“ಗಾಂಧೀಜಿ, ಶಾಸ್ತ್ರೀ ಆದರ್ಶಗಳೇ ದಾರಿ ದೀಪ’: ಎಚ್.ಡಿ.ದೇವೇಗೌಡ
Team Udayavani, Oct 3, 2018, 11:34 AM IST
ಬೆಂಗಳೂರು: ಪ್ರಜಾಪ್ರಭುತ್ವ ಉಳಿಸಲು ಮಹಾತ್ಮಾ ಗಾಂಧಿ ಮತ್ತು ಲಾಲ್‌ಬಹದ್ದೂರ್ ಶಾಸ್ತ್ರೀ ಅವರ ಆದರ್ಶಗಳೇ ನಮಗೆ ದಾರಿದೀಪ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಆಯೋಜಿಸಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಗಾಂಧಿ ಮತ್ತು ಶಾಸ್ತ್ರೀ ಅವರ ಜನ್ಮ ದಿನಾಚರಣೆಗೆ ಮಾತ್ರ ಸೀಮಿತವಾಗದೆ ಅವರ ಆದರ್ಶ ಪಾಲಿಸಬೇಕು ಎಂದು ಹೇಳಿದರು.ಲಾಲ್ ಬಹದ್ದೂರ್ ಶಾಸ್ತ್ರೀಯವರು ಉತ್ತಮ ಆಡಳಿತ ಹಾಗೂ ಪ್ರಾಮಾಣಿಕತೆಗೆ ಹೆಸರಾಗಿದ್ದರು. ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶಾಸ್ತ್ರೀಯವರ ಜೀವನ ಹಾಗೂ ಸರಳತೆ ತಿಳಿದುಕೊಳ್ಳಬೇಕು. ಜೀವನದಲ್ಲಿ ಪಾಲಿಸಬೇಕು ಎಂದು ಕರೆ ನೀಡಿದರು.
ಇಂದು ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಜಾತ್ಯತೀತ ಶಕ್ತಿಗಳನ್ನು ಉಳಿಸಿಕೊಳ್ಳಲು ಹೋರಾಟ ಮಾಡಬೇಕು. ಈ ವಿಚಾರದಲ್ಲಿ ತ್ಯಾಗ ಮನೋಭಾವವೂ ಅಗತ್ಯ ಎಂದು ಹೇಳಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಮಾತನಾಡಿ. ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿಯವರ ಜೀವನವೇ ಒಂದು ಸಂದೇಶ. ಎಲ್ಲ ಜಾತಿ ಜನಾಂಗ ಒಟ್ಟಾಗಿ ಬದುಕಬೇಕು ಎನ್ನುವ ಆಶಯ ಮತ್ತು ಸಂದೇಶ ಸಾರಿದವರು ಗಾಂಧೀಜಿಯವರು ಎಂದು ಹೇಳಿದರು. ಲಾಲ್ ಬಹದ್ದೂರ್ ಶಾಸ್ತ್ರೀಯವರು ಪ್ರಾಮಾಣಿಕ ರಾಜಕಾರಣಕ್ಕೆ ಜೀವಂತ ಸಾಕ್ಷಿಯಾಗಿದ್ದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಲೈಂಗಿಕದೌರ್ಜನ್ಯ: ಆರೋಪಿ ವಿಚಾರಣೆ ರದ್ದತಿಗೆ ಹೈಕೋರ್ಟ್ ನಕಾರ
Dharwad; ನಾಲಿಗೆ ಹರಿಬಿಡುವ ನಾಯಕರ ಮೇಲೆ ಕ್ರಮ ಆಗಬೇಕು: ಶಾಸಕ ಬೆಲ್ಲದ್
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.