![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Aug 2, 2022, 4:54 PM IST
ಬೆಂಗಳೂರು: ಕೇಂದ್ರ ತನಿಖಾ ಸಂಸ್ಥೆಗಳ ಇಕ್ಕಳದಲ್ಲಿ ಸಿಲುಕಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಈಗ ಬಂಧನ ಭೀತಿಯಿಂದ ಬಚಾವ್ ಆಗಿದ್ದು, ದೆಹಲಿ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಮತ್ತು ಅವರ ಸಹಚರರನ್ನು ಇ.ಡಿ 2018ರಲ್ಲಿ ಬಂಧಿಸಿತ್ತು. ಅನಾರೋಗ್ಯ ಕಾರಣ ನೀಡಿ ಡಿಕೆ ಶಿವಕುಮಾರ್ ಹಾಗೂ ಸಹ ಆರೋಪಿಗಳು ತಾತ್ಕಾಲಿಕ ಜಾಮೀನು ಪಡೆದಿದ್ದರು.
ಜಾಮೀನು ವಿಸ್ತರಣೆ ವಿಚಾರಣೆ ನಡೆಸಿದ ನ್ಯಾಯಾಧೀಶ ವಿಕಾಸ್ ಧುಲ್ ಅವರು ಜುಲೈ 30 ರಂದು ಎರಡೂ ಕಡೆಯ ವಿಚಾರಣೆಯ ನಂತರ ಆದೇಶವನ್ನು ಕಾಯ್ದಿರಿಸಿದ್ದರು. ಖುದ್ದು ಉಪಸ್ಥಿತಿಗೆ ಸೂಚಿಸಿದ್ದರು. ಹೀಗಾಗಿ ಬಂಧನ ಸಾಧ್ಯತೆ ಇದೆ ಎಂಬ ಚರ್ಚೆ ಪ್ರಾರಂಭವಾಗಿತ್ತು. ಆದರೆ ಶಿವಕುಮಾರ್ ಮತ್ತು ಉದ್ಯಮಿ ಸಚಿನ್ ನಾರಾಯಣ್, ಶರ್ಮಾ ಟ್ರಾನ್ಸ್‌ಪೋರ್ಟ್ ಮಾಲೀಕ ಸುನೀಲ ಕುಮಾರ್ ಶರ್ಮಾ, ಕರ್ನಾಟಕ ಭವನದ ಉದ್ಯೋಗಿ ಆಂಜನೇಯ ಮತ್ತು ರಾಜೇಂದ್ರ ಸೇರಿದಂತೆ ಇತರ ಆರೋಪಿಗಳ ಮಧ್ಯಂತರ ಜಾಮೀನನ್ನು ಸಾಮಾನ್ಯ ಜಾಮೀನಿಗೆ ಪರಿವರ್ತಿಸಲಾಗಿದೆ.
ಇದನ್ನೂ ಓದಿ:ಮೊಟ್ಟೆ ಕೊಡಲೇಬೆಕೆಂದರೆ… ಮಿಡ್ ಡೇ ಮೀಲ್ ವಿಚಾರವಾಗಿ ಸಲಹೆ ನೀಡಿದ ತೇಜಸ್ವಿನಿ ಅನಂತ್ ಕುಮಾರ್
ಹೀಗಾಗಿ ಬಂಧನ ಭೀತಿಯಿಂದ ಶಿವಕುಮಾರ್ ಬಚಾವ್ ಆಗಿದ್ದಾರೆ. ಒಂದೆಡೆ ಪಕ್ಷದ ಒಳ ರಾಜಕಾರಣ, ಇನ್ನೊಂದೆಡೆ ವ್ಯಾಜ್ಯದಿಂದ ಬಳಲಿದ್ದ ಡಿಕೆ ಶಿವಕುಮಾರ್ ಈಗ ನಿರಾಳರಾಗಿದ್ದಾರೆ. ದೇಶ ಬಿಟ್ಟು ಹೋಗಬಾರದು, ಸಾಕ್ಷ್ಯ ನಾಶ ಮಾಡಬಾರದು ಹಾಗೂ ತನಿಖೆಗೆ ಸಹಕರಿಸುವಂತೆ ಷರತ್ತು ವಿಧಿಸಲಾಗಿದೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.