Yuva Nidhi Scheme; ಪ್ರತಿ ತಿಂಗಳು ನಿರುದ್ಯೋಗಿ ಘೋಷಣೆ ಕಡ್ಡಾಯ
Team Udayavani, Feb 24, 2024, 11:06 PM IST
ಬೆಂಗಳೂರು: ಯುವನಿಧಿ ಯೋಜನೆಯ ಫಲಾನುಭವಿಗಳಾಗಲು ಪ್ರತಿ ತಿಂಗಳು ತಾನು ನಿರುದ್ಯೋಗಿ, ವ್ಯಾಸಂಗ ಮುಂದುವರಿಸುತ್ತಿಲ್ಲ ಹಾಗೂ ಸ್ವಯಂ ಉದ್ಯೋಗಿಯಲ್ಲ ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುವುದನ್ನು ಕಡ್ಡಾಯ ಗೊಳಿಸಲಾಗಿದೆ.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗದ ಆಯು ಕ್ತರು ಈ ಬಗ್ಗೆ ಪತ್ರಿಕಾ ಪ್ರಕಟನೆ ಬಿಡುಗಡೆ ಮಾಡಿದ್ದು, ಪ್ರಸಕ್ತ ತಿಂಗಳ ನಿರುದ್ಯೋಗ ಸ್ಥಿತಿ ಗತಿ ಬಗ್ಗೆ ಫೆ.29ರ ವರೆಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಯೋ ಜನ ಪಡೆಯುತ್ತಿರುವವರು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ ಎಂದು ತಿಳಿಸಲಾಗಿದೆ.
ಈಗಾಗಲೇ ನೋಂದಾಯಿಸಿ ಕೊಂಡ ಅಭ್ಯ ರ್ಥಿಗಳಿಗೆ 2024ರ ಜನವರಿಯಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದ್ದು, ಮುಂದಿನ ತಿಂಗ ಳು ಪ್ರಯೋಜನ ಪಡೆದು ಕೊಳ್ಳಲು ಸ್ವಯಂ ಘೋಷಣೆ ಮಾಡ ಬೇಕಾಗಿದ್ದು, ಅಭ್ಯರ್ಥಿಗಳಿಗೆ ಎಸ್‌ಎಂಎಸ್ ಸಂದೇಶವನ್ನು ರವಾನಿ ಸಲಾ ಗಿದೆ. ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು https://sevasin dhugs.karnataka.gov.in ಜಾಲ ತಾಣವನ್ನು ವೀಕ್ಷಿಸಬಹು ದಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಯುವನಿಧಿ ಯೋಜನೆಯಲ್ಲಿ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಯಾಗಿರುವ ಹಾಗೂ ಫಲಿತಾಂಶ ಪ್ರಕಟಗೊಂಡ ಬಳಿಕ 180 ದಿನಗಳಲ್ಲಿ ಉದ್ಯೋಗ ಪಡೆಯಲು ವಿಫಲ ರಾಗಿರುವ ಯುವಕ, ಯುವತಿಯರಿಗೆ ನಿರುದ್ಯೋಗ ಭತ್ತೆಯನ್ನು ನೀಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.