ಬೆಂಗಳೂರಿನ ಎ ಎಸ್ ಸಿ ಕೇಂದ್ರದಲ್ಲಿ ಕೋವಿಡ್ ಕೇರ್ ಸೆಂಟರ್ : ಡಾ.ಸಿ.ಎನ್. ಅಶ್ವತ್ಥನಾರಾಯಣ
Team Udayavani, May 18, 2021, 5:43 PM IST
ಬೆಂಗಳೂರು : ನಗರದ ಹಳೆ ವಿಮಾನ ನಿಲ್ದಾಣ ರಸ್ತೆಯ ಕಮಾಂಡ್ ಆಸ್ಪತ್ರೆ ಬಳಿ ಇರುವ ಸೇನೆಗೆ ಸೇರಿದ ಎ ಎಸ್ ಸಿ ಕೇಂದ್ರ ಮತ್ತು ಕಾಲೇಜಿನಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ ಬಗ್ಗೆ ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸೇನಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.
ಮಂಗಳವಾರ(ಮೇ. 18) ಎ ಎಸ್ ಸಿ ಕಮಾಂಡರ್ ಲೆಫ್ಟಿನೆಂಟ್ ಬಿ.ಕೆ.ರೆಸ್ ಪಾಸ್ ವಾಲ್ ಅವರೊಂದಿಗೆ ಚರ್ಚಿಸಿದ ಡಿಸಿಎಂ ಅಶ್ವತ್ಥನಾರಾಯಣ, ಎ ಎಸ್ ಸಿ ಸೆಂಟರ್ ನಲ್ಲಿ ಕೊನೆ ಪಕ್ಷ 500 ಬೆಡ್ ಗಳ ಕೋವಿಡ್ ಕೇಂದ್ರ ಸ್ಥಾಪನೆಯ ಪ್ತಸ್ತಾಪನೆಯನ್ನು ಮುಂದಿಟ್ಟರಲ್ಲದೆ, ಈ ಕೋವಿಡ್ ಕೇರ್‌ಗೆ ಅಗತ್ಯವಾದ ಮೂಲಸೌಕರ್ಯವನ್ನು ಸರಕಾರ ಒದಗಿಸಲಿದೆ. ಸೇನೆ ವತಿಯಿಂದ ವೈದ್ಯರು, ಸಿಬ್ಬಂದಿ ಮತ್ತು ಅರೆವೈದ್ಯ ಸಿಬ್ಬಂದಿಯನ್ನು ಒದಗಿಸುವಂತೆ ಕೋರಿದ್ದಾರೆ.
ಇದನ್ನೂ ಓದಿ : ಭೀಮಾನದಿ ಪಾತ್ರದಲ್ಲಿ ಅನಧಿಕೃತ ಮರಳು ಅಡ್ಡೆಗೆ ದಾಳಿ: 5 ಲಕ್ಷ .ರೂ ಮೌಲ್ಯದ ಮರಳು ವಶ
ಎರಡನೇ ಮತ್ತು ಮೂರನೇ ಅಲೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ಕೇಂದ್ರದಲ್ಲಿ ಕೋವಿಡ್ ಕೇರ್ ಸ್ಥಾಪನೆಗೆ ಅವಕಾಶ ನೀಡಬೇಕು. ವಿವಿಧ ಹಂತಗಳಲ್ಲಿ ಇಲ್ಲಿ ಮೂಲಸೌಕರ್ಯವನ್ನು ಹೆಚ್ಚಿಸಬಹುದು ಎಂದರು.
ಈ ವಿಚಾರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಬಿ.ಕೆ.ರೆಸ್ ಪಾಸ್ ವಾಲ್, ಕೋವಿಡ್ ವಿರುದ್ಧ ಸರಕಾರ ನಡೆಸುತ್ತಿರುವ ಹೋರಾಟಕ್ಕೆ ಸೇನೆಯೂ ಹೆಗಲು ಕೊಡುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಎ ಎಸ್ ಸಿ ಕೇಂದ್ರದಲ್ಲಿ ಕೋವಿಡ್ ಚಿಕಿತ್ಸೆಗೆ ಮಾಡಿಕೊಂಡಿರುವ ಸಿದ್ಧತೆಗಳ ಬಗ್ಗೆ ಲೆಫ್ಟಿನೆಂಟ್ ಬಿ.ಕೆ.ರೆಸ್ ಪಾಸ್ ವಾಲ್ ಅವರು ಡಿಸಿಎಂ ಅವರಿಗೆ ಮಾಹಿತಿ ನೀಡಿದರಲ್ಲದೆ, ಆ ಸೌಲಭ್ಯಗಳನ್ನು ತೋರಿಸಿದರು.
ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಡಿಸಿಎಂ ಕಾರ್ಯದರ್ಶಿ ಪ್ರದೀಪ್ ಪ್ರಭಾಕರ್, ಭಾರತ್ ಸ್ಕೌಟ್ಸ್ & ಗೈಡ್ಸ್‌ನ ರಾಜ್ಯ ಸರಕಾರದ ಸಲಹೆಗಾರರಾದ ಜಿ.ಎಂ.ಬಾಬು ಮುಂತಾದವರು ಇದ್ದರು.
ಇದನ್ನೂ ಓದಿ : ಭಾರತದ ವನಿತಾ ಕ್ರಿಕೆಟ್ ಆಟಗಾರ್ತಿ ಪ್ರಿಯಾ ಪೂನಿಯಾ ತಾಯಿ ಕೋವಿಡ್ ಗೆ ಬಲಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.