ಕುಮಾರಸ್ವಾಮಿ ಕನಸು ನುಚ್ಚುನೂರಾಗಿ ಭಗ್ರಪ್ರೇಮಿಯಂತಾಗಿದ್ದಾರೆ: ದಿನೇಶ್ ಗುಂಡೂರಾವ್
Team Udayavani, Aug 6, 2023, 12:34 PM IST
ಬೆಂಗಳೂರು: ಕಿಂಗ್ ಮೇಕರ್ ಆಗುವ ಕನಸು ಕಂಡಿದ್ದ ಎಚ್ ಡಿ ಕುಮಾರಸ್ವಾಮಿ ಅವರು ಇದೀಗ ಕನಸು ನುಚ್ಚು ನೂರಾಗಿ ಭಗ್ರಪ್ರೇಮಿಯಂತೆ ವ್ಯಗ್ರರಾಗಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಟೀಕೆ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಎಚ್ ಡಿ ಕುಮಾರಸ್ವಾಮಿ ಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ. ಹತಾಶೆಯ ಕೂಪದಲ್ಲಿ ಬಿದ್ದು ವಿಲವಿಲ ಒದ್ದಾಡುತ್ತಿರುವ ಕುಮಾರಸ್ವಾಮಿ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ. ಆರೋಪ ಮಾಡಿದರೆ ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ ಎಂದು ಪ್ರಶ್ನಿಸಿದ್ದಾರೆ.
ಎಚ್ ಡಿಕೆಯವರು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಲು ಒಮ್ಮೆ ಪೆನ್ಡ್ರೈವ್ ತೋರಿಸುತ್ತಾರೆ ಮತ್ತೊಮ್ಮೆ ಸಿಡಿ ತೋರಿಸುತ್ತಾರೆ. ನಿಜವಾಗಿಯೂ ಅವರ ಬಳಿ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ. ಕುಮಾರಸ್ವಾಮಿಯವರ ಕೈಯನ್ನು ನಾವ್ಯಾರು ಕಟ್ಟಿ ಹಾಕಿಲ್ಲ. ಪದೇ ಪದೇ ತೋಳ ಬಂತು ತೋಳದ ಕಥೆಯ ಕಥಾನಾಯಕನ ರೀತಿ ವರ್ತಿಸಿದರೆ ಹೆದರುವರು ಯಾರು ಎಂದಿದ್ದಾರೆ.
ಕುಮಾರಸ್ವಾಮಿಯವರು ಚುನಾವಣೆಗೂ ಮುನ್ನ ‘ಕಿಂಗ್ ಮೇಕರ್’ ಆಗುವ ಕನಸು ಕಂಡಿದ್ದರು. ಆದರೆ ಜನರು ಚುನಾವಣೆಯಲ್ಲಿ ಎಚ್ ಡಿಕೆ ‘ಕಿಂಗ್ ಮೇಕರ್’ ಕನಸನ್ನು ನುಚ್ಚುನೂರು ಮಾಡಿದರು. ಕನಸು ಭಗ್ನಗೊಂಡು ಭಗ್ನಪ್ರೇಮಿಯಂತೆ ವ್ಯಗ್ರರಾಗಿದ್ದಾರೆ. ಹಾಗಾಗಿ ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಾ ತಿರುಗಾಡುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ಟೀಕೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.