J.P.Nadda ವಿರುದ್ದದ ಎಫ್ಐಆರ್ ರದ್ದು ಮಾಡಿದ ಧಾರವಾಡ ಹೈಕೋಟ್೯
Team Udayavani, Aug 7, 2023, 8:15 PM IST
ಧಾರವಾಡ : ವಿಧಾನಸಭಾ ಚುನಾವಣೆಯಲ್ಲಿ ನೀತಿಸಂಹಿತೆ ಉಲ್ಲಂಘನೆ ಆರೋಪದಡಿ ಭಾರತಿಯ ಜನತಾ ಪಕ್ಷದ ರಾಷ್ಟೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಧಾರವಾಡ ಹೈಕೋರ್ಟ್ ಪೀಠವು ಸೋಮವಾರ ರದ್ದುಪಡಿಸಿದೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ 2023 ಮೇ 7 ರಂದು ಕರ್ನಾಟಕ ವಿಧಾನಸಭಾ ಚುನಾವಣಾ ಪ್ರಚಾರಾರ್ಥವಾಗಿ ಜರುಗಿದ ರೋಡ್ ಶೋ ಸಂದರ್ಭದಲ್ಲಿ ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಮತದಾರರಿಗೆ ಆಮಿಷ ಹಾಗೂ ಬೆದರಿಕೆ ಒಡ್ಡುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಚುನಾವಣಾಧಿಕಾರಿಗಳಿಂದ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ತಮ್ಮ ವಿರುದ್ಧ ಆಧಾರ ರಹಿತವಾಗಿ ದಾಖಲಾದ ಎಫ್‌ಐಆರ್ ಅನ್ನು ರದ್ದುಪಡಿಸುವಂತೆ ಹೈಕೋರ್ಟ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ಕೈಗೊಂಡ ನ್ಯಾ. ಎಂ. ನಾಗಪ್ರಸನ್ ಅವರಿದ್ದ ಏಕಸದಸ್ಯ ಪೀಠವು, ಅರ್ಜಿದಾರರು ರಾಜ್ಯಸಭಾ ಸದಸ್ಯರಾಗಿದ್ದು ದೂರು ದಾಖಲಿಸಲು ಮ್ಯಾಜಿಸ್ಟೇಟ್ ನ್ಯಾಯಾಲಯದಿಂದ ಅನುಮತಿ ಪಡೆಯಬೇಕು. ಹೀಗೆ ಅನುಮತಿ ಪಡೆಯುವಲ್ಲಿಯೂ ನಿಯಮಗಳನ್ನು ಪಾಲಿಸಿಲ್ಲ ಎಂದು ಹೇಳಿದೆ.
ಇದಲ್ಲದೇ ದಾಖಲಾದ ದೂರಿನಲ್ಲಿಯೂ ಅರ್ಜಿದಾರರು ಮತದಾರರಿಗೆ ಆಮಿಷ ಹಾಗೂ ಬೆದರಿಕೆ ನೀಡುವಂತಹ ಹೇಳಿಕೆ ಕಂಡುಬಂದಿಲ್ಲ. ಹೀಗಾಗಿ ದಾಖಲಾದ ದೂರಿನಲ್ಲಿ ಯಾವುದೇ ಹುರುಳಿಲ್ಲ ಎಂಬುದಾಗಿ ಹೇಳಿದ ನ್ಯಾಯಪೀಠವು, ಜೆ.ಪಿ. ನಡ್ಡಾ ವಿರುದ್ಧದ ಎಫ್‌ಐಆರ್ ಅನ್ನು ರದ್ದುಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.