ಮೂರನೇ ಅಲೆಗೆ ಸರಕಾರದಿಂದ ಸರ್ವಸಿದ್ಧತೆ ಎಂದ ಡಾ.ಸಿ.ಎನ್.‌ಅಶ್ವತ್ಥನಾರಾಯಣ

Team Udayavani, Jul 14, 2021, 1:09 PM IST

ಮೂರನೇ ಅಲೆಗೆ ಸರಕಾರದಿಂದ ಸರ್ವಸಿದ್ಧತೆ ಎಂದ ಡಾ.ಸಿ.ಎನ್.‌ಅಶ್ವತ್ಥನಾರಾಯಣ

ಬೆಂಗಳೂರು: ರಾಜ್ಯ ತಿಂಗಳಿಗೆ 60 ಲಕ್ಷ ಜನರಿಗೆ ಕೋವಿಡ್‌ ಲಸಿಕೆ ನೀಡಲಾಗುತ್ತಿದೆ ಎಂದು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಶೇಷಾದ್ರಿಪುರದ ಮಾರುತಿ ಆಸ್ಪತ್ರೆಯಲ್ಲಿಂದು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮತ್ತು ನೂತನ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಅವರು, ಪ್ರತೀ ತಿಂಗಳೂ ಹಂಚಿಕೆಯಾಗುವ ವ್ಯಾಕ್ಸಿನ್‌ ಕೋಟಾದ ಆಧಾರದಂತೆ ರಾಜ್ಯದಲ್ಲಿ ಲಸಿಕೀಕರಣ ನಡೆಯುತ್ತಿದೆ. ಕೇಂದ್ರ ಸರಕಾರದಿಂದ ಮಾಸಿಕ 60 ಲಕ್ಷ ಲಸಿಕೆ ಹಂಚಿಕೆಯಾಗುತ್ತಿದೆ ಎಂದರು.

ಈ ಹಂಚಿಕೆ ಆಧಾರದಲ್ಲಿಯೇ ರಾಜ್ಯ ಸರಕಾರ ತಿಂಗಳಿಗೆ ರಾಜ್ಯಾದ್ಯಂತ 60 ಲಕ್ಷ ಜನರಿಗೆ ಲಸಿಕೆ ನೀಡುತ್ತಿದೆ. ಕಳೆದ ಜೂನ್‌ ತಿಂಗಳಲ್ಲಿ 60 ಲಕ್ಷ ಜನರಿಗೆ ಲಸಿಕೆ ಕೊಡಲಾಗಿತ್ತು. ಈ ತಿಂಗಳಲ್ಲೂ  ಅಷ್ಟೇ ಪ್ರಮಾಣದ ಜನರಿಗೆ ವ್ಯಾಕ್ಸಿನ್‌ ಕೊಡಲಾಗುವುದು. ಇನ್ನೂ ಹೆಚ್ಚು ಪ್ರಮಾಣದಲ್ಲಿ ಲಸಿಕೀಕರಣ ಮಾಡಲು ಸರಕಾರ ಪ್ರಯತ್ನ ಮಾಡುತ್ತಿದೆ ಎಂದು ಅವರು ಮಾಹಿತಿ ನೀಡಿದರು.

ಮೂರನೇ ಅಲೆ ಬಗ್ಗೆ ಆತಂಕ ಬೇಡ:

ಮೂರನೇ ಅಲೆಯ ಬಗ್ಗೆ ಎಲ್ಲರಿಗೂ ಆತಂಕ ಇರುವುದು ನಿಜ. ಹಾಗಂತ ಹೆದರಬೇಕಿಲ್ಲ. ಈಗಾಗಲೇ ಕೇಂದ್ರದ ನೆರವಿನಿಂದ ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯಗಳನ್ನು ಹೆಚ್ಚಿಸುವ ಕೆಲಸ ಮಾಡಲಾಗುತ್ತಿದೆ. ಆಕ್ಸಿಜನ್‌ ಉತ್ಪಾದನೆ ಮತ್ತು ಸಂಗ್ರಹ, ಐಸಿಯು ಬೆಡ್‌ಗಳ ಸಂಖ್ಯೆ ಹೆಚ್ಚಿಸುವುದು, ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವುದು ಸೇರಿ ಎಲ್ಲ ಅಗತ್ಯ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ಡಿಸಿಎಂ ತಿಳಿಸಿದರು.

ಇದರ ಜತೆಯಲ್ಲೇ ಲಸಿಕೀಕರಣವನ್ನೂ ಹೆಚ್ಚಿಸಲಾಗುತ್ತಿದೆ. ರಾಜ್ಯದಲ್ಲಿ ಕೋವ್ಯಾಕ್ಸಿನ್‌ ಮತ್ತು ಕೋವಿಶೀಲ್ಡ್‌ ಲಸಿಕೆಗಳನ್ನು ಕೊಡಲಾಗುತ್ತಿದೆ. ಕೇಂದ್ರ ಸರಕಾರಕ್ಕೆ ಇನ್ನೂ ಹೆಚ್ಚಿನ ಲಸಿಕೆಗಾಗಿ ಮನವಿ ಸಲ್ಲಿಸಲಾಗಿದೆ. ಅಲ್ಲದೇ, ಲಸಿಕೆ ಕಂಪನಿಗಳಿಗೆ ಉತ್ಪಾದನೆ ಹೆಚ್ಚಿಸುವಂತೆ ಕೋರಲಾಗಿದೆ. ಜತೆಗೆ, ಲಭ್ಯವಾಗುತ್ತಿರುವ ಲಸಿಕೆಯನ್ನೂ ಕ್ಷಮತೆಯಿಂದ ಬಳಸಲಾಗುತ್ತಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಟಾಪ್ ನ್ಯೂಸ್

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

BPL-CARD

Food Department Operation: ಬಿಪಿಎಲ್‌ ಚೀಟಿದಾರರಿಗೆ ಎಪಿಎಲ್‌ ಕಾವು!

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.