ಅವಹೇಳನಕಾರಿ ಹೇಳಿಕೆ: ಕ್ರಮಕ್ಕೆ ಪ್ರತಾಪ ಸಿಂಹ ಆಗ್ರಹ
Team Udayavani, Feb 13, 2017, 3:45 AM IST
ತುಮಕೂರು: ಹಿಂದೂ ಧರ್ಮ ಹಾಗೂ ಹಿಂದು ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಬೇಕಾದ ರಾಜ್ಯ ಸರ್ಕಾರ ಹಿಂದೂ ಧರ್ಮದ ವಿರುದ್ಧ ಮಾತನಾಡಿದವರನ್ನು ಬಿಟ್ಟು ಅವರು ಮಾತನಾಡಿದ್ದನ್ನು ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲಗಳಲ್ಲಿ ಪಸರಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗುತ್ತಿರುವುದು ಖಂಡನೀಯ. ಸರ್ಕಾರ ಈ ಪ್ರವೃತ್ತಿ ಬದಲಿಸಿಕೊಳ್ಳದಿದ್ದಲ್ಲಿ ಯುವ ಮೋರ್ಚಾದಿಂದ
ರಾಜಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ರಾಜ್ಯ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪ್ರತಾಪ
ಸಿಂಹ ಎಚ್ಚರಿಸಿದ್ದಾರೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ 10-12 ದಿನಗಳಲ್ಲಿ ಸಾಮಾಜಿಕ
ಜಾಲತಾಣಗಳಲ್ಲಿ ಹಿಂದೂ ಧರ್ಮ ಹಾಗೂ ಹಿಂದು ಧರ್ಮದ ಹೆಣ್ಣುಮಕ್ಕಳ ಬಗ್ಗೆ ಅಸಭ್ಯವಾಗಿ ಮಾತನಾಡಿರುವ ಹಾಗೂ ಹಿಂದುಗಳಿಗೆ ಪ್ರಾಣಬೆದರಿಕೆ ಹಾಕಿರುವ ವಿಡಿಯೋಗಳು ಪ್ರಸಾರವಾಗುತ್ತಿರುವುದು ಬಹುಚರ್ಚಿತ ವಿಷಯವಾಗಿದೆ.
ಸಿಡಿಯಲ್ಲಿ ಬಳಸಿರುವ ಭಾಷೆ, ತೋರಿರುವ ಮನಸ್ಥಿತಿ, ದುರುದ್ದೇಶದ ಬಗ್ಗೆ ರಾಜ್ಯದ ಜನರಲ್ಲಿ ಜಿಗುಪ್ಸೆ, ಆಕ್ರೋಶ ಮಡುಗಟ್ಟಿದ್ದು, ಅದು ಯಾವಾಗ ಸ್ಫೋಟಿಸುತ್ತದೆಯೋ ಗೊತ್ತಿಲ್ಲ, ಅದಕ್ಕಿಂತ ಮೊದಲು ಸರ್ಕಾರ ಎಚ್ಚೆತ್ತುಕೊಂಡು ಅದಕ್ಕೆ ಕಾರಣರಾದವರನ್ನು ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
US Consulate: ಬೆಂಗಳೂರಲ್ಲಿ ಜ.17ಕ್ಕೆ ಅಮೆರಿಕ ದೂತಾವಾಸ ಕಚೇರಿ ಆರಂಭ
Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ?
ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ
Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.