Dasara ಕ್ರೀಡಾಕೂಟದಲ್ಲಿ ಸೋತರೂ ನಾಯಕನಾಗಿ ಬೆಳೆದೆ: ಡಿಸಿಎಂ ಡಿ.ಕೆ.ಶಿವಕುಮಾರ್
ನೀವು ನನ್ನಂತೆ ನಾಯಕರಾಗಿ ಬೆಳೆಯಬೇಕು...
Team Udayavani, Oct 11, 2023, 8:16 PM IST
ಮೈಸೂರು: ನನ್ನ 14 ನೇ ವಯಸ್ಸಿನಲ್ಲಿ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ಸೋತು ಮನೆಗೆ ಹೋಗಿದ್ದೆ. ಆದರೆ ನಾಯಕನಾಗಿ ಬೆಳೆದೆ. ನೀವು ನನ್ನಂತೆ ನಾಯಕರಾಗಿ ಬೆಳೆಯಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕ್ರೀಡಾಪಟುಗಳಿಗೆ ಸ್ಪೂರ್ತಿಯ ಮಾತುಗಳನ್ನಾಡಿದರು.
ಮೈಸೂರು ದಸರಾ ಕ್ರೀಡಾಕೂಟ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು “ಜೂನಿಯರ್ ವಿಭಾಗದ ಜಾವಲಿನ್ ಎಸೆತ ಮತ್ತು 14.5 ಕಿಲೋ ಮೀಟರ್ ದೂರದ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನೀವು ಕುಳಿತ ಜಾಗದಲ್ಲೇ ನಾನು ಕುಳಿತುಕೊಂಡಿದ್ದೆ. ಗ್ರಾಮೀಣ ಭಾಗದಿಂದ ಬಂದಂತಹ ನೀವೆಲ್ಲಾ ಕ್ರೀಡಾ ಕ್ಷೇತ್ರದಲ್ಲಿ ಭಾರತಕ್ಕೆ ಆಸ್ತಿಗಳಾಗಿ ಬೆಳಗಬೇಕು ಎಂದು ಹೇಳಿದರು.
ಶ್ರಮ ಪಡದೆ ಯಾವುದೂ ದಕ್ಕುವುದಿಲ್ಲ. ಶ್ರಮ ಇದ್ದ ಕಡೆ ಫಲವಿದೆ. ಗಣಪತಿಯನ್ನು ಪೂಜಿಸಿದ ತಕ್ಷಣ ವಿದ್ಯೆ ಬರುವುದಿಲ್ಲ, ಹಗಲು ಹೊತ್ತು ಶ್ರಮ ಪಡಬೇಕು. ಈಗ ಸ್ಪರ್ಧೆ ತಾಲ್ಲೂಕು, ಜಿಲ್ಲಾ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಇಲ್ಲ, ಅಂತರರಾಷ್ಟ್ರೀಯ ಮಟ್ಟದಲ್ಲಿದೆ. ಏಷ್ಯನ್ ಕ್ರೀಡಾಕೂಟದಲ್ಲಿ ಭಾರತ 107 ಪದಕಗಳನ್ನು ಗೆದ್ದಿದ್ದು, ಕನ್ನಡಿಗರು 11 ಪದಕಗಳನ್ನು ಗೆದ್ದಿದ್ದಾರೆ. ನೀವೆಲ್ಲಾ ಗ್ಲೋಬಲ್ ಮಟ್ಟಕ್ಕೆ ಬೆಳೆಯಬೇಕು ಎಂದು ಹುರಿದುಂಬಿಸಿದರು.
ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಮಹದೇವಪ್ಪ ಅವರ ಮನವಿ ಮೇರೆಗೆ ಬಂದು ಸಂತೋಷದಿಂದ ಕ್ರೀಡಾಜ್ಯೋತಿಯನ್ನು ಸ್ವೀಕರಿಸಿದ್ದೇನೆ. ಕ್ರೀಡಾಕೂಟದ ಉದ್ಘಾಟನೆ ಮಾಡಿದ್ದು ಬಹಳ ಸಂತಸ ನೀಡಿತು ಎಂದು ಹೇಳಿದರು.
ಒಲಂಪಿಕ್ ಅಸೋಸಿಯೇಶನ್ ಅಧ್ಯಕ್ಷರಾದ ಗೋವಿಂದರಾಜು ಅವರು, ಕ್ರೀಡಾ ಸಚಿವರಾದ ನಾಗೇಂದ್ರ ಅವರು ಕ್ರೀಡಾಪಟುಗಳಿಗೆ ಉತ್ತಮವಾದ ಸಮವಸ್ತ್ರಗಳನ್ನ ನೀಡಿದ್ದಾರೆ. ನಾವುಗಳು ಒಂದು ಶೂ ತೆಗೆದುಕೊಳ್ಳಲು ಪರದಾಡುವಂತಹ ಸ್ಥಿತಿಯಿತ್ತು. ಇಂದು ನಿಮ್ಮ ಪೋಷಕರು ಬೆಂಬಲ ನೀಡಿದ ಕಾರಣಕ್ಕೆ ಇಲ್ಲಿಗೆ ಬಂದಿದ್ದೀರಿ, ಅವಕಾಶ ಕಳೆದುಕೊಳ್ಳಬೇಡಿ ಎಂದು ಕಿವಿಮಾತು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.