ರಾಜ್ಯದ ಅರಣ್ಯ ನಿಧಿಗಾಗಿ ಕೇಂದ್ರ ಸರಕಾರಕ್ಕೆ ನಿಯೋಗ: ಅರಣ್ಯ ಸಚಿವ ಖಂಡ್ರೆ
ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗದಿಂದ ಮನವಿ ಸಲ್ಲಿಸಲು ನಿರ್ಧಾರ
Team Udayavani, Jan 3, 2025, 6:57 AM IST
ಬೆಂಗಳೂರು: ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ರಾಜ್ಯಗಳಿಂದ ಸಂಗ್ರಹವಾದ ಹಣ ಬಿಡುಗಡೆ ಮಾಡಲು ಕೇಂದ್ರ ಸರಕಾರ ಮೀನಮೇಷ ಎಣಿಸುತ್ತಿದ್ದು, ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗವನ್ನು ಕೇಂದ್ರಕ್ಕೆ ತೆಗೆದುಕೊಂಡು ಹೋಗುವುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ಗುರುವಾರ ವಿಕಾಸಸೌಧದಲ್ಲಿ ಇಲಾಖಾ ಅಧಿಕಾರಿಗಳ ಸಭೆ ಬಳಿಕ 2025ರ ಕ್ಯಾಲೆಂಡರ್ ಬಿಡುಗಡೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವನ್ಯಜೀವಿಗಳು ಕಾಡಿನಿಂದ ಹೊರಬರುತ್ತಿದ್ದು, ಅವು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗುತ್ತಿವೆ. ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ ಎಂದರು.
ರೈಲ್ವೇ ಬ್ಯಾರಿಕೇಡ್ ಅಳವಡಿಸಲು, ಕಾರಿಡಾರ್ ನಿರ್ಮಿಸಲು ಕ್ಯಾಂಪಾದಲ್ಲಿರುವ ರಾಜ್ಯದ 1400 ಕೋಟಿ ರೂ.ಗಳನ್ನೇ ಬಿಡುಗಡೆ ಮಾಡುತ್ತಿಲ್ಲ. ಹೀಗಾಗಿ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರ ಬಳಿಗೆ ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗ ತೆಗೆದುಕೊಂಡು ಹೋಗಲು ಇಂದಿನ ಸಭೆಯಲ್ಲಿ ಚರ್ಚಿಸಿದ್ದು, ಶೀಘ್ರವೇ ಎಲ್ಲ ಸಚಿವರಿಗೂ ಪತ್ರ ಬರೆಯಲಾಗುವುದು ಎಂದರು.
ಕಳೆದ ಬಾರಿ ಬೆಂಗಳೂರಿನಲ್ಲಿ ನಡೆದ ಮಾನವ-ಆನೆ ಸಂಘರ್ಷ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಸಂದರ್ಭದಲ್ಲಿ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಝಾರ್ಖಂಡ್ ರಾಜ್ಯದ ಸಚಿವರು ಕೂಡ ಕೇಂದ್ರಕ್ಕೆ ನಿಯೋಗದಲ್ಲಿ ಆಗಮಿಸಲು ಸಮ್ಮಿತಿಸಿದ್ದರು. ಈಗ ಮತ್ತೂಮ್ಮೆ ಚರ್ಚಿಸಿ, ಎಲ್ಲ ರಾಜ್ಯಗಳ ಸಚಿವರನ್ನೂ ಆಹ್ವಾನಿಸುತ್ತೇವೆ ಎಂದು ಹೇಳಿದರು.
ಬಂಡೀಪುರ ರಾತ್ರಿ ಸಂಚಾರಕ್ಕೆ ತೊಡಕಿಲ್ಲ
ಕರ್ನಾಟಕ ಮತ್ತು ಕೇರಳಕ್ಕೆ ಸಂಪರ್ಕ ಕಲ್ಪಿಸುವ ಬಂಡೀಪುರ – ವಯನಾಡು ನಡುವೆ ರಾತ್ರಿ ಸಂಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ರಾತ್ರಿ 9ರ ವರೆಗೆ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ರಾತ್ರಿ 9 ಗಂಟೆಯ ಅನಂತರ ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ. ಆದರೆ ಇದರ ಹೊರತಾಗಿಯೂ ಎರಡೂ ಕಡೆಯಿಂದ 2 ಬಸ್‌ಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ವೈದ್ಯಕೀಯ ತುರ್ತು ಸಂದರ್ಭದಲ್ಲಿ ವಾಹನಗಳನ್ನು ಪರಿಶೀಲಿಸಿ ಬಿಡಲಾಗುತ್ತಿದೆ. ಆ್ಯಂಬುಲೆನ್ಸ್ ಓಡಾಟಕ್ಕೆ ಯಾವುದೇ ಅಡ್ಡಿ ಮಾಡುತ್ತಿಲ್ಲ. ಹೀಗಾಗಿ ರಾತ್ರಿ ಸಂಚಾರಕ್ಕೆ ಯಾವುದೇ ತೊಡಕಿಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದರು.
ಭದ್ರಾ ಅಭಯಾರಣ್ಯದಲ್ಲಿ
ಆನೆಗಳ ವಿಹಾರಧಾಮ?
ಆನೆಗಳಿಂದ ಬೆಳೆಹಾನಿ ಮತ್ತು ಜೀವಹಾನಿ ಆಗುತ್ತಿದ್ದು, ಇದನ್ನು ತಪ್ಪಿಸಲು ಭದ್ರಾ ಅಭಯಾರಣ್ಯದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾ´r… ರಿಲೀಸ್ ಸೆಂಟರ್) ನಿರ್ಮಿಸಲು ಯೋಜನೆ ರೂಪಿಸಲಾಗತ್ತಿದೆ. ಇದಕ್ಕೆ 100 ಕೋಟಿ ರೂ. ಅಗತ್ಯವಿದ್ದು, ಬಜೆಟ್‌ನಲ್ಲಿ ಅನುದಾನ ನೀಡುವಂತೆ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು.
ಅರಣ್ಯವಾಸಿಗಳ ಸ್ಥಳಾಂತರ, 15 ಲಕ್ಷ ರೂ. ಪರಿಹಾರ
ಇದಿಷ್ಟೇ ಅಲ್ಲದೆ ರಾಜ್ಯದ ರಾಷ್ಟ್ರೀಯ ಉದ್ಯಾನ, ವನ್ಯಜೀವಿ ಅಭಯಾರಣ್ಯ, ಮೀಸಲು ಅರಣ್ಯ, ಹುಲಿ ಸಂರಕ್ಷಿತ ಅರಣ್ಯ ಸೇರಿದಂತೆ ವಿವಿಧ ಅರಣ್ಯಗಳಲ್ಲಿ ಹಲವಾರು ವರ್ಷಗಳಿಂದ ಅರಣ್ಯವಾಸಿಗಳು ಜೀವಿಸುತ್ತಿದ್ದು, ಗಂಡ, ಹೆಂಡತಿ ಒಳಗೊಂಡು ಪ್ರತಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಿ ಹಂತ ಹಂತವಾಗಿ ಸ್ಥಳಾಂತರಿಸಲಾಗುವುದು. ಅದೇ ರೀತಿ ಅರಣ್ಯದೊಳಗೆ ಅಳವಡಿಸಲಾಗಿರುವ ವಿದ್ಯುತ್ ತಂತಿಗಳು ಕೆಲವೆಡೆ ಜೋತು ಬಿದ್ದಿದ್ದು, ಆನೆಗಳು ಸಾವಿಗೀಡಾಗುತ್ತಿವೆ. ವಿದ್ಯುತ್ ತಂತಿ ತೂಗಾಡದಂತೆ ಕ್ರಮ ವಹಿಸಲು ಮತ್ತು ಅಂತರ್ಗತ ಕೇಬಲ್ ಅಳವಡಿಸಲು ವಿದ್ಯುತ್ ಕಂಪೆನಿಗಳಿಗೆ ತಿಳಿಸಿರುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.