ಸುರಕ್ಷಿತ ಏರ್ ಶೋಗೆ ರಾಜ್ಯ ಸಿದ್ಧ: ಸಿಎಂ ಭರವಸೆ
'ಏರೋ ಇಂಡಿಯಾ- 2021', ಸಿಎಂ- ರಕ್ಷಣ ಸಚಿವರ ಸಭೆ
Team Udayavani, Oct 8, 2020, 7:04 AM IST
ಬೆಂಗಳೂರು: ‘ಏರೋ ಇಂಡಿಯಾ- 2021’ ಪ್ರದರ್ಶನದಲ್ಲಿ ಪಾಲ್ಗೊಳ್ಳುವ ಅಂತಾರಾಷ್ಟ್ರೀಯ ಗಣ್ಯರು, ಅಧಿಕಾರಿ/ ಸಿಬಂದಿ ಹಾಗೂ ಸಾರ್ವಜನಿಕರಿಗೆ ಥರ್ಮಲ್ ಸ್ಕ್ರೀನಿಂಗ್, ನಿಯಮಿತ ಸ್ಯಾನಿಟೈಸೇಶನ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸಹಿತ ಇತರ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಕ್ಷಣ ಸಚಿವರಿಗೆ ತಿಳಿಸಿದ್ದಾರೆ.
ಕೇಂದ್ರದ ರಕ್ಷಣ ಉತ್ಪನ್ನಗಳ ಇಲಾಖೆಯು ರಾಜ್ಯ ಸರಕಾರದ ಸಹಯೋಗದಲ್ಲಿ 13ನೇ ಆವೃತ್ತಿಯ ಅಂತಾರಾಷ್ಟ್ರೀಯ ವೈಮಾನಿಕ ಪ್ರದರ್ಶನ ‘ಏರೋ ಇಂಡಿಯಾ- 2021’ ಕಾರ್ಯಕ್ರಮ ಸಂಬಂಧ ಬುಧವಾರ ರಕ್ಷಣ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಜರಗಿದ ರಾಯಭಾರಿಗಳ ದುಂಡು ಮೇಜಿನ ವರ್ಚುವಲ್ ಸಭೆಯಲ್ಲಿ ಅವರು ಮಾತನಾಡಿದರು.
ಸವಾಲಿನ ವಿಷಯ
ಹಿಂದಿನ 12 ಏರ್ ಶೋ ಆವೃತ್ತಿಗಳಿಗೆ ಆತಿಥ್ಯ ನೀಡಿ ರಾಜ್ಯಕ್ಕೆ ಉತ್ತಮ ಅನುಭವವಿದೆ. 2021ರ ಫೆ. 3ರಿಂದ 7ರ ವರೆಗೆ ನಡೆಯಲಿರುವ 13ನೇ ಆವೃತ್ತಿಯ ‘ಏರೋ ಇಂಡಿಯಾ- 2021’ಕ್ಕೆ ಕರ್ನಾಟಕ ಆತಿಥೇಯ ರಾಜ್ಯವಾಗಿ ಮತ್ತೆ ಆಯ್ಕೆಯಾಗಿರುವುದು ಹೆಮ್ಮೆಯ ವಿಚಾರ. ಕೋವಿಡ್ ನಡುವೆ ಈ ಮಹತ್ವದ ಕಾರ್ಯಕ್ರಮವನ್ನು ಆಯೋಜಿಸುವುದು ರಾಜ್ಯ ಹಾಗೂ ರಕ್ಷಣ ಸಚಿವಾಲಯಕ್ಕೆ ಸವಾಲಿನ ವಿಷಯವಾಗಿದೆ ಎಂದರು.
ದೇಶದಲ್ಲಿ ಅತಿ ದೊಡ್ಡ ರಕ್ಷಣ ಉತ್ಪಾದಡಬ್ಲ್ಯು ವಲಯ: ರಾಜನಾಥ್
ರಕ್ಷಣ ಸಚಿವ ರಾಜನಾಥ್ ಸಿಂಗ್ ಮಾತನಾಡಿ, ಅತಿಥಿ ದೇವೋಭವ ಎಂಬ ಮಾತಿನಲ್ಲಿ ನಂಬಿಕೆ ಇಟ್ಟವರು ನಾವು. ಶಾಂತಿಗಾಗಿ ರಕ್ಷಣ ಇಲಾಖೆಯನ್ನು ಇನ್ನಷ್ಟು ಸಬಲಗೊಳಿಸಲು ಪೂರಕವಾಗಿ ರಕ್ಷಣ ನೀತಿ ಅಳವಡಿಸಿಕೊಳ್ಳುವುದು ನಮ್ಮ ಉದ್ದೇಶ.
ದೇಶವು ಅತಿ ದೊಡ್ಡ ರಕ್ಷಣ ಉತ್ಪಾದನ ವಲಯ ಹೊಂದಿದೆ. “ಏರೋ ಇಂಡಿಯಾ- 2021’ರ ಮೂಲಕ ಭಾರತ ವೈಮಾನಿಕ ಮತ್ತು ಬಾಹ್ಯಾಕಾಶ ಉದ್ಯಮದಲ್ಲಿ ಮುಂಚೂಣಿಯ ಐದು ರಾಷ್ಟ್ರಗಳಲ್ಲಿ ಒಂದಾಗಿರಬೇಕು ಎಂಬುದು ನಮ್ಮ ಆಶಯ ಎಂದು ಹೇಳಿದರು.
ರಕ್ಷಣಾ ಖಾತೆ ರಾಜ್ಯ ಸಚಿವ ಶ್ರೀಪಾದ್ ನಾಯಕ್, ವಿವಿಧ ರಾಷ್ಟ್ರಗಳ ರಾಯಭಾರಿಗಳು, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಸಹಿತ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.