ರಾಜ್ಯ ಸಾರಿಗೆಗೆ ಇಸ್ರೋ ತಂತ್ರಜ್ಞಾನದ ನೆರವು ಪಡೆಯಲು ಡಿಸಿಎಂ ಸವದಿ ಪ್ರಯತ್ನ
Team Udayavani, Apr 29, 2020, 5:12 PM IST
ಬೆಂಗಳೂರು: ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಸಿಕೊಂಡು ಸಾರಿಗೆ ಇಲಾಖೆಗೆ ಹೊಸ ಸ್ಪರ್ಷ ನೀಡುವ ಕುರಿತು ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಬೆಂಗಳೂರಿನ ಇಸ್ರೋ ಹೆಡ್ ಕ್ವಾರ್ಟರ್ಸ್ ನಲ್ಲಿ ಅಧ್ಯಕ್ಷ ಕೆ. ಶಿವನ್ ಅವರೊಂದಿಗೆ ಮಹತ್ವದ ಸಭೆ ನಡೆಸಿದರು.
ಇಸ್ರೋ ತಂತ್ರಜ್ಞಾನವನ್ನು ಪಡೆದು ಪ್ರಮುಖವಾಗಿ ಸಾರಿಗೆ ಇಲಾಖೆಯ ಕಾರ್ಯನಿರ್ವಹಣೆಯ ಗುಣಮಟ್ಟವನ್ನು ಮತ್ತಷ್ಟು ಪುನಶ್ಚೇತನಗೊಳಿಸುವ ಬಗ್ಗೆ ಮತ್ತು ಸಾರಿಗೆ ಸಂಸ್ಥೆಗಳಾದ ಕೆ.ಎಸ್.ಆರ್. ಟಿ. ಸಿ, ವಾಯವ್ಯ ಸಾರಿಗೆ ಸಂಸ್ಥೆ, ಈಶಾನ್ಯ ಸಾರಿಗೆ ಸಂಸ್ಥೆ, ಬಿ.ಎಂ.ಟಿ.ಸಿ ಮುಂತಾದ ಸಂಸ್ಥೆಗಳ ವೆಚ್ಚಗಳನ್ನು ಕಡಿಮೆ ಮಾಡಿ ಆದಾಯ ಹೆಚ್ಚಿಸುವ ಮಾರ್ಗೋಪಾಯದ ಬಗ್ಗೆಯೂಈ ಸಂದರ್ಭದಲ್ಲಿ ಚರ್ಚಿಸಲಾಯಿತು.
ರಾಜ್ಯದಲ್ಲಿ ಸಾರಿಗೆ ಸಂಸ್ಥೆಗಳ ಬಸ್ಸುಗಳ ಸೇವೆ ಹಾಗೂ ಸರಕು ಸಾಗಾಣಿಕೆಯ ವಾಹನಗಳ ಕಾರ್ಯಚಟುವಟಿಕೆಗಳು ಗಮನಾರ್ಹ ಪ್ರಮಾಣದಲ್ಲಿವೆ. ಈ ಸೇವೆಗಳ ಕಾರ್ಯ ದಕ್ಷತೆಯನ್ನು ಮತ್ತಷ್ಟು ಹೆಚ್ಚಿಸಲು ಅನುಕೂಲವಾಗುವಂತ ವಿವಿಧ ತಂತ್ರಜ್ಞಾನಗಳನ್ನು ಅಳವಡಿಸುವ ಕುರಿತು ಇಸ್ರೋದಿಂದ ಅಗತ್ಯವಾದ ವೈಜ್ಞಾನಿಕ ಸೇವಾ ಸೌಲಭ್ಯಗಳನ್ನು ಒದಗಿಸಿ ಕೊಡಬೇಕೆಂದು ಇಸ್ರೋದ ಮುಖ್ಯಸ್ಥರಲ್ಲಿ ಡಿಸಿಎಂ ಸವದಿ ಅವರು ಮನವಿ ಮಾಡಿಕೊಂಡರು.
ಸಾರಿಗೆ ಸಂಸ್ಥೆಗಳಲ್ಲಿ ಹೆಚ್ಚಿನ ಪಾರದರ್ಶಕತೆ ಒದಗಿಸಲು ಮತ್ತು ಸೋರಿಕೆಯನ್ನು ತಡೆಗಟ್ಟಲು ಇಸ್ರೋದಿಂದ ಮಾರ್ಗದರ್ಶನ ಒದಗಿಸಿಕೊಡಬೇಕೆಂದು ಸವದಿ ಮನವಿ ಮಾಡಿಕೊಂಡರು.
ಕೋವಿಡ್-19 ಪಿಡುಗಿನಿಂದಾಗಿ ರಾಜ್ಯದಲ್ಲಿ ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಮಟ್ಟ ತೀವ್ರವಾಗಿ ಕುಸಿದಿದೆ. ಇದರಿಂದ ಚೇತರಿಸಿಕೊಳ್ಳಲು ಬಾಹ್ಯಾಕಾಶ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಸಾಧ್ಯಾಸಾಧ್ಯತೆಗಳ ಬಗ್ಗೆಯೂ ಈ ಸಂದರ್ಭದಲ್ಲಿ ಚರ್ಚಿಸಲಾಯಿತು.
ಉಪಮುಖ್ಯಮಂತ್ರಿಗಳು ಪ್ರಸ್ತಾಪಿಸಿದ ಅಂಶಗಳ ಬಗ್ಗೆ ಇಸ್ರೋ ಮುಖ್ಯಸ್ಥರು ಸಹಮತ ವ್ಯಕ್ತಪಡಿಸಿ, ಈ ಕುರಿತು ತಂತ್ರಜ್ಞಾನದ ನೆರವು ನೀಡುವ ಭರವಸೆ ವ್ಯಕ್ತಪಡಿಸಿದರು.
ಇಸ್ರೋದ ಸೈಂಟಿಫಿಕ್ ಸೆಕ್ರೆಟರಿ ಡಾ. ಉಮಾಮಹೇಶ್ವರನ್ ಹಾಗೂ ಇಸ್ರೋದ ಅಂತರಿಕ್ಷ್ ಎಂ.ಡಿ. ರಾಕೇಶ್ ಶಶಿಭೂಷಣ್ ಅವರು ಸಭೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.