ಧಾರವಾಡ ಕಿಲ್ಲರ್ ಕಟ್ಟಡ: ಸಾವಿನ ಸಂಖ್ಯೆ 17ಕ್ಕೆ ಏರಿಕೆ
Team Udayavani, Mar 25, 2019, 7:01 AM IST
ಧಾರವಾಡ: ಕಿಲ್ಲರ್ ಕಟ್ಟಡದ ತಳಮಹಡಿಯ ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ 6ನೇ ದಿನ ಭಾನುವಾರವೂ ಮುಂದುವರಿದಿದ್ದು, ಶನಿವಾರ ತಡರಾತ್ರಿ ತಳಮಹಡಿಯ ಉತ್ತರ ದಿಕ್ಕಿನ ಕೋಣೆಯೊಂದರಲ್ಲಿ ಸಿಲುಕಿದ್ದ ಈರಪ್ಪ ಬಸಪ್ಪ ಹಡಪದ (30) ಮೃತದೇಹವನ್ನು ಸತತ 8 ತಾಸುಗಳ ಕಾರ್ಯಾಚರಣೆ
ನಡೆಸಿ ತೆಗೆಯಲಾಗಿದೆ. ಈ ವರೆಗೆ ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಗೊಂಡಿದೆ. ಅಲ್ಲದೇ ಕಟ್ಟಡ ಸೂಪರ್‌ವೈಸರ್ ಸಹದೇವ ಸಾಳುಂಕೆ, ನವಲು ಜೋರೆ ಹಾಗೂ ವಾಘು ಜೋರೆ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಒಂದೆಡೆ ಕಟ್ಟಡದ ತಳಮಹಡಿ ಯಲ್ಲಿ ಸಿಲುಕಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದ್ದರೆ, ಇನ್ನೊಂದೆಡೆ ಕಟ್ಟಡದ ಅವಶೇಷಗಳ ತೆರವು ಕಾರ್ಯಾಚರಣೆ ಕೂಡ ಚುರುಕು ಪಡೆದಿದೆ. ಭಾನುವಾರ ಇಡೀ ದಿನ 40 ಡಬಲ್ ಡೆಕ್ಕರ್ ಲಾರಿಗಳಷ್ಟು ಅವಶೇಷಗಳನ್ನು ನಾಲ್ಕು ಜೆಸಿಬಿಗಳನ್ನುಬಳಸಿ ಸಾಗಿಸಲಾಯಿತು. ಅವಶೇಷಗಳನ್ನು ಕಿಲ್ಲರ್ ಕಟ್ಟಡ ಎದುರಿನ ಖುಲ್ಲಾ ಜಾಗೆಯಲ್ಲಿ ಸುರಿಯಲಾಗಿದ್ದು, ಇನ್ನೂ ಮೂರು ದಿನ ಅವಶೇಷಗಳ ತೆರವುಗೊಳಿಸುವ ಕಾರ್ಯ ನಡೆಯಲಿದೆ ಎಂದು ತೆರವು ಕಾರ್ಯಾಚರಣೆ ಮುಖ್ಯಸ್ಥರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
CIDಗೆ ಹೆಬ್ಬಾಳ್ಕರ್ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?
Congress; ಪರಿಷತ್ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ
ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.