ಕೈಗಾರಿಕ ನಿವೇಶನಗಳಿಗೆ ಪ್ರತ್ಯೇಕ ಆಸ್ತಿ ತೆರಿಗೆಗೆ ನಿರ್ಧಾರ
Team Udayavani, Dec 10, 2021, 6:57 AM IST
ಬೆಂಗಳೂರು: ಕೆಐಎಡಿಬಿ ಮತ್ತು ಕೆಎಸ್‌ಎಸ್‌ಐಡಿಸಿ ಅಗತ್ಯ ಮೂಲ ಸೌಕರ್ಯಗಳೊಂದಿಗೆ ಅಭಿವೃದ್ಧಿ ಗೊಳಿಸಿ ಹಂಚಿಕೆ ಮಾಡುವ ಕೈಗಾರಿಕ ನಿವೇಶನಗಳಿಗೆ ಪ್ರತ್ಯೇಕ ಆಸ್ತಿ ತೆರಿಗೆ ವಿಧಿಸಲು ಕಾಯ್ದೆಗೆ ತಿದ್ದುಪಡಿ ಮಾಡಲು ರಾಜ್ಯಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಜರಗಿದ ಸಚಿವ ಸಂಪುಟ ಸಭೆಯಲ್ಲಿ ಬಿಬಿಎಂಪಿ ಹೊರತುಪಡಿಸಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಕೈಗಾರಿಕೆಗಳಿಗೆ ಪ್ರತ್ಯೇಕ ಆಸ್ತಿ ತೆರಿಗೆ ದರವನ್ನು ನಿಗದಿಪಡಿಸಲು ಅನುಕೂಲವಾಗುವಂತೆ ಸದ್ಯ ಜಾರಿಯಲ್ಲಿರುವ “ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಕಲಂ 94 ಮತ್ತು ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976ರ ಕಲಂ 108’ಕ್ಕೆ ತಿದ್ದುಪಡಿ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಖಾಲಿ ಭೂಮಿಗಳಿಗೆ ಮೂಲ ಬೆಲೆಯ ಶೇ.0.2ಕಿಂತ ಕಡಿಮೆ ಇಲ್ಲದಂತೆ ಹಾಗೂ 0.5ಕ್ಕಿಂತ ಹೆಚ್ಚಿಲ್ಲದಂತೆ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿ ತೆರಿಗೆಯನ್ನು ನಿಗದಿಪಡಿಸಲು ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಕಲಂ 94(1-ಎ) (ಜೆ)ರಡಿ ಬಳಸದ ಹಾಗೂ, ಬಳಸುವ ಉದ್ದೇಶ ಹೊಂದಿಲ್ಲದ ಖಾಲಿ ಭೂಮಿಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.