ರಾಜ್ಯದ ಜನರಿಗೆ ಈ ನೂತನ ಸರ್ಕಾರ ಇದ್ದೂ ಸತ್ತಂತೆ ಭಾಸವಾಗುತ್ತಿದೆ: ದಿನೇಶ್ ಗುಂಡೂರಾವ್
Team Udayavani, Aug 2, 2021, 4:31 PM IST
ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ಮಂತ್ರಿ ಮಂಡಲ ರಚನೆ ಗಜಪ್ರಸವದಂತಾಗಿದೆ. 2019 ರಲ್ಲಿ ಯಡಿಯೂರಪ್ಪ ಸರ್ಕಾರ ರಚನೆಯಾದಾಗಲೂ 2 ತಿಂಗಳ ಬಳಿಕ ಸಂಪುಟ ರಚನೆಯಾಗಿತ್ತು.ಈಗ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲೂ ಸಂಪುಟ ರಚನೆಯ ಗೊಂದಲ ಇನ್ನೂ ಮುಂದುವರೆದಿದೆ. ಬಿಜೆಪಿ ಹೈಕಮಾಂಡ್‌ಗೆ ಸಿಎಂ ಬದಲಾಯಿಸುವಾಗ ಇದ್ದ ತರಾತುರಿ ಸಂಪುಟ ರಚನೆಯಲ್ಲೂ ಇರಬೇಕಲ್ಲವೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಟೀಕೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು,ಬಿಜೆಪ ಗೆ ರಾಜ್ಯದಲ್ಲಿ ಏಕವ್ಯಕ್ತಿ ಸರ್ಕಾರ ನಡೆಸುವ ಇರಾದೆಯಿದ್ದರೆ ಅದನ್ನು ಸ್ಪಷ್ಟಪಡಿಸಲಿ. ಹೈಕಮಾಂಡ್‌ನ ಹುಚ್ಚಾಟ ಅತಿರೇಕಕ್ಕೆ ಹೋಗಿದೆ. ರಾಜ್ಯದಲ್ಲಿ ಕೊರೊನಾ 3ನೇ ಅಲೆಯ ಆತಂಕ ಮತ್ತು ನೆರೆ ಪರಿಸ್ಥಿತಿಯಿದೆ. ಈ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಜ್ಯದ ಸಿಎಂ, ಕೆಲಸ ಕಾರ್ಯ ಬಿಟ್ಟು ಪದೇ ಪದೇ ದೆಹಲಿಗೆ ಹೋಗುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಹೈಕಮಾಂಡ್‌ಗೆ ರಾಜ್ಯದ ಜನರ ಬಗ್ಗೆ ಕೊಂಚವಾದರೂ ಕನಿಕರವಿದ್ದರೆ,ಈ ಸಂಪುಟ ರಚನೆ ಎಂಬ ಸರ್ಕಸ್‌ನ್ನು ಬೇಗ ಮುಗಿಸಲಿ. ಸಂಪುಟ ರಚನೆ ಎಂಬುದು ಬಿಜೆಪಿ ಹೈಕಮಾಂಡ್ ಪಾಲಿಗೆ ಚೆಲ್ಲಾಟವಾಗಿರಬಹುದು. ಆದರೆ ರಾಜ್ಯದ ಜನರ ಪಾಲಿಗೆ ಇದು ಪ್ರಾಣ ಸಂಕಟವಾಗಿದೆ. ರಾಜ್ಯದ ಜನರಿಗೆ ಈ ನೂತನ ಸರ್ಕಾರ ಇದ್ದೂ ಸತ್ತಂತೆ ಭಾಸವಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.
ಇದನ್ನೂ ಓದಿ:ಯಡಿಯೂರಪ್ಪನವರ ಪಾಪದ ಕೆಲಸಗಳನ್ನು ಬೊಮ್ಮಾಯಿ ಮುಂದುವರಿಸಲೇಬೇಕಾಗಿದೆ : ಸಿದ್ದರಾಮಯ್ಯ
ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಮಂತ್ರಿಗಿರಿಗಾಗಿ ಲಾಬಿ ಮಾಡುತ್ತಿರುವ ಬಿಜೆಪಿ ಶಾಸಕರು, ತಮ್ಮ ಕ್ಷೇತ್ರದ ಕಡೆ ತಲೆ ಹಾಕಿ ಮಲಗಿಲ್ಲ. ಮಂತ್ರಿ ಪದವಿ ಪಡೆಯಲು ಶಾಸಕರು ದೆಹಲಿಯಲ್ಲಿ ತಳವೂರಿದ್ದರೆ,ಇನ್ನು ಕೆಲವರು ಬೆಂಗಳೂರಲ್ಲಿ ಗಿರಕಿ ಹೊಡೆಯುತ್ತಿದ್ದಾರೆ. ಈ ಶಾಸಕರಿಗೆ ತಾವು ಪ್ರತಿನಿಧಿಸುವ ಕ್ಷೇತ್ರದ ಸಮಸ್ಯೆಗಿಂತ, ಮಂತ್ರಿ ಪದವಿಯೇ ಮುಖ್ಯವಾಗಿದೆ ಎಂದು ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.