಂಗದಲ್ಲಿ ಅಭ್ಯಾಸ ಮಾಡಿರುವ ಅಪ್ಲೆ„ಡ್‌ ವಿಜ್ಞಾನ ಮತ್ತು ಗಣಿತ ವಿಷಯಗಳನ್ನು ಮಾತ್ರ ಪರಿಗಣಿಸಿ ಎಲ್ಲ ವಿಷಯ ಗಳಿಗೆ ಅನ್ವಯವಾಗುವಂತೆ ಒಂದು ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಡಿಸಿಇಟಿ-2022ರ ಪರೀಕ್ಷೆಯನ್ನು 100 ಅಂಕಗಳಿಗೆ 3 ಗಂಟೆಯ ಅವಧಿಯ ಪರೀಕ್ಷೆಯನ್ನು ನಡೆಸುವುದು.
ಡಿಪ್ಲೊಮಾ ಅಂತಿಮ ವರ್ಷದ 5 ಮತ್ತು 6ನೇ ಸೆಮಿಸ್ಟರ್‌ ಪರೀಕ್ಷೆಯ ತೇರ್ಗಡೆಯಾದ ಫ‌ಲಿತಾಂಶವನ್ನು ಪರಿಗಣನೆಗೆ ತೆಗೆದುಕೊಳ್ಳುವುದು. ಡಿಸಿಇಟಿ-2022ರ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು 100 ಅಂಕಗಳಿಗೆ ಗಳಿಸಿದ ಅಂಕಗಳ ಶೇ.50ರಷ್ಟು ಅಂಕಗಳನ್ನು ಪರಿಗಣಿಸುವುದು. ಅದೇ ರೀತಿ ಅಂತಿಮ ವರ್ಷದ ಡಿಪ್ಲೊಮಾ ತೇರ್ಗಡೆಯಾಗಿ ಪಡೆದ ಒಟ್ಟಾರೆ ಅಂಕಗಳ ಶೇ.50ರಷ್ಟು ಅನ್ನು ಪರಿಗಣನೆಗೆ ತೆಗೆದುಕೊಂಡು ಎರಡನ್ನೂ ಸೇರಿಸಿ ವಿದ್ಯಾರ್ಥಿಗಳ ರ್‍ಯಾಂಕ್‌ ಅನ್ನು ನಿಗದಿಪಡಿಸಲಾಗುತ್ತದೆ.

ಪ್ರಶ್ನೆಪತ್ರಿಕೆಯಲ್ಲಿ ಬದಲಾವಣೆ ಏನು?
ಡಿಪ್ಲೊಮಾದಲ್ಲಿ ಬೇರೆ ಬೇರೆ ಕೋರ್ಸ್‌ಗಳನ್ನು ಕಲಿಯುವವರಿಗೆ ವಿಜ್ಞಾನ ಮತ್ತು ಗಣಿತ ವಿಷಯಗಳಿಗೆ ಮಾತ್ರ ಪ್ರಶ್ನೆ ಪತ್ರಿಕೆ ಸಿದ್ಧಪಡಿಸ ಬೇಕಿದೆ. ಈ ಹಿನ್ನೆಲೆಯಲ್ಲಿ 100 ಅಂಕಗಳಲ್ಲಿ ಯಾವ ವಿಷಯಕ್ಕೆ ಎಷ್ಟು ಅಂಕಗಳ ಪ್ರಶ್ನೆಗಳನ್ನು ನೀಡಬೇಕು ಎಂಬುದು ಇನ್ನಷ್ಟೇ ನಿರ್ಣಯ ವಾಗಬೇಕಿದೆ. ಈವರೆಗೆ 180 ಅಂಕಗಳಿಗಿದ್ದ ಪರೀಕ್ಷೆಯನ್ನು 100 ಅಂಕಗಳಿಗೆ ಮತ್ತು ಎಲ್ಲ ಕೋರ್ಸ್‌ಗಳಿಗೆ ಅನ್ವಯ ಆಗಬೇಕಿರುವುದರಿಂದ ಪ್ರಶ್ನೆಪತ್ರಿಕೆ ಮಾದರಿಯನ್ನು ತಜ್ಞರೊಂದಿಗೆ ಚರ್ಚಿಸಿ ಅಧಿಸೂಚನೆ ವೇಳೆಗೆ ವಿದ್ಯಾರ್ಥಿಗಳಿಗೆ ತಿಳಿಸಲಾಗುವುದು ಎಂದು ಕೆಇಎ ಮೂಲಗಳು ತಿಳಿಸಿವೆ.

– ಎನ್‌. ಎಲ್‌. ಶಿವಮಾದು

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.