ಮೇ 7ರ ಒಳಗಾಗಿ ಅನರ್ಹತೆ ತೀರ್ಪು ನೀಡಿ: ಹೈಕೋರ್ಟ್
Team Udayavani, Apr 25, 2018, 6:00 AM IST
ಬೆಂಗಳೂರು: ಜೆಡಿಎಸ್ನ ಏಳು ಮಂದಿ ಬಂಡಾಯ ಶಾಸಕರನ್ನು ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸುವಂತೆ ನೀಡಲಾಗಿದ್ದ ದೂರಿನ ಕುರಿತ ತೀರ್ಪು ಮೇ 7ರೊಳಗೆ ಪ್ರಕಟಿಸುವಂತೆ ವಿಧಾನಸಭಾ ಸ್ಪೀಕರ್ಗೆ ಹೈಕೋರ್ಟ್ ನಿರ್ದೇಶಿಸಿದೆ.
ಪಕ್ಷದ ವಿಪ್ ಉಲ್ಲಂಘಿಸಿ ರಾಜ್ಯಸಭಾ ಚುನಾವಣೆ ವೇಳೆ ಅಡ್ಡಮತದಾನ ಮಾಡಿದ ಏಳು ಮಂದಿ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಶಾಸಕ ಎಚ್.ಸಿ. ಬಾಲಕೃಷ್ಣ ಹಾಗೂ ಬಿ.ಬಿ. ನಿಂಗಯ್ಯ ಸಲ್ಲಿಸಿದ್ದ ರಿಟ್ ಅರ್ಜಿಗಳ ತೀರ್ಪನ್ನು ಮಂಗಳವಾರ ಪ್ರಕಟಿಸಿದ ನ್ಯಾಯಮೂರ್ತಿ ರಾಘವೇಂದ್ರ ಎಸ್. ಚೌಹಾಣ್ ಅವರಿದ್ದ ಏಕಸದಸ್ಯ ಪೀಠ, ಈ ನಿರ್ದೇಶನ ನೀಡಿತು.
ಈಗಾಗಲೇ ಏಳು ಮಂದಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದರಿಂದ ಸ್ಪೀಕರ್ ತೀರ್ಪು ಮಾನ್ಯತೆ ಕಳೆದುಕೊಳ್ಳಲಿದೆ ಎಂಬ ಸರಕಾರದ ವಾದವನ್ನು ತಳ್ಳಿಹಾಕಿರುವ ನ್ಯಾಯಪೀಠ, ರಾಜೀನಾಮೆ ಸಲ್ಲಿಸಿದ್ದರೂ ಸಂವಿಧಾನದ ಕಲಂ 52ನೇ ತಿದ್ದುಪಡಿ ಅನ್ವಯ ತೀರ್ಪು ಪ್ರಕಟವಾಗಬೇಕು ಎಂದು ಅಭಿಪ್ರಾಯಪಟ್ಟಿತು. ಶಾಸಕರ ವಿರುದ್ಧದ ದೂರಿನ ಕುರಿತ ತೀರ್ಪು ಮೇ 7ರೊಳಗೆ ಪ್ರಕಟಿಸುವಂತೆ ವಿಧಾನಸಭಾ ಸ್ಪೀಕರ್ ಕೆ.ಬಿ. ಕೋಳಿವಾಡ ಅವರಿಗೆ ನ್ಯಾಯಪೀಠ ನಿರ್ದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!
Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.