ವೀಕ್ಲಿ ಎಕ್ಸ್‌ಪ್ರೆಸ್ ರೈಲು ಓಡಿಸಲು ನಿರ್ಧಾರ
Team Udayavani, Apr 28, 2019, 3:00 AM IST
ಹುಬ್ಬಳ್ಳಿ: ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ಕೃಷ್ಣರಾಜಪುರಂ-ಕೋಚುವೇಲಿ ಮಧ್ಯೆ ಏ.29ರಿಂದ ಜುಲೈ 1ರಂದು ವಿಶೇಷ ದರದ ವೀಕ್ಲಿ ಎಕ್ಸ್‌ಪ್ರೆಸ್ ರೈಲು (06027) ಓಡಿಸಲು ನಿರ್ಧರಿಸಲಾಗಿದೆ. ರೈಲು ಪ್ರತಿ ಸೋಮವಾರ ಮಧ್ಯಾಹ್ನ 2 ಗಂಟೆಗೆ ಕೃಷ್ಣರಾಜಪುರಂನಿಂದ ಹೊರಡಲಿದ್ದು, ಮರುದಿನ ಬೆಳಗ್ಗೆ 6 ಗಂಟೆಗೆ ಕೋಚುವೇಲಿಗೆ ಬಂದು ಸೇರಲಿದೆ.
ಅದೇ ರೀತಿ, ಕೋಚುವೇಲಿ-ಕೃಷ್ಣರಾಜಪುರಂ ಮಧ್ಯೆ ಏ.28ರಿಂದ ಜೂನ್ 30ರವರೆಗೆ ಸುವಿಧಾ ವೀಕ್ಲಿ ಎಕ್ಸ್‌ಪ್ರೆಸ್ (82644) ರೈಲು ಓಡಿಸಲು ನಿರ್ಧರಿಸಲಾಗಿದೆ.ಕೋಚುವೇಲಿಯಿಂದ ಭಾನುವಾರ ಸಂಜೆ 5 ಗಂಟೆಗೆ ಹೊರಡುವ ರೈಲು, ಮರುದಿನ ಬೆಳಗ್ಗೆ 8.45ಕ್ಕೆ ಕೃಷ್ಣರಾಜಪುರಂ ನಿಲ್ದಾಣಕ್ಕೆ ಆಗಮಿಸಲಿದೆ.
ಹುಬ್ಬಳ್ಳಿ ಡಿವಿಜನ್‌ನ ಬೆಳಗಾವಿ-ಮೀರಜ್ ಸೆಕ್ಷನ್‌ನ ರಾಯಬಾಗ-ಚಿಂಚಿ ನಿಲ್ದಾಣಗಳ ಮಧ್ಯದಲ್ಲಿ ರೈಲು ಹಳಿ ಕಾಮಗಾರಿ ಪ್ರಯುಕ್ತ ಲೈನ್ ಬ್ಲಾಕೇಜ್‌ಗಾಗಿ ಏ.29ರಿಂದ ಮೇ 3ರವರೆಗೆ ಮೀರಜ್-ಹುಬ್ಬಳ್ಳಿ ಪ್ಯಾಸೆಂಜರ್ (51419) ರೈಲು ಮೀರಜ್‌ನಿಂದ 120 ನಿಮಿಷ ವಿಳಂಬವಾಗಿ ಪ್ರಯಾಣ ಆರಂಭಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.