ಪಾಲಿಟೆಕ್ನಿಕ್ ಕಾಲೇಜುಗಳ ಡಿಪ್ಲೊಮಾ ಕೋರ್ಸ್ ಶುಲ್ಕ ನಿಗದಿ
Team Udayavani, Jun 10, 2019, 3:00 AM IST
ಬೆಂಗಳೂರು: ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪಾಲಿಟೆಕ್ನಿಕ್ಗಳಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ಕೋರ್ಸ್ಗೆ ಸೇರುವ ವಿದ್ಯಾರ್ಥಿಗಳು ಪಾವತಿಸಬೇಕಾದ ಶುಲ್ಕದ ವಿವರವನ್ನು ತಾಂತ್ರಿಕ ಶಿಕ್ಷಣ ಇಲಾಖೆ ಪ್ರಕಟಿಸಿದೆ.
2019-20ನೇ ಸಾಲಿನಲ್ಲಿ ರಾಜ್ಯದ 25 ನೋಡಲ್ ಸೆಂಟರ್ಗಳಲ್ಲಿ ಆನ್ಲೈನ್ ಇಂಟರಾಕ್ಟಿವ್ ಕೌನ್ಸೆಲಿಂಗ್ ಮೂಲಕ ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್ಗಳಲ್ಲಿ ಸೀಟು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳ ಕುಟುಂಬ ವಾರ್ಷಿಕ ಆದಾಯಕ್ಕೆ ಸಂಬಂಧಿಸಿದಂತೆ ಬೋಧನಾ ಶುಲ್ಕ ಹಾಗೂ ಇತರೆ ಶುಲ್ಕಕ್ಕೆ ವಿನಾಯ್ತಿ ಕಲ್ಪಿಸಿ, ಪಾವತಿಸಬೇಕಾದ ಶುಲ್ಕದ ವಿವರವನ್ನು ಇಲಾಖೆ ಹೊರಡಿಸಿದೆ.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 4270ರೂ., ಅನುದಾನಿತ ಪಾಲಿಟೆಕ್ನಿಕ್ ಕಾಲೇಜಿಗೆ 6948 ರೂ. ಹಾಗೂ ಖಾಸಗಿ ಪಾಲಿಟೆಕ್ನಿಕ್ಗಳಲ್ಲಿ 13405 ರೂ. ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಲ್ಲಿ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷದ ವರೆಗೆ ಇದ್ದರೆ ಸರ್ಕಾರಿ ಹಾಗೂ
ಅನುದಾನಿತ ಪಾಲಿಟೆಕ್ನಿಕ್ಗಳಲ್ಲಿ 430 ರೂ. ಹಾಗೂ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷದಿಂದ 10 ಲಕ್ಷದ ವರೆಗೆ ಇರುವ ವಿದ್ಯಾರ್ಥಿಗಳಿಗೆ ಸರ್ಕಾರಿ ಪಾಲಿಟೆಕ್ನಿಕ್ಗಳಲ್ಲಿ 2535 ರೂ.ಹಾಗೂ ಅನುದಾನಿತ ಪಾಲಿಟೆಕ್ನಿಕ್ಗಳಲ್ಲಿ 3874 ರೂ. ನಿಗದಿ ಮಾಡಲಾಗಿದೆ ಎಂದು ತಾಂತ್ರಿಕ ಶಿಕ್ಷಣ ಇಲಾಖೆ ತಿಳಿಸಿದೆ.
ಪ್ರವರ್ಗ-1, 2ಎ, 3ಎ ಮತ್ತು 3ಬಿ ವರ್ಗ ವಿದ್ಯಾರ್ಥಿಗಳಲ್ಲಿ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷದವರೆಗೆ ಇದ್ದರೆ ಸರ್ಕಾರಿ ಪಾಲಿಟೆಕ್ನಿಕ್ಗಳಲ್ಲಿ 960 ರೂ. ಹಾಗೂ ಅನುದಾನಿತ ಪಾಲಿಟೆಕ್ನಿಕ್ಗಳಲ್ಲಿ 3638 ರೂ.ಗಳನ್ನು ನಿಗದಿ ಮಾಡಲಾಗಿದೆ.
ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಲ್ಲಿ ಕುಟುಂಬದ ವಾರ್ಷಿಕ ಆದಾಯ 1 ಲಕ್ಷದ ವರೆಗೆ ಇದ್ದರೆ ಸರ್ಕಾರಿ ಪಾಲಿಟೆಕ್ನಿಕ್ಗಳಲ್ಲಿ 4270 ರೂ. ಹಾಗೂ ಅನುದಾನಿತ ಪಾಲಿಟೆಕ್ನಿಕ್ಗಳಲ್ಲಿ 6948 ರೂ. ಮತ್ತು ಖಾಸಗಿ ಪಾಲಿಟೆಕ್ನಿಕ್ಗಳಲ್ಲಿ 13405 ರೂ. ನಿಗದಿ ಮಾಡಲಾಗಿದೆ. ಮಾಹಿತಿಗಾಗಿ ತಾಂತ್ರಿಕ ಶಿಕ್ಷಣ ಇಲಾಖೆಯ ವೆಬ್ಸೈಟ್ http://dte.kar.nic.in ನೋಡಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.