ಆಗಸ್ಟ್ 28- 29ರಂದು ಸಿಇಟಿ ಮಾರ್ಕ್ ಆಧಾರದಲ್ಲೇ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಿರ್ಧಾರ
Team Udayavani, Jun 8, 2021, 12:14 PM IST
Representative Image Used
ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ದ್ವಿತೀಯ ಪಿಯುಸಿ ಅಂಕಗಳನ್ನು ಈ ವರ್ಷ ಪರಿಗಣಿಸದಿರಲು ನಿರ್ಧರಿಸಲಾಗಿದೆ.
ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು, ಈ ವರ್ಷಕ್ಕೆ ಅನ್ವಯವಾಗುವಂತೆ ಕೇವಲ ಸಿಇಟಿ ರ್ಯಾಂಕ್ ಆಧಾರದಲ್ಲಿ ವೃತ್ತಿಪರ ಕೋರ್ಸ್ ಗಳ ಪ್ರವೇಶ ನಡೆಯಲಿದೆ. ಪಿಯುಸಿ ಅಂಕ ಪರಿಗಣಿಸುವುದಿಲ್ಲ. ಹಾಗೆಯೇ ಈ ಸಂಬಂಧ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮಂಡಳಿಗಳಿಗೂ ಪತ್ರ ಬರೆಯಲಾಗುತ್ತದೆ ಎಂದರು.
ಇದನ್ನೂ ಓದಿ:ವಂಚನೆ: ಗಾಂಧೀಜಿ ಮರಿಮೊಮ್ಮಗಳಿಗೆ 7 ವರ್ಷ ಜೈಲುಶಿಕ್ಷೆ ವಿಧಿಸಿದ ದಕ್ಷಿಣ ಆಫ್ರಿಕಾ ಕೋರ್ಟ್
ಆಗಸ್ಟ್ 28 ಮತ್ತು 29ರಂದು ಸಿಇಟಿ ನಡೆಯಲಿದೆ. ವೃತ್ತಿಪರ ಕೋರ್ಸ್ ಗೆ ಸಿಇಟಿ ರ್ಯಾಂಕ್ ಮಾತ್ರ ಪರಿಗಣಿಸಲು ಸಚಿವ ಸುರೇಶ್ ಕುಮಾರ್ ಸಲಹೆ ನೀಡಿದ್ದರು. ಅದರಂತೆ ಅಧಿಕಾರಿಗಳ ಜತೆ ಚರ್ಚಿಸಿ, ಈ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
ವಿಜ್ಞಾನ ಕೋರ್ಸ್ ಗಳಿಗೂ ಸಿಇಟಿ?: ವಿಜ್ಞಾನ ವಿಭಾಗದ ವಿದ್ಯಾರ್ಥಿಗಳನ್ನು ಸಿಇಟಿ ಮೂಲಕ ಪ್ರವೇಶಕ್ಕೆ ಚಿಂತನೆ ನಡೆಸುತ್ತಿದ್ದೇವೆ. ಆಯಾ ಕೋರ್ಸ್ ಆಧಾರದಲ್ಲಿ ಮಾನದಂಡಗಳನ್ನು ನಿಗದಿ ಮಾಡುತ್ತೇವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.