ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಧೈರ್ಯ ತುಂಬಿದ ಡಿಸಿಎಂ ಗೋವಿಂದ ಕಾರಜೋಳ
Team Udayavani, Apr 17, 2020, 5:50 PM IST
ಬೆಂಗಳೂರು: ಲಾಕ್ ಡೌನ್ ನಿಂದ ಕಷ್ಟದಲ್ಲಿರುವವರಿಗೆ ಆಶ್ರಯ ತಾಣವಾಗಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಯಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಭೇಟಿ ನೀಡಿ, ಆಶ್ರಯದಲ್ಲಿರುವವರೊಂದಿಗೆ ಸಮಾಲೋಚನೆ ನಡೆಸಿದರು.
ಮಿಜೋರಾಂ, ಈಶಾನ್ಯ ರಾಜ್ಯಗಳು, ಅಂತರ್ ರಾಜ್ಯಗಳಿಂದ ಆಗಮಿಸಿ ಲಾಕ್ ಡೌನ್ ನಿಂದ ಬಾಧಿತರಾಗಿರುವವರಿಗೆ ಆಶ್ರಯ ನೀಡಲಾಗಿರುವ ಜಯನಗರದ ಮಾರೇನಹಳ್ಳಿಯಲ್ಲಿರುವ ವಿದ್ಯಾರ್ಥಿನಿಲಯ ಹಾಗೂ ಎಂ.ಜಿ. ರಸ್ತೆಯಲ್ಲಿರುವ ವಸತಿ ನಿಯಯಕ್ಕೆ ಇಂದು ಭೇಟಿ ನೀಡಿದರು. ಅವರೊಂದಿಗೆ ಸಮಾಲೋಚನೆ ನಡೆಸಿ, ಇಲಾಖೆಯಿಂದ ನೀಡುತ್ತಿರುವ ಸೌಲಭ್ಯಗಳು, ಊಟೋಪಚಾರ, ಆರೈಕೆ, ಆರೋಗ್ಯ ತಪಾಸಣೆ, ಸ್ವಚ್ಚತೆ, ಸಿಬ್ಬಂದಿವರ್ಗದ ನಡವಳಿಕೆಯ ಬಗ್ಗೆ ವಿಚಾಸಿದರು. ಮಾಸ್ಕ್, ಪೇಸ್ಟ್, ಸಾಬೂನು, ಕರವಸ್ತ್ರ, ಟವೆಲ್, ಉಡುಪು, ಔಷಧೋಪಚಾರಗಳ ಗುಣಮಟ್ಟವನ್ನು ಪರಿಶೀಲಿಸಿ, ವಿತರಿಸಿದರು.
ಈ ನಿರಾಶ್ರಿತರಿಗೆ ನೀಡಿರುವ ವಸತಿ ಕೊಠಡಿಗೆ ಭೇಟಿ ನೀಡಿ, ಬೆಡ್, ಬೆಡ್ ಶೀಟ್, ಉಡುಪು, ಸ್ವಚ್ಚತೆಯನ್ನು ಪರಿಶೀಲಿಸಿದರು. ನಂತರ ಅಡುಗೆ ಮನೆಗೆ ಭೇಟಿ, ಸಾಮಗ್ರಿಗಳನ್ನು ಪರಿಶೀಲಿಸಿದರು. ಅಡುಗೆ ತಯಾರಕರೊಂದಿಗೂ ಚರ್ಚಿಸಿ, ಶುದ್ದ ಮತ್ತು ಗುಣಮಟ್ಟದ ಊಟವನ್ನು ನೀಡುವಂತೆ ಸೂಚಿಸಿದರು. ಈ ನಿರಾಶ್ರಿತರಿಗೆ ಆರೋಗ್ಯ ತಪಾಸಣೆ ಮಾಡಿಸಿ, ಔಷಧೋಪಚಾರ ಮಾಡಿಸಿದರು. ಬೋಜನಾಲಯದಲ್ಲಿ ತಾವೇ ತಮ್ಮ ಕೈಯಿಂದಲೇ ಊಟ ಬಡಿಸಿ, ಯಾರೂ ಆತಂಕಕ್ಕೊಳಗಾಗಬಾರದು. ಸರ್ಕಾರದ ನಿರ್ದೇಶನಗಳನ್ನು ಪಾಲಿಸಬೇಕು. ಲಾಕ್ ಡೌನ್ ಅವಧಿ ಮುಗಿಯುವವರೆಗೂ ವಿದ್ಯಾರ್ಥಿ ನಿಲಯಗಳಲ್ಲೇ ವಾಸವಿರಬೇಕು. ಸಾಮಾಜಿಕ ಅಂತರ ಪಾಲಿಸಬೇಕು ಎಂದು ತಿಳಿಸಿದರು.
ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಕುಮಾರ ನಾಯಕ್, ಎಸ್‍ಸಿಪಿ ಟಿಎಸ್‍ಪಿ ಯೋಜನೆಯ ಸಲಹೆಗಾರರಾದ ಶ್ರೀ ಇ. ವೆಂಕಟಯ್ಯ, ಆಯುಕ್ತ ಶ್ರೀ ಪೆದ್ದಪ್ಪಯ್ಯ, ಡಿಸಿಎಂ ಅವರ ಆಪ್ತಕಾರ್ಯದರ್ಶಿ ಶ್ರೀ ವಿ. ಶ್ರೀನಿವಾಸ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.