ಕೆಲಸಕ್ಕೆ ಗೈರಾಗಿ, ಮನೆಯಲ್ಲೇ ಕುಳಿತು ಪ್ರತಿಭಟನೆಗೆ ನಿರ್ಧಾರ

Team Udayavani, Jan 4, 2020, 3:06 AM IST

kelasakke

ಬೆಂಗಳೂರು: ಗೌರವಧನ ಹೆಚ್ಚಳ, ಆಶಾ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಶುಕ್ರವಾರ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಶನಿವಾರದಿಂದ ಕೆಲಸಕ್ಕೆ ಗೈರಾಗಿ ಮನೆಯಲ್ಲಿಯೇ ಕುಳಿತು ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದ್ದಾರೆ.

ಸಾವಿರಾರು ಸಂಖ್ಯೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವರೆಗೆ ಬೃಹತ್‌ ರ್ಯಾಲಿ ನಡೆಸುವ ಮೂಲಕ ಆಶಾ ಕಾರ್ಯಕರ್ತೆಯರು ಶಕ್ತಿ ಪ್ರದರ್ಶಿಸಿದರು. ರ್ಯಾಲಿಯುದ್ದಕ್ಕೂ ಮಾಸಿಕ ಕನಿಷ್ಟ 12 ಸಾವಿರ ರೂ. ನೀಡಬೇಕು ಎಂದು ಘೋಷಣೆ ಕೂಗಿದರು. ಸರ್ಕಾರ ಬೇಡಿಕೆ ಈಡೇರಿಸುವವರೆಗೂ ಕೆಲಸಕ್ಕೆ ಹೋಗುವುದಿಲ್ಲ ಎಂದು ತೀರ್ಮಾನಿಸಿದ್ದಾರೆ.

ಹಾವೇರಿ, ರಾಯಚೂರು, ಹುಬ್ಬಳ್ಳಿ, ಹಿರೇಕೆರೂರು ಸೇರಿ ಹಲವು ಜಿಲ್ಲೆಗಳಿಂದ ಆಶಾ ಕಾರ್ಯಕರ್ತೆಯರು ಆಗಮಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 2019ರ ಜೂನ್‌ ತಿಂಗಳಲ್ಲಿ ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದರು. ಇದೀಗ ಮತ್ತೆ ಪ್ರತಿಭಟನೆ ನಡೆಸುತ್ತಿದ್ದು, 30 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಪಾಲ್ಗೊಂಡು ಒಗ್ಗಟ್ಟು ಪ್ರದರ್ಶಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್‌ ಅಖ್ತರ್‌ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಬೇಡಿಕೆ ಈಡೇರಿಕೆ ಸಂಬಂಧ ಸರ್ಕಾರದ ಜತೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರೂ, ಆಶಾ ಕಾರ್ಯಕರ್ತರು ಪ್ರತಿಭಟನೆ ಹಿಂಪಡೆಯದೇ ಸರ್ಕಾರ ಸುತ್ತೋಲೆ ಹೊರಡಿಸುವವರೆಗೂ ಮುಂದುವರಿಸುವುದಾಗಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ಮಾತನಾಡಿ, ಆಶಾ ಕಾರ್ಯಕರ್ತೆಯರಿಗೆ ಭದ್ರತೆ ಇಲ್ಲದಂತಾಗಿದ್ದು, ಪ್ರೋತ್ಸಾಹಧನ 4 ಸಾವಿರದಿಂದ 12 ಸಾವಿರ ರೂ. ಗೆ ಹೆಚ್ಚಳ ಮಾಡಬೇಕು.

ಈಗಾಗಲೇ ಆಂಧ್ರ ಪ್ರದೇಶದಲ್ಲಿ ಏಳು ಸಾವಿರ ರೂ. ಹೆಚ್ಚಳ ಮಾಡಿ 10 ಸಾವಿರ ರೂ. ನೀಡಲಾಗುತ್ತಿದೆ. ಇದೇ ಮಾದರಿಯಲ್ಲಿ ಹೆಚ್ಚಳಕ್ಕೆ ಕ್ರಮಕೈಗೊಳ್ಳಬೇಕು. ಈಗಾಗಲೇ ಭರವಸೆ ನೀಡಿರುವಂತೆ ಆಶಾ ಕಾರ್ಯಕರ್ತೆಯರಿಗೆ ದ್ವಿಚಕ್ರ ವಾಹನ ಖರೀದಿಸಲು ಸಹಾಯಧನ ನೀಡಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Gold Rates:ಡಾಲರ್‌ ಬೆಲೆ ಏರಿಕೆ-‌18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

16-bng

Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3

4

Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.