![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 2, 2024, 11:50 PM IST
ಬೆಂಗಳೂರು: ಮುಖ್ಯಮಂತ್ರಿ ಕುರ್ಚಿ ಖಾಲಿ ಯಿಲ್ಲ. ಇದ್ದಿದ್ದರೆ ಮಾತನಾಡಬಹುದಿತ್ತು. ಸಿದ್ದರಾಮಯ್ಯ ನೇತೃತ್ವದಲ್ಲಿ ಸರಕಾರ ಮುಂದುವರಿಯಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಹಿರಿಯರಾದ ಆರ್.ವಿ. ದೇಶಪಾಂಡೆ ಆಸೆ ಪಡುವುದು ತಪ್ಪಲ್ಲ. ಆದರೆ ಮಾಧ್ಯಮಗಳ ಮುಂದೆ ಮಾತನಾಡಬಾರದಿತ್ತು. ಹಿರಿಯರಾದ ಅವರಿಗೆ ಏನು ಗೌರವ ನೀಡಬೇಕೋ ಅದನ್ನು ನೀಡೋಣ ಎಂದು ತಾವು ಸಿಎಂ ಸ್ಥಾನದ ಆಕಾಂಕ್ಷಿ ಎಂದ ದೇಶಪಾಂಡೆ ಅವರಿಗೆ ತೀಕ್ಷ್ಣವಾಗಿ ಹೇಳಿದರು.
ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ವಿರುದ್ಧವಾಗಿ ತೀರ್ಪು ಬಂದರೆ ಮುಂದಿನ ನಡೆ ಏನು ಎಂದು ಕೇಳಿದಾಗ, ಯಾವ ವ್ಯತಿರಿಕ್ತವೂ ಆಗುವುದಿಲ್ಲ. ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ, ಕೆಲಸ ಮಾಡುತ್ತಾರೆ ಎಂದರು. ಕಾಂಗ್ರೆಸ್‌ನವರು ಸತ್ಯಹರಿಶ್ಚಂದ್ರರೇ ಎಂಬ ಸಂಸದ ಡಾ| ಕೆ. ಸುಧಾಕರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್‌ನಲ್ಲಿ ಇದ್ದು ಈಗ ಬಿಜೆಪಿಗೆ ಹೋಗಿರುವ ಸಂಸದ ಸುಧಾಕರ್ ತಮ್ಮ ಹೇಳಿಕೆ ಬಗ್ಗೆ ಮೊದಲು ಪ್ರಮಾಣ ಪತ್ರ ನೀಡಲಿ. ಇನ್ನು ಅವರ ರಕ್ತ, ಆಚಾರ-ವಿಚಾರ ಎಲ್ಲವೂ ಕಾಂಗ್ರೆಸ್ ಇತ್ತು. ಈಗ ನಾಲ್ಕೆçದು ವರ್ಷದಿಂದ ಬದಲಾಗಿದೆ ಎಂದರು.
ನನಗೂ ಸಿಎಂ ಆಗುವಾಸೆ ಇದೆ, ಕುರ್ಚಿ ಖಾಲಿ ಇಲ್ಲ: ಜಮೀರ್
ಧಾರವಾಡ: ನನಗೂ ಮುಖ್ಯಮಂತ್ರಿ ಆಗುವ ಆಸೆಯಿದೆ. ಆದರೆ ಸದ್ಯ ಕುರ್ಚಿ ಖಾಲಿ ಇಲ್ಲ ಎಂದು ವಕ್ಫ್ ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ಹಿರಿಯ ಮುಖಂಡ ಆರ್.ವಿ. ದೇಶಪಾಂಡೆ ಮುಖ್ಯಮಂತ್ರಿ ಆಗುವುದಾಗಿ ಹೇಳಿದ್ದು ಸಹಜ. ಅವರ ಆಸೆಯಲ್ಲಿ ತಪ್ಪೇನಿಲ್ಲ. 8-9 ಬಾರಿ ಶಾಸಕರಾಗಿದ್ದಾರೆ, ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಸಚಿವರಾಗಿ ಅನುಭವ ಹೊಂದಿದ್ದಾರೆ. ಇದೀಗ ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ ವ್ಯಕ್ತಪಡಿಸಿದ್ದಾರೆ. ಎರಡೂವರೆ ವರ್ಷಕ್ಕೆ ಸಿಎಂ ಸಿದ್ದರಾಮಯ್ಯ ಬದಲಾಗುತ್ತಾರೆ ಎಂದು ಹೇಳಿದವರಾರು? ರಾಹುಲ್ ಗಾಂಧಿ ಹೇಳಿದ್ದಾರೆಯೇ? ಸ್ವತಃ ಡಿಕೆಶಿ ಅವರೇ ಸಿದ್ದರಾಮಯ್ಯ ಬೆಂಬಲಕ್ಕೆ ನಿಂತಿದ್ದಾರೆ. ಹೀಗಾಗಿ ಸಿಎಂ ಬದಲಾವಣೆ ಇಲ್ಲವೇ ಇಲ್ಲ ಎಂದರು.
ದೇಶಪಾಂಡೆ ಸಿಎಂ ಆಗಲಿ, ಖುಷಿ ಪಡುವೆ: ವೈದ್ಯ
ಕಾರವಾರ: ಆರ್.ವಿ. ದೇಶಪಾಂಡೆ ಹಿರಿಯರು, ನನ್ನ ಜಿಲ್ಲೆಯವರು. ಅವರು ಮುಖ್ಯಮಂತ್ರಿಯಾದರೆ ಖುಷಿ ಪಡುವ ಮೊದಲಿಗ ನಾನು. ಆದರೆ ಪಕ್ಷದ ಹೈಕಮಾಂಡ್‌ನಿಂದ ಹಿಡಿದು ಸಾಮಾನ್ಯ ಕಾರ್ಯಕರ್ತರ ಬೆಂಬಲ ಸಿದ್ದರಾಮಯ್ಯ ಅವರಿಗೆ ಇದೆ. ದೇಶಪಾಂಡೆ – ಸಿದ್ದರಾಮಯ್ಯ ಸ್ನೇಹಿತರು. ಅವರಿಗೆ ಸಿದ್ದರಾಮಯ್ಯ ಹೇಳಿರಬೇಕು ಎಂದು ಸಚಿವ ಮಂಕಾಳ ವೈದ್ಯ ಹೇಳಿ ದರು. ಸುದ್ದಿಗಾರರ ಜತೆ ಮಾತನಾಡಿ, ದೇಶಪಾಂಡೆ ಅವರ ಮಾತಿನ ಧಾಟಿಯಲ್ಲಿ ಏನು ಅಡಗಿದೆ ಎಂಬುದು ಸ್ಪಷ್ಟವಾಗಿಲ್ಲ. ಸಿದ್ದರಾಮಯ್ಯ ಇಂದು, ನಾಳೆ ಹಾಗೂ ಮುಂದೆ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.