ಶೃಂಗೇರಿಗೆ ದೇವೇಗೌಡ ದಂಪತಿ ಭೇಟಿ, ಪೂಜೆ
Team Udayavani, May 17, 2019, 6:21 AM IST
ಶೃಂಗೇರಿ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ದಂಪತಿ ಗುರುವಾರ ಇಲ್ಲಿನ ಶಾರದಾಪೀಠಕ್ಕೆ ಭೇಟಿ ನೀಡಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು.
ಬುಧವಾರ ಉಡುಪಿಯಿಂದ ಆಗಮಿಸಿದ ಎಚ್.ಡಿ. ದೇವೇಗೌಡ ಹಾಗೂ ಚೆನ್ನಮ್ಮ ಅವರು ಶ್ರೀಶಾರದಾ ಪೀಠದಲ್ಲಿ ಶ್ರೀಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಇಲ್ಲಿಯೇ ವಾಸ್ತವ್ಯ ಹೂಡಿದ್ದರು.
ಗುರುವಾರ ಬೆಳಗ್ಗೆ ಶ್ರೀಶಾರದಾಪೀಠದ ನರಸಿಂಹವನದ ಗುರುಭವನದಲ್ಲಿ ಉಭಯ ಜಗದ್ಗುರುಗಳಾದ ಶ್ರೀಭಾರತೀತೀರ್ಥ ಮಹಾಸ್ವಾಮೀಜಿ, ಶ್ರೀವಿಧುಶೇಖರ ಭಾರತೀ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ನಂತರ ಪೀಠದ ಹೊರ ಪ್ರಾಂಗಣದ ಶ್ರೀತೋರಣ ಗಣಪತಿ, ಶ್ರೀಶಂಕರಾಚಾರ್ಯ, ಶ್ರೀವಿದ್ಯಾಶಂಕರ ದೇಗುಲಗಳಿಗೆ ತೆರಳಿ ದೇವರ ದರ್ಶನ ಪಡೆದರು. ಬಳಿಕ ಶ್ರೀಶಾರದಾ ಸನ್ನಿಧಿಗೆ ತೆರಳಿ ಶ್ರೀಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ಮಧ್ಯಾಹ್ನದ ನಂತರ ಹಾಸನಕ್ಕೆ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.