ಕ್ರಿಮಿನಲ್ ಗಳು ಒಳ್ಳೆಯ ಕೆಲಸ ಮಾಡಲು ಸಾಧ್ಯವೇ?: ಕೇಂದ್ರದ ವಿರುದ್ಧ ಕಿಡಿಕಾರಿದ ದಿನೇಶ್
Team Udayavani, Jul 20, 2021, 3:27 PM IST
ಬೆಂಗಳೂರು: ಪೆಗಸಸ್ ಸ್ಪೈವೇರ್ ಮೂಲಕ ಪ್ರತಿಷ್ಟಿತ ವ್ಯಕ್ತಿಗಳ ಮೇಲೆ ಕಣ್ಗಾವಲು ಇಡುವ ಕೇಂದ್ರದ ದುಷ್ಟ ಬುದ್ದಿ ಜಗತ್ತಿನ ಮುಂದೆ ಬೆತ್ತಲಾಗಿದೆ. ಮುಖ್ಯ ನ್ಯಾಯಮೂರ್ತಿಗಳ ಮೇಲೂ ಕಣ್ಗಾವಲು ನಡೆಸಿರುವುದು ಕ್ರಿಮಿನಲ್‌ಗಳು ಮಾಡುವಂತ ಕೆಲಸ. ಕೇಂದ್ರದ ಆಯಕಟ್ಟಿನ ಜಾಗದಲ್ಲಿ ಕ್ರಿಮಿನಲ್‌ಗಳೇ ಇರುವಾಗ ಕ್ರಿಮಿನಲ್ ಕೆಲಸವಲ್ಲದೆ ಒಳ್ಳೆ ಕೆಲಸ ಮಾಡಲು ಸಾಧ್ಯವೇ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.
ಟ್ವೀಟ್ ಮಾಡಿರುವ ಅವರು, ಅಸಮರ್ಥ ನಾಯಕನಿಗೆ ಸದಾ ಅಸ್ತಿತ್ವದ ಭಯ ಕಾಡುತ್ತದೆ. ಮೋದಿಯವರಿಗೂ ಈಗ ಅಸ್ತಿತ್ವದ ಭಯವಿದೆ. ಹಾಗಾಗಿ ಪೆಗಾಸಸ್ ಮೂಲಕ ಮುಖ್ಯ ನ್ಯಾಯಮೂರ್ತಿ, ರಾಜಕೀಯ ನಾಯಕರು ಹಾಗೂ ಪತ್ರಕರ್ತರ ಚಲನವಲನಗಳ ಮೇಲೆ ಕಣ್ಗಾವಲು ಇಡುವ ಹೀನ ಕೆಲಸಕ್ಕೆ ಕೈ ಹಾಕಿದ್ದಾರೆ. ಕೇಂದ್ರದ ಈ ಕೃತ್ಯ, ವ್ಯಕ್ತಿಗಳ ಖಾಸಗಿ ಹಕ್ಕಿನ ಉಲ್ಲಂಘನೆಯ ಜೊತೆ ಅಪರಾಧ ಕೂಡ ಹೌದು ಎಂದಿದ್ದಾರೆ.
ಇದನ್ನೂ ಓದಿ:ಎಜೆನ್ಸಿಯಿಂದ ಆಗಿರುವ ಪ್ರಮಾದ, ಉದ್ದೇಶ ಪೂರ್ವಕ ಮಾಡಿಲ್ಲ: ಶಶಿಕಲಾ ಜೊಲ್ಲೆ ಸ್ಪಷ್ಟನೆ
ಕೆಲವರಿಗೆ ಮದ್ದು ಹಾಕುವ ಕೆಟ್ಟ ರೋಗವಿರುತ್ತದೆ. ಅವರಿಗೆ ಮದ್ದು ಹಾಕಲು ಯಾರೂ ಸಿಗದಿದ್ದರೆ ಕೊನೆಗೆ ಮನೆಯವರಿಗೆ ಮದ್ದು ಹಾಕುತ್ತಾರೆ. ನಳಿನ್ ಕುಮಾರ್ ಕಟೀಲ್ ರವರ ಸಿಎಂ ಬದಲಾವಣೆ ಆಡಿಯೋ ಲೀಕ್ ಹಿಂದೆಯೂ ಕೇಂದ್ರದ ಕೈವಾಡವಿರಬಹುದು. ಕಟೀಲ್‌ರವರೇ ನಿಮ್ಮ ಆಡಿಯೋ ಲೀಕ್ ಹಿಂದಿನ ರಹಸ್ಯವೇನು ಎಂಬುದನ್ನು ಒಮ್ಮೆ ಅಮಿತ್ ಶಾ ಬಳಿ ಕೇಳಿ ತಿಳಿದುಕೊಳ್ಳಿ ಎಂದು ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.