Chilli Crop ರಕ್ಷಣೆಗೆ 2.75 ಟಿಎಂಸಿ ನೀರು ಹರಿಸಲು ನಿರ್ಧಾರ: ಡಿ.ಕೆ.ಶಿವಕುಮಾರ್
ಕೃಷ್ಣಾ ಮೇಲ್ದಂಡೆ ಅಚ್ಚುಕಟ್ಟು ಪ್ರದೇಶದ ರೈತರ ಪ್ರತಿಭಟನೆಗೆ ಮಣಿದ ರಾಜ್ಯ ಸರಕಾರ
Team Udayavani, Jan 8, 2024, 6:45 AM IST
ಬೆಂಗಳೂರು: ಕೊನೆಗೂ ಕೃಷ್ಣಾ ಮೇಲ್ದಂಡೆ ಅಚ್ಚುಕಟ್ಟು ಪ್ರದೇಶದ ರೈತರ ಪ್ರತಿಭಟನೆಗೆ ಮಣಿದ ಸರಕಾರ, ಆ ಭಾಗದ ಮೆಣಸಿನಕಾಯಿ ಬೆಳೆ ರಕ್ಷಣೆಗೆ ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯದಿಂದ 2.75 ಟಿಎಂಸಿ ನೀರು ಹರಿಸಲು ನಿರ್ಧರಿಸಿದೆ.
“ಬರ ಪರಿಸ್ಥಿತಿಯಲ್ಲಿ ಬೆಳೆ ಹಾಕಬಾ ರದು’ ಎಂದು ಮನವಿ ಮಾಡಿದ್ದರೂ ಕೆಲವು ರೈತರು ಭತ್ತದ ಬದಲು ಮೆಣಸಿನಕಾಯಿ ಬೆಳೆ ಹಾಕಿಕೊಂಡಿದ್ದಾರೆ. ಈ ಬೆಳೆ ನಾಶವಾದರೆ, 2 ಸಾವಿರ ಕೋಟಿ ರೂಪಾಯಿಯಷ್ಟು ನಷ್ಟವಾಗುವ ಸಾಧ್ಯತೆ ಇದೆ. ಪ್ರತಿಭಟನನಿರತ ರೈತರು ಹಾಗೂ ಶಾಸಕರು ಮನವಿ ಮಾಡಿದ್ದರಿಂದ ನೀರು ಹರಿಸಲು ತೀರ್ಮಾನಿಸಲಾಗಿದೆ. ತತ್‌ಕ್ಷಣದಿಂದ ನೀರು ಬಿಡುಗಡೆ ಮಾಡಲಾಗುವುದು. 75 ಕಿ.ಮೀ. ನೀರು ಹರಿಯಬೇಕಿದೆ. ಎರಡು ಮೂರು ದಿನಗಳಲ್ಲಿ ನೀರು ತಲುಪಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ರವಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಹಿಂದೆ ಮಂಡ್ಯ ರೈತರ ರಕ್ಷಣೆ ಮಾಡಿದ್ದೆವು. ಭದ್ರಾ ನೀರಿನ ವಿಚಾರ ದಲ್ಲೂ ಸಮಸ್ಯೆಯನ್ನು ನಿವಾರಿಸಿ¨ªೆವು. ಈಗ ಕೃಷ್ಣಾ ಮೇಲ್ದಂಡೆ ವ್ಯಾಪ್ತಿ ರೈತರ ರಕ್ಷಣೆ ಮಾಡಲಾಗುತ್ತಿದೆ. ಆಲಮಟ್ಟಿ, ನಾರಾಯಣಪುರ ಅಣೆಕಟ್ಟು ಸಹಿತ 47 ಟಿಎಂಸಿ ನೀರು ಲಭ್ಯ ಇದೆ. ಕುಡಿಯುವ ನೀರಿಗೆ 37 ಟಿಎಂಸಿ ನೀರು, ಇತರೆ ಉದ್ದೇಶಕ್ಕೆ 3 ಟಿಎಂಸಿ ನೀರು ಬೇಕು. ನೀರು ಹರಿಸುವ ವೇಳೆ 1.5 ಟಿಎಂಸಿ ನೀರು ನಷ್ಟವಾಗುತ್ತದೆ. ಈ ಭಾಗದವರ ಒತ್ತಡಕ್ಕೆ ಈಗ 2.75 ಟಿಎಂಸಿ ನೀರು ಬಿಡುಗಡೆ ಮಾಡಲು ತೀರ್ಮಾನಿಸಿದ್ದೇವೆ. ಇನ್ನೂ ಆರು ತಿಂಗಳು ನೀರು ನಿರ್ವಹಣೆ ಮಾಡಬೇಕಿದೆ. ಹೀಗಾಗಿ ಈ ಬಾರಿ ಕೊನೆಯದಾಗಿ ನಾವು ರೈತರ ಜಮೀನಿಗೆ ನೀರು ಹರಿಸುತ್ತಿದ್ದೇವೆ ಎಂದರು.
ಮೆಣಸಿನಕಾಯಿಗೆ ಮಾತ್ರ ನೀರು
ನೀರಿನ ಬಳಕೆ ಮೇಲ್ವಿಚಾರಣೆ ಹೇಗೆ ಎಂದು ಕೇಳಿದಾಗ, ಮೇಲ್ವಿಚಾರಣೆಗೆ ಪೊಲೀಸರನ್ನು ಬಳಸಿಕೊಳ್ಳಲು ಆಗುವು ದಿಲ್ಲ. ಹೀಗಾಗಿ ಈ ಜವಾಬ್ದಾರಿಯನ್ನು ಜನಪ್ರತಿನಿಧಿ ಹಾಗೂ ರೈತ ಸಂಘಟನೆಗಳಿಗೇ ನೀಡಲಾಗಿದೆ. ನೀವೇ ಪೊಲೀಸರಾಗಿ ಈ ನೀರಿನ ಸದ್ಬಳಕೆ ಮಾಡಿಕೊಳ್ಳಬೇಕು. ನಮ್ಮ ಅಧಿಕಾರಿ ಗಳಿಗೂ ನಾವು ಸೂಚನೆ ನೀಡಿದ್ದೇವೆ. ಆದರೆ ಅಧಿಕಾರಿಗಳು ರೈತರ ಜತೆ ಜಗಳ ಮಾಡಲು ಆಗುವುದಿಲ್ಲ. ಆ ರೀತಿ ಆದರೆ ಮಾಧ್ಯಮಗಳು ಅದನ್ನೇ ದೊಡ್ಡ ವಿಷಯ ಮಾಡುತ್ತವೆ. ಮಾಧ್ಯಮಗಳು ಕೂಡ ರೈತರ ಜವಾಬ್ದಾರಿ ಬಗ್ಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಮೆಣಸಿನಕಾಯಿ ಬೆಳೆಗೆ ಎಲ್ಲೆಲ್ಲಿ, ಎಷ್ಟು ಹಾನಿ?
ರಾಯಚೂರು/ಬಳ್ಳಾರಿ/ಬಾಗಲಕೋಟೆ: ಕಲಬುರಗಿ, ರಾಯಚೂರು, ಬಾಗಲಕೋಟೆ, ಯಾದಗಿರಿ ಭಾಗಗಳಲ್ಲಿ ಮೆಣಸಿನಕಾಯಿ ಬೆಳೆದಿದ್ದ ರೈತರು ಅಕ್ಷರಶಃ ಕಂಗಾಲಾಗಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಅಂದಾಜು 15 ಸಾವಿರ ಎಕ್ರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆಯಲಾಗಿದೆ. ಇನ್ನೂ ಎರಡು ಬಾರಿ ನೀರು ಹರಿಸಿದರೆ ಮಾತ್ರ ಬೆಳೆ ಕೈ ಸೇರಲಿದೆ.
ಬಳ್ಳಾರಿಯಲ್ಲಿ ಮೆಣಸಿನಕಾಯಿ ಬೆಳೆಯುವ ರೈತರು ಎಚ್‌ಎಲ್‌ಸಿ ಕಾಲುವೆ ನೀರಿಗಾಗಿ ಶೇ.60, ಎಲ್‌ಎಲ್‌ಸಿ ಕಾಲುವೆ ನೀರಿಗಾಗಿ ಶೇ.25 ಅವಲಂಬಿತರಾಗಿದ್ದಾರೆ. ಸಮರ್ಪಕವಾಗಿ ನೀರು ದೊರೆಯದೆ ಬೆಳೆ ನಷ್ಟವಾಗಿದೆ. ಪ್ರತಿ ಎಕ್ರೆಗೆ 14-16 ಕ್ವಿಂಟಾಲ್ ಬೆಳೆಯುತ್ತಿದ್ದ ಮೆಣಸಿನಕಾಯಿ ಈಗ 6-8 ಕ್ವಿಂಟಾಲ್ ಬೆಳೆದರೂ ಹೆಚ್ಚು ಎಂಬಂತಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಶೇ.76.90ರಷ್ಟು ಬೆಳೆ ಹಾನಿಯಾಗಿದೆ.
ಬಾಗಲಕೋಟೆ, ಹುನಗುಂದ ಹಾಗೂ ಇಳಕಲ್ ತಾಲೂಕಿನಲ್ಲಿ ಈ ಬಾರಿ ಅತಿಹೆಚ್ಚು ಮೆಣಸು ಬೆಳೆಯಲಾಗಿದೆ. ಜಿಲ್ಲೆಯಲ್ಲಿ 21, 816 ಹೆಕ್ಟೇರ್ ಪ್ರದೇಶ ದಲ್ಲಿ ಬಿತ್ತನೆಯಾಗಿದ್ದು, 19,255 ಹೆಕ್ಟೇರ್ ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.