ಮರಾಠರಿಗೆ ಪ್ರತ್ಯೇಕ ಅಭಿವೃಧ್ಧಿ ಪ್ರಾಧಿಕಾರ ಸ್ಥಾಪನೆ ಸಿಎಂ ನಿರ್ಧಾರ ತಪ್ಪಲ್ಲ: ಸುಧಾಕರ್
Team Udayavani, Nov 17, 2020, 6:53 PM IST
ಚಿಕ್ಕಬಳ್ಳಾಪುರ: ಸ್ಥಳೀಯವಾಗಿ ಇರುವಂತಹ ಸಮಸ್ಯೆಗಳನ್ನು ಅರಿತು ಮತ್ತು ಬೇಡಿಕೆಗಳನ್ನು ಆಧರಿಸಿ ಮರಾಠ ಸಮಾಜದ ಅಭಿವೃಧ್ಧಿಗಾಗಿ ಮುಖ್ಯಮಂತ್ರಿಗಳು ಪ್ರತ್ಯೇಕವಾಗಿ ಪ್ರಾಧಿಕಾರವನ್ನು ಮಾಡಿದ್ದಾರೆ ಆದರೆ ಪ್ರಾಧಿಕಾರ ರಚನೆಯಿಂದ ಕನ್ನಡ ಅಭಿಮಾನಿಗಳಿಗೆ ಮತ್ತು ಕನ್ನಡಿಗರಿಗೆ ಯಾವುದೇ ರೀತಿಯ ಅನ್ಯಾಯ ಆಗುವಂತಹ ಅವಕಾಶವಿಲ್ಲ ಹಾಗಾಗಿ ಯಾರು ಕೂಡ ತಪ್ಪುಗ್ರಹಿಕೆ ಮಾಡಿಕೊಳ್ಳುವುದು ಬೇಡ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಆಯೋಜಿಸಿದ್ದ 67ನೇ ಅಖಿಲಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುಧ್ಧಿಗಾರರೊಂದಿಗೆ ಮಾತನಾಡಿದ ಅವರು ಕೇವಲ ಒಂದು ಸಮುದಾಯಕ್ಕೆ ಅಭಿವೃಧ್ಧಿಗೆ ಪ್ರಾಧಿಕಾರ ರಚನೆ ಮಾಡಿ 50 ಕೋಟಿ ರೂಗಳನ್ನು ನೀಡಿದ ತಕ್ಷಣ ಅದು ಬಹಳ ದೊಡ್ಡತಪ್ಪು ಎಂದು ನನ್ನಗೆ ಅನಿಸುವುದಿಲ್ಲ ಯಾಕೆಂದರೆ ನಾವು ಗಡಿ-ನದಿ-ಭಾಷೆ ವಿಷಯದಾಗಲಿ ನಮ್ಮ ಬಿಜೆಪಿ ಪಕ್ಷ ಮತ್ತು ಸರ್ಕಾರ ರಾಜಿ ಮಾಡಿಕೊಳ್ಳುವ ಪ್ರಶ್ನೆಯಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು ರಾಜ್ಯದ ಒಂದು ಇಂಚ್ ಜಮೀನು ಯಾರಿಗೂ ನೀಡುವುದಿಲ್ಲ ನಮಗೆ ನ್ಯಾಯಬದ್ದವಾಗಿ ಬರಬೇಕಾಗಿರುವ ನೀರಿನ ಪಾಲಿನಲ್ಲಿ ರಾಜಿಯಾಗುವುದಿಲ್ಲ ಭಾಷೆಯಲ್ಲೂ ಆಗುವುದಿಲ್ಲ ಎಂದರು.
ವೀರಶೈವ ಲಿಂಗಾಯತ್ ಸಮಾಜದವರಿಗೆ ಪ್ರತ್ಯೇಕ ಅಭಿವೃಧ್ಧಿ ಮಂಡಳಿಯನ್ನು ಸ್ಥಾಪಿಸಲು ಮುಖ್ಯಮಂತ್ರಿಗಳು ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಅನೇಕ ಅಭಿವೃಧ್ಧಿ ನಿಗಮಗಳು ಮಾಡುವುದರ ಮೂಲಕ ಇವತ್ತು ಆಯಾ ಸಮುದಾಯಗಳಿಗೆ ಹೆಚ್ಚಿನ ಶಕ್ತಿ ಬರುತ್ತದೆ ಎಂಬ ಆಲೋಚನೆಯಿಂದ ಮುಖ್ಯಮಂತ್ರಿಗಳು ನಿಗಮವನ್ನು ಮಾಡಿದ್ದಾರೆ ಆದರೇ ಮುಂದಿನ ದಿನಗಳಲ್ಲಿ ಎಲ್ಲಾ ಸಮುದಾಯಗಳಿಂದ ಹೆಚ್ಚಿನ ಬೇಡಿಕೆಗಳು ಬರುವ ಸಾಧ್ಯತೆ ಹೆಚ್ಚಾಗಿದೆ ಅದನ್ನು ಮುಖ್ಯಮಂತ್ರಿಗಳು ಹೇಗೆ ನಿರ್ವಹಿಸುತ್ತಾರೆ ಎಂದು ಕಾದುನೋಡಬೇಕಾಗಿದೆ ಎಂದರು.
ರಾಜ್ಯದಲ್ಲಿ ಕಾಲೇಜುಗಳನ್ನು ಆರಂಭಿಸಲು ಮಾರ್ಗಸೂಚಿಗಳನ್ನು ನೀಡಿದ್ದೇವೆ ಆ ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದೇವೆ ಅದನ್ನು ಬುಧ್ಧಿವಂತರು ಮತ್ತು ಪ್ರಜ್ಞಾವಂತರಾಗಿರುವ ವಿದ್ಯಾರ್ಥಿಗಳು ಕೋವಿಡ್-19 ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುತ್ತಾರೆ ಎಂಬ ವಿಶ್ವಾಸ ತಮಗಿದೆ ಎಂದ ಸಚಿವರು ರಾಜ್ಯದಲ್ಲಿ ನಡೆದ ಪರೀಕ್ಷೆಗಳಲ್ಲಿ ಯಾವುದೇ ಅವಘಡಗಳು ಸಂಭವಿಸಿಲ್ಲ ಎಂಟೂವರೆ ಲಕ್ಷ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆ ನೀಡಿದ್ದಾರೆ ಯಾವುದೇ ರೀತಿಯ ಆತಂಕದ ವಾತಾವರಣ ಕಂಡುಬಂದಿಲ್ಲ ಹಾಗಾಗಿ ಜನಜೀವನದಲ್ಲಿ ಯುವಕರ ಶೈಕ್ಷಣಿಕ ಪ್ರಗತಿ ಸಹ ಆಗಬೇಕಾಗಿದ್ದರಿಂದ ಕಾಲೇಜುಗಳನ್ನು ಆರಂಭಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಸೋಂಕು ಹರಡುವುದಿಲ್ಲ ಎಂಬ ವಿಶ್ವಾಸ ತಮಗಿದೆ ಎಂದರು.
ಜಿಲ್ಲೆಯಾಗಿ 11 ವರ್ಷ ಆಗಿದೆ ಉಭಯ ಜಿಲ್ಲೆಯಲ್ಲಿ ಸಮಾನವಾದ ಹಾಲು ಉತ್ಪಾದಕರು ಮತ್ತು ಕೃಷಿಕರಿದ್ದಾರೆ ಹೈನುಗಾರಿಕೆ ಮತ್ತು ರೇಷ್ಮೆಯಲ್ಲಿ ತೊಡಗಿಸಿಕೊಂಡಿದ್ದಾರೆ ಕೃಷಿಗೆ ಸಂಬಂಧಿಸಿದ ಎಲ್ಲಾ ಉಪ ಕಸುಬುಗಳು ಭಾಗಿಯಾಗಿದ್ದಾರೆ ಸಮಾನವಾದ ಅವಕಾಶಗಳು ಮತ್ತು ಹೆಚ್ಚಿನ ಆರ್ಥಿಕ ಶಕ್ತಿ ತುಂಬಲು ಪ್ರತ್ಯೇಕವಾಗಿ ಹಾಲು ಒಕ್ಕೂಟ ಮತ್ತು ಡಿಸಿಸಿ ಬ್ಯಾಂಕ್ ಸ್ಥಾಪಿಸಬೇಕೆಂಬ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಸ್ಪಷ್ಟಪಡಿಸಿ ಡಿಸಿಸಿ ಬ್ಯಾಂಕ್ ಸ್ಥಾಪಿಸಲು ಕೆಲವೊಂದು ತಾಂತ್ರಿಕ ತೊಂದರೆಗಳಿದ್ದರು ಸಹ ಕೋಚಿಮುಲ್ ಪ್ರತ್ಯೇಕ ಮಾಡಲು ಯಾವುದೇ ತೊಂದರೆಗಳಿಲ್ಲ ಸಹಕಾರ ಸಚಿವರು ಸಹ ಡಿಸಿಸಿ ಬ್ಯಾಂಕ್ ಮತ್ತು ಕೋಚಿಮುಲ್ ಹಾಲು ಒಕ್ಕೂಟವನ್ನು ಪ್ರತ್ಯೇಕಗೊಳಿಸಲು ಸಹಮತ ವ್ಯಕ್ತಪಡಿಸಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷ ವಿರೋಧ ಪಕ್ಷವಾಗಿರಲು ಯೋಗ್ಯತೆಯನ್ನು ಕಳೆದುಕೊಂಡಿದೆ ಎಂದು ಆ ಪಕ್ಷದ ಹಿರಿಯ ನಾಯಕ ಕಪಿಲ್ ಸಿಬಲ್ ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಟಾಂಗ್ ನೀಡಿದ ಸಚಿವರು ರಾಜ್ಯದ ಜನ ಬಿಜೆಪಿ ಪರವಾಗಿದ್ದಾರೆ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅರ್ಥಪೂರ್ಣ ಆಡಳಿತ ನಡೆಸಿ ಅಭಿವೃಧ್ಧಿ ಮಾಡುತ್ತಿದ್ದೇವೆ ಸುಭದ್ರ-ಸ್ಥಿರ ಹಾಗೂ ಅಭಿವೃಧ್ಧಿಗೆ ಪೂರಕವಾಗಿರಬೇಕೆಂದು ಜನ ಬಿಜೆಪಿಯನ್ನು ಉಪ ಚುನಾವಣೆಯಲ್ಲಿ ಬೆಂಬಲಿಸಿ ಅಭ್ಯರ್ಥಿಗಳನ್ನು ಹೆಚ್ಚಿನ ಬಹುಮತದಿಂದ ಗೆಲ್ಲಿಸಿದ್ದಾರೆ ಎಂದರು.
ಮುಖ್ಯಮಂತ್ರಿಗಳಿಗೆ ಪರಮಾಧಿಕಾರ: ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ ರಾಜ್ಯ ಬಿಜೆಪಿ ಸರ್ಕಾರದ ಸಚಿವ ಸಂಪುಟವನ್ನು ವಿಸ್ತರಿಸಲು ಮತ್ತು ಪನಾರಚನೆ ವಿಚಾರದಲ್ಲಿ ಮುಖ್ಯಮಂತ್ರಿಗಳಿಗೆ ಪರಮಾಧಿಕಾರವಿದೆ ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿ ಅವರು ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದ ಅವರು ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಮುನಿರತ್ನಮ್ ವಿಚಾರದಲ್ಲಿ ಸಹ ಅವರ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಡಿಸಿಸಿ ಬ್ಯಾಂಕ್ ಸ್ಥಾಪಿಸಲು ನಬಾರ್ಡ್‍ನವರು ಕೆಲವೊಂದು ಮಾಹಿತಿ ಕೇಳಿದ್ದಾರೆ ಈಗಾಗಲೇ ಈ ವಿಚಾರದಲ್ಲಿ ಸಭೆಯನ್ನು ನಡೆಸಿದ್ದೇವೆ ಎರಡು ಜಿಲ್ಲೆಗಳ ಪ್ರತಿನಿಧಿಗಳು ಪ್ರತ್ಯೇಕ ಮಾಡಲು ಒಪ್ಪಿಕೊಂಡಿದ್ದಾರೆ ಮುಂದಿನ ವರ್ಷ ಜನವರಿ ಮತ್ತೊಂದು ಸಭೆ ನಡೆಸಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಡಿಸಿಸಿ ಬ್ಯಾಂಕ್ ಮತ್ತು ಜಿಲ್ಲಾ ಹಾಲು ಒಕ್ಕೂಟವನ್ನು ಪ್ರತ್ಯೇಕ ಮಾಡಲು ಸರ್ಕಾರ ಬದ್ದವಾಗಿದೆ ಮುಂದಿನ ದಿನಗಳಲ್ಲಿ ಜಿಲ್ಲೆಯ ಜನರ ಬೇಡಿಕೆ ಈಡೇರಿಲಿದೆ ಎಂದರು.
ಸುಧ್ಧಿಗೋಷ್ಠಿಯಲ್ಲಿ ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ(ಚಿನ್ನಿ) ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.