![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 31, 2022, 6:45 AM IST
ವಿಧಾನಸಭೆ: ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳ ಸಂಬಂಧ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಬುಧವಾರ ಸದನ ಆರಂಭವಾಗುತ್ತಿದ್ದಂತೆ ಮೀಸಲಾತಿ ಹೆಚ್ಚಳ ಕುರಿತು ಎಸ್‌ಟಿ ಸಮುದಾಯದ ಶಾಸಕರು ಪ್ರತಿಭಟನೆಗೆ ಮುಂದಾಗಿದ್ದರಿಂದ ಮಧ್ಯಪ್ರವೇಶಿಸಿ ಉತ್ತರಿಸಿದ ಅವರು, ನಿವೃತ್ತ ನ್ಯಾಯಮೂರ್ತಿ ಸುಭಾಷ್ ಆಡಿ ಸಮಿತಿಯಿಂದ ಮಧ್ಯಂತರ ವರದಿ ಹಾಗೂ ಅಡ್ವೋಕೇಟ್ ಜನರಲ್ ಅವರಿಂದ ವರದಿಯನ್ನು ಶೀಘ್ರವಾಗಿ ಪಡೆದು ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಿ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಹೆಚ್ಚಳ ಸಂಬಂಧ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪರಿಶಿಷ್ಟ ಪಂಗಡಕ್ಕೆ ಮೀಸಲಾತಿಯನ್ನು ಶೇ.7.5ಕ್ಕೆ ಹೆಚ್ಚಿಸಬೇಕೆಂದು ಒತ್ತಾಯಿಸಿ ಧರಣಿ ಮಾಡುತ್ತಿರುವ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರ ಮನವೊಲಿಸಲಾಗುವುದು ಎಂದು ತಿಳಿಸಿದರು.
ಹಿಂದೆ ಪರಿಶಿಷ್ಟ ಪಂಗಡಗಳು ಹಿಂದುಳಿದ ಪಂಗಡದ (ಬಿಟಿ) ಪಟ್ಟಿಯಲ್ಲಿದ್ದಾಗ ಶೇ.5ರಷ್ಟು ಮೀಸಲಾತಿಯಿತ್ತು. ಬಳಿಕ ಪರಿಶಿಷ್ಟ ಪಂಗಡಕ್ಕೆ ಸೇರಿದ್ದರಿಂದ ಮೀಸಲಾತಿ ಪ್ರಮಾಣ ಕಡಿಮೆಯಾಗಿದ್ದು, ಶೇ. 7.5ಕ್ಕೆ ಮೀಸಲಾತಿ ಹೆಚ್ಚಿಸಬೇಕೆಂಬ ಬೇಡಿಕೆಯಿದೆ. ಒಟ್ಟು ಮೀಸಲಾತಿ ಪ್ರಮಾಣ ಶೇ.50ಕ್ಕಿಂತ ಹೆಚ್ಚಾಗಬೇಕು ಎಂಬ ಒತ್ತಾಯವನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿದೆ. ಹಾಗಾಗಿ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾಗಿದೆ ಎಂದು ಹೇಳಿದರು.
ಪರಿಶಿಷ್ಟ ಜಾತಿ, ಪಂಗಡದವರು ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೋರಿದ್ದರೆ ಹಿಂದುಳಿದ ವರ್ಗದಲ್ಲಿರುವ ಕೆಲವರು ಪ್ರವರ್ಗ 2ಎಗೆ, ಪ್ರವರ್ಗ 3ಬಿನಲ್ಲಿರುವವರು ಪ್ರವರ್ಗ 2ಎಗೆ ಹಾಗೂ ಯಾವುದೇ ಮೀಸಲಾತಿಯಿಲ್ಲದವರು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ಮನವಿ ಮಾಡಿದ್ದಾರೆ.
ಪರಿಶಿಷ್ಟ ಜಾತಿ, ಪಂಗಡದವರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕಿದ್ದು, ಅದಕ್ಕೆ ನಮ್ಮ ಬದ್ದತೆ ಇದೆ. ಇಂದಿರಾ ಸಹಾನಿ ಪ್ರಕರಣದಲ್ಲಿ ವಿಶೇಷ ಸಂದರ್ಭವೆಂದು ಸಾಬೀತುಪಡಿಸಿದರೆ ಮೀಸಲಾತಿಯನ್ನು ಶೇ. 50ಕ್ಕಿಂತ ಹೆಚ್ಚಿಸಲು ಸಣ್ಣ ಅವಕಾಶವಿದೆ. ಅದನ್ನು ಬಳಸಿಕೊಳ್ಳುವ ಯಾವ ರೀತಿ ಮೀಸಲಾತಿ ಹೆಚ್ಚಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ವರದಿ ನೀಡಲು ಅಡ್ವೋಕೇಟ್ ಜನರಲ್‌ಗೆ ಸೂಚಿಸಲಾಗಿದೆ ಎಂದು ಹೇಳಿದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಇಂದಿರಾ ಸಹಾನಿ ಪ್ರಕರಣದಲ್ಲಿ ಒಟ್ಟು ಮೀಸಲಾತಿ ಪ್ರಮಾಣ ಶೇ.50 ಮೀರಬಾರದು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಆದರೆ ವಿಶೇಷ ಸಂದರ್ಭವೆಂದು ಮನವರಿಕೆ ಮಾಡಿಕೊಟ್ಟರೆ ಮೀಸಲಾತಿ ಹೆಚ್ಚಿಸಲು ಅವಕಾಶವಿದೆ. ಆದರೆ ಈಗಾಗಲೇ ಮುಂದುವರಿದ ಜಾತಿಗಳ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿಯನ್ನು ಕೇಂದ್ರ ಸರಕಾರ ಕಲ್ಪಿಸಿದ್ದು, ಒಟ್ಟಾರೆ ಮೀಸಲಾತಿ ಪ್ರಮಾಣ ಶೇ.60ರಷ್ಟಾಗಿದೆ ಎಂದು ಹೇಳಿದರು.
ನಾಗಮೋಹನ್‌ದಾಸ್ ಸಮಿತಿಯು ಪರಿಶಿಷ್ಟ ಪಂಗಡಕ್ಕೆ ಶೇ.7ರಷ್ಟು ಮೀಸಲಾತಿ ಕಲ್ಪಿಸುವಂತೆ ಶಿಫಾರಸು ಮಾಡಿದೆ. ಹಿಂದುಳಿದ ವರ್ಗಗಳ ಆಯೋಗವಿರುವಾಗ ಸರಕಾರ ನಿವೃತ್ತ ನ್ಯಾ. ಸುಭಾಷ್ ಆಡಿ ಸಮಿತಿ ರಚಿಸಿರುವುದು ಎಷ್ಟು ಸೂಕ್ತ ಎಂಬ ಬಗ್ಗೆ ಕಾನೂನುತಜ್ಞರ ಸಲಹೆ ಪಡೆಯಬೇಕು ಎಂದರು.
ಈಗಾಗಲೇ ತಮಿಳುನಾಡು ಸೇರಿದಂತೆ ಇತರೆ ರಾಜ್ಯಗಳಲ್ಲಿ ಮೀಸಲಾತಿ ಶೇ. 50ಕ್ಕಿಂತ ಹೆಚ್ಚಾಗಿದೆ. ರಾಜ್ಯದಲ್ಲೂ ಜನಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ/ ಪಂಗಡದವರಿಗೆ ಮೀಸಲಾತಿ ನೀಡದಿದ್ದರೆ ಅನ್ಯಾಯವಾಗಲಿದೆ ಎಂದು ಹೇಳಿದರು.
ಟಿ.ರಘುಮೂರ್ತಿ ಮಾತನಾಡಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ವಿಚಾರವನ್ನು ಸುಭಾಷ್ ಆಡಿ ಸಮಿತಿಯಿಂದ ಬೇರ್ಪಡಿಸಿ ನಾಗಮೋಹನ್‌ದಾಸ್ ಸಮಿತಿ ವರದಿ ಜಾರಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇಂದಿರಾ ಸಹಾನಿ ಪ್ರಕರಣದ ತೀರ್ಪಿನಂತೆ ವಿಶೇಷ ಸಂದರ್ಭವೆಂದು ಪರಿಗಣಿಸಿ ಮೀಸಲಾತಿ ಹೆಚ್ಚಿಸಲು ಅವಕಾಶವಿದೆ. ನಾಗಮೋಹನ್‌ದಾಸ್ ಸಮಿತಿ ವರದಿ ನೀಡಿದ್ದು, ಸ್ವಾಮೀಜಿಗಳು ಧರಣಿ ಆರಂಭಿಸಿ 49 ದಿನಗಳಾಗಿವೆ. ಸಮುದಾಯದಲ್ಲಿ ಒಗಟ್ಟು ಇದ್ದಿದ್ದರೆ 2 ದಿನವೂ ಸ್ವಾಮೀಜಿಗಳು ಧರಣಿ ನಡೆಸುವ ಸ್ಥಿತಿ ಬರುತ್ತಿಲ್ಲ. ಸಚಿವರನ್ನು ಕಳುಹಿಸುವ ಬದಲಿಗೆ ಮುಖ್ಯಮಂತ್ರಿಯವರೇ ಖುದ್ದಾಗಿ ಸ್ವಾಮೀಜಿಗಳ ಮನವೊಲಿಸಬೇಕು.
– ರಾಜೂಗೌಡ, ಬಿಜೆಪಿ ಶಾಸಕ
ಸುಭಾಷ್ ಆಡಿ ಸಮಿತಿ ವರಿಯನ್ನು ಅತಿ ಶೀಘ್ರವಾಗಿ ಪಡೆಯುವುದು ಎಂದರೆ ಎಂದರೆ 10 ದಿನವೋ, ಒಂದು ತಿಂಗಳ್ಳೋ ಎಂದು ಸಿಎಂ ಸ್ಪಷ್ಟಪಡಿಸಬೇಕು. ಈಗಾಗಲೇ ವಿಳಂಬವಾಗಿದೆ.
– ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ಶಾಸಕ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.