ಪದವಿ ಪ್ರವೇಶ: ಕೈಕೊಟ್ಟ ಯುಯುಸಿಎಂಎಸ್
ಆಫ್ ಲೈನ್ ಮೂಲಕ ದಾಖಲಾತಿ ಮಾಡಿಕೊಳ್ಳುತ್ತಿರುವ ಕಾಲೇಜುಗಳು
Team Udayavani, Sep 3, 2022, 6:40 AM IST
ಬೆಂಗಳೂರು: ರಾಜ್ಯದ ಪ್ರಥಮದರ್ಜೆ ಕಾಲೇಜುಗಳಲ್ಲಿ ಈ ವರ್ಷ ಆರಂಭಿಸಿರುವ ಆನ್‌ಲೈನ್ ಪ್ರವೇಶಾತಿ ವ್ಯವಸ್ಥೆಗೆ ನಿರೀಕ್ಷಿತ ಮಟ್ಟದಲ್ಲಿ ಸ್ಪಂದನೆ ದೊರಕದ ಕಾರಣ ಕೆಲವು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಅರ್ಜಿಗಳನ್ನು ಭೌತಿಕವಾಗಿ (ಆಫ್ ಲೈನ್) ಪಡೆದು, ಬಳಿಕ ಆನ್‌ಲೈನ್‌ಗೆ ಅಪ್‌ಲೋಡ್ ಮಾಡಲಾಗುತ್ತಿದೆ.
ಯುಯುಸಿಎಂಎಸ್‌ನಲ್ಲಿ ಆರಂಭದಿಂದಲೂ ತಾಂತ್ರಿಕ ದೋಷ ಉಂಟಾಗು ತ್ತಿದ್ದು, ಕೋರ್ಸ್‌ಗಳ ಮಾಹಿತಿ ವೀಕ್ಷಿಸಲುಹಾಗೂ ಕಾಲೇಜುಗಳಲ್ಲಿ ಸಂಬಂಧಪಟ್ಟ ವಿಭಾಗ, ಕೋಸ್‌ಚ ಆಯ್ಕೆ ಮಾಡಿಕೊಳ್ಳಲು ಪರದಾಟ ಮುಂದುವರಿದಿದೆ.
ಹೀಗಾಗಿ ಭೌತಿಕವಾಗಿ ಅರ್ಜಿ ಮೂಲಕ ಪಡೆದು ಪ್ರವೇಶ ನೀಡುತ್ತಿವೆ. ಆ ಬಳಿಕ ವಿದ್ಯಾರ್ಥಿಗಳ ಮಾಹಿತಿಯನ್ನು ಯುಯುಸಿಎಂಎಸ್ ತಂತ್ರಾಂಶಕ್ಕೆ ಅಪ್‌ಲೋಡ್ ಮಾಡಲಾಗುತ್ತಿದೆ. ಸೆ.15ರ ವರೆಗೂ ಪ್ರವೇಶಾತಿಗೆ ಅಕಾಶ ಇದ್ದು, ಹೆಚ್ಚಿನ ವಿದ್ಯಾರ್ಥಿಗಳು ಪ್ರವೇ ಶಾತಿ ಪಡೆಯುವ ನಿರೀಕ್ಷೆಯಿದೆ.
171 ಕಾಲೇಜಿಗೆ ಕೇವಲ 8 ಸಾವಿರ ವಿದ್ಯಾರ್ಥಿಗಳು!
ಯುಯುಸಿಎಂಎಸ್ ದಾಖಲೆ ಗಳ ಪ್ರಕಾರ, ರಾಜ್ಯದ 430 ಪ್ರಥಮ ದರ್ಜೆ ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದು, ಈ ಪೈಕಿ ರಾಜ್ಯದ ವಿವಿಧ ವಿಶ್ವವಿದ್ಯಾನಿಲಯಗಳಡಿ ಬರುವ 171 ಕಾಲೇಜುಗಳಲ್ಲಿ 1,18,145 ಇನ್‌ಟೇಕ್ (ಸೀಟು) ಲಭ್ಯವಿದ್ದು ಕೇವಲ 8,136 ವಿದ್ಯಾರ್ಥಿಗಳಷ್ಟೇ ನೋಂದಣಿ ಯಾಗಿದ್ದಾರೆ. 171 ಕಾಲೇಜಿ
ನಲ್ಲಿ 100ಕ್ಕೂ ಕಡಿಮೆ ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ 7 ಕಾಲೇಜುಗಳು, ದಾವಣಗೆರೆ-2, ಸಂಸ್ಕೃತ ವಿವಿ, ವಿಜಯನಗರ ಶ್ರೀಕೃಷ್ಣದೇವರಾಯ ವಿವಿ, ಕರ್ನಾಟಕ, ಕಲಬುರಗಿ, ಬೆಂಗಳೂರು ಉತ್ತರ ಮತ್ತು ಮೈಸೂರು ವಿವಿಯ ತಲಾ ಒಂದು ಕಾಲೇಜುಗಳಲ್ಲಿ ಒಂದಂಕಿ ವಿದ್ಯಾರ್ಥಿಗಳಷ್ಟೇ ನೋಂದಣಿ ಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ರಾಜ್ಯದ ವಿದ್ಯಾರ್ಥಿಗಳಿಗೆ ಎಲ್ಲ ಕಾಲೇಜುಗಳ ಮಾಹಿತಿ ಲಭ್ಯವಾ ಗಲಿ ಎಂಬ ಉದ್ದೇಶದಿಂದ ಯುಯುಸಿ ಎಂಎಸ್ ತಂತ್ರಾಂಶ ಸಿದ್ಧಪಡಿಸಲಾಗಿದೆ. ಕೆಲವು ಕಾಲೇಜುಗಳಲ್ಲಿ ಆಫ್ ಲೈನ್ ಆಗಿರಬಹುದು. ಆದರೆ ಯುಯುಸಿಎಂಎಸ್ ಮೂಲಕವೇ ನೋಂದಣಿಯನ್ನು ಕಡ್ಡಾಯ ಮಾಡಲಾಗಿದೆ. ರಾಜ್ಯದಲ್ಲಿ ಈ ವರೆಗೂ 3.5 ಲಕ್ಷ ವಿದ್ಯಾರ್ಥಿಗಳು ನೋಂದಣಿಯಾಗಿದ್ದಾರೆ. ಅರ್ಜಿ ದಾಖಲಿಸುವುದನ್ನು ಮಾತ್ರ ಆನ್‌ಲೈನ್ ಮಾಡಲಾಗಿದೆ. ಈ ಕುರಿತು ಸ್ಥಳೀಯವಾಗಿ ಯಾವ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದಾರೆ ಎಂಬುದು ತಿಳಿದು ಬಂದಿಲ್ಲ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಪಿ. ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.