ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ದೇವೇಗೌಡ ಕಳವಳ
Team Udayavani, Aug 30, 2019, 3:05 AM IST
ಬೆಂಗಳೂರು: ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಒಂದೆಡೆ ಇದ್ದರೆ ಮತ್ತೂಂದೆಡೆ, ಆರ್‌ಬಿಐನಿಂದ ಇದೇ ಮೊದಲ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದ ಹಣ ಪಡೆಯಲಾಗಿದೆ. ಆರ್ಥಿಕ ಪರಿಸ್ಥಿತಿ ಆತಂಕಕಾರಿಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕಳವಳ ವ್ಯಕ್ತಪಡಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಆರ್‌ಬಿಐನಿಂದ ಹಣ ಪಡೆದಿರುವ ಬಗ್ಗೆ ಈಗಿನ ಗವರ್ನರ್, ಹಿಂದಿನ ಗವರ್ನರ್‌ಗಳ ಹೇಳಿಕೆ ಗಮನಿಸಿದ್ದೇನೆ ಎಂದು ಹೇಳಿದರು.
ವಿದೇಶಿ ನೇರ ಬಂಡವಾಳ ಎಂದು ಹೇಳುತ್ತಿದ್ದಾರೆ. ಹಲವು ಸರ್ಕಾರಿ ಇಲಾಖೆಗಳ ನೌಕರರಿಗೆ ಸಂಬಳ ಆಗಿಲ್ಲ, ಸರ್ಕಾರಿ ಸ್ವಾಮ್ಯದ ಹಲವು ಸಂಸ್ಥೆಗಳನ್ನು ಖಾಸಗೀಕರಣ ಮಾಡಲಾಗುತ್ತಿದೆ. ಇನ್ನೂ ಹಲವು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಗೆ ಕೊಡುವ ಸಾಧ್ಯತೆಯಿದೆ. ಆರ್ಥಿಕ ಸಂಕಷ್ಟದಿಂದ ಹಲವರು ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ ಎಂದರು.
ವಾಜಪೇಯಿ ಕಾಲದಲ್ಲಿ ಅಶೋಕಾ ಹೋಟೆಲ್ ಮಾರಿದಂತೆ ಇನ್ನೂ ಹಲವು ಸಂಸ್ಥೆಗಳನ್ನು ಮಾರಾಟ ಮಾಡಲೂ ಬಹುದು. ಏನೇನು ಮಾಡ್ತಾರೋ ನೋಡೋಣ. ಬೆಂಗಳೂರಿನ ಪೀಣ್ಯದಲ್ಲಿ ಯಾವ ಪರಿಸ್ಥಿತಿ ನಿರ್ಮಾಣ ಆಗಿದೆ ಎಂಬುದು ಗೊತ್ತಿದೆ ಎಂದರು. ರಾಜ್ಯದಲ್ಲಿ ಮೊದಲ ಬಾರಿಗೆ ಮೂವರು ಉಪ ಮುಖ್ಯಮಂತ್ರಿ ಮಾಡಲಾಗಿದೆ. ಜಾತಿಗೊಂದು ಅಂತ ಮಾಡಿದರೆ ಇನ್ನೂ ಹಲವು ಜಾತಿಗಳಿವೆ.
ಯಾವ ಆಧಾರದಲ್ಲಿ ಎಂಬುದು ಗೊತ್ತಿಲ್ಲ, ಬಿಜೆಪಿಯಲ್ಲೂ ಹಲವು ಗೊಂದಲಗಳಿವೆ ಎಂದು ತಿಳಿಸಿದರು. ಸಿದ್ದರಾಮಯ್ಯ ಅವರನ್ನು ರಾಜಕೀಯವಾಗಿ ಮುಗಿಸಲು ಯಾರಿಂದಲೂ ಆಗುವುದಿಲ್ಲ ಎಂಬ ಕಾಗಿನೆಲೆ ಶ್ರೀ ಹೇಳಿಕೆ ಬಗ್ಗೆ ಕೇಳಿದಾಗ, ಅವರು ದೊಡ್ಡವರು, ನಾನೇನೂ ಮಾತನಾಡಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.