ದಿನೇಶ್ ಗುಂಡೂರಾವ್ ತಾಯಿ ವರಲಕ್ಷ್ಮಿ ಗುಂಡೂರಾವ್ ನಿಧನ
Team Udayavani, Jan 6, 2021, 7:51 AM IST
ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಆರ್.ಗುಂಡೂರಾವ್ ಪತ್ನಿ ಹಾಗೂ ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ತಾಯಿ ವರಲಕ್ಷ್ಮಿ ಗುಂಡೂರಾವ್ ಅವರು ಮಂಗಳವಾರ ರಾತ್ರಿ (ಜ.5) ವಿಧಿವಶರಾಗಿದ್ದಾರೆ.
ವರಲಕ್ಷ್ಮಿ ಗುಂಡೂರಾವ್ ಕೋವಿಡ್ ಸಂಬಂಧಿ ಸಮಸ್ಯೆಗಳಿಂದ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಗುಂಡೂರಾವ್ ನಿಧನದ ನಂತರ 1996ರಲ್ಲಿ ವರಲಕ್ಷ್ಮಿ ಗುಂಡೂರಾವ್ ಕೂಡ ರಾಜಕೀಯಕ್ಕೆ ಇಳಿದಿದ್ದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದಿಂದ ಅವರು ಸಂಸತ್ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ ಬಿಜೆಪಿಯ ಅನಂತಕುಮಾರ್ ಎದುರು ಸೋಲು ಅನುಭವಿಸಿದ್ದರು.
ವರಲಕ್ಷ್ಮಿ ಗುಂಡೂರಾವ್ ಅವರು ಮೂವರು ಪುತ್ರರಾದ ದಿನೇಶ್ ಗುಂಡೂರಾವ್, ಮಹೇಶ್ ಗುಂಡೂರಾವ್ ಮತ್ತು ರಾಜೇಶ್ ಗುಂಡೂರಾವ್ ಅವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಬುಧವಾರ (ಜ.6) ಅವರ ದೇವನಹಳ್ಳಿ ತೋಟದಲ್ಲಿ ನಡೆಯಲಿದೆ
ವರಲಕ್ಷ್ಮಿ ಅವರ ನಿಧನ ಸುದ್ದಿ ಕೇಳಿ ಆಘಾತವಾಯಿತು. ಗುಂಡೂರಾವ್ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೊರಕಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
Deeply saddened to hear about the demise of Smt. Varalakshmi Gundu Rao, wife of Former CM Shri. Gundu Rao.
My heartfelt condolences to @dineshgrao and his family in this time of grief. pic.twitter.com/3efe9qE8LU
— DK Shivakumar (@DKShivakumar) January 5, 2021
ಮಾಜಿ ಮುಖ್ಯಮಂತ್ರಿ ದಿ. ಗುಂಡೂರಾವ್ ಅವರ ಪತ್ನಿ, ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಅವರ ತಾಯಿ ವರಲಕ್ಷ್ಮಿ ಗುಂಡೂರಾವ್ ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಶ್ರೀರಾಮುಲು ಸಂತಾಪ ಸೂಚಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ದಿ. ಗುಂಡೂರಾವ್ ಅವರ ಪತ್ನಿ, ಕಾಂಗ್ರೆಸ್ ಮುಖಂಡ @dineshgrao ಅವರ ತಾಯಿ ವರಲಕ್ಷ್ಮಿ ಗುಂಡೂರಾವ್ ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ತಿಳಿದು ಅತೀವ ದುಃಖವಾಗಿದೆ. ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ. pic.twitter.com/uDTMuv0q1j— B Sriramulu (@sriramulubjp) January 6, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.