ವಿಧಾನಸಭೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಭಾಧ್ಯಕ್ಷರ ನಿರ್ದೇಶನ
Team Udayavani, Jul 7, 2021, 7:09 PM IST
ಬೆಂಗಳೂರು : ವಿಧಾನಸಭೆಯ ಅಧಿವೇಶನಕ್ಕೆ ಸಿದ್ಧತೆ ಆರಂಭಿಸುವಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದು ತಮ್ಮ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನಿರ್ದೇಶನ ನೀಡಿದ್ದಾರೆ.
ವಿಧಾನಸಭೆಯ ಅಧಿಕಾರಿಗಳನ್ನುದ್ದೇಶಿಸಿ ಅವರು, “ಅಧಿವೇಶನವನ್ನು ಯಾವಾಗ ಮತ್ತು ಎಲ್ಲಿ ನಡೆಸಬೇಕು ಎಂದು ನಿರ್ಧರಿಸುವುದು ಸರ್ಕಾರದ ಪರಮಾಧಿಕಾರವಾಗಿದೆ. ಆದರೆ, ನಾವು ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಮತ್ತು ಅಧಿವೇಶನ ಸುಗಮವಾಗಿ ನಡೆಯಲು ಸಜ್ಜಾಗಿದ್ದೇವೆ ಎಂಬುದನ್ನು ಸ್ವಯಂ ಖಾತ್ರಿ ಪಡಿಸಿಕೊಳ್ಳಬೇಕು ಎಂದರು.
ಕೋವಿಡ್ ನ ಪ್ರತ್ಯೇಕೀಕರಣ ಮತ್ತು ಲಾಕ್ ಡೌನ್ ಮನೋಸ್ಥಿತಿಯಿಂದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಹೊರಬರಬೇಕಾದ ಅಗತ್ಯ ಪ್ರತಿಪಾದಿಸಿದ ಅವರು, ವ್ಯಾಪಕವಾಗಿ ಕರ್ತವ್ಯ ನಿರ್ವಹಣೆ ಮಾಡುವುದರೊಂದಿಗೆ ಈವರೆಗೆ ಆಗಿರುವ ನಷ್ಟವನ್ನು ಸರಿದೂಗಿಸುವಂತೆ ಸಲಹೆ ಮಾಡಿದರು.
“ನಾವು ಸಮರೋಪಾದಿಯಲ್ಲಿ ಕರ್ತವ್ಯ ನಿರ್ವಹಿಸಬೇಕಾದ ಅಗತ್ಯವಿದೆದೆ ಮತ್ತು ಹಲವು ತಿಂಗಳುಗಳಿಂದ ಬಾಕಿ ಉಳಿದಿರುವ ಕೆಲಸವನ್ನು ತ್ವರಿತ ವಿಧಾನದ ಮೂಲಕ ಪೂರ್ಣಗೊಳಿಸಬೇಕಾಗಿದೆ” ಎಂದ ಸ್ಪೀಕರ್, ನಾವಿನ್ಯತೆಯ ಬಗ್ಗೆ ಚಿಂತಿಸುವ ಮತ್ತು ತಂತ್ರಜ್ಞಾನದ ಬಳಕೆಯೊಂದಿಗೆ ಕರ್ನಾಟಕ ವಿಧಾನಸಭೆ ಮತ್ತು ಸಚಿವಾಲಯವನ್ನು ಮಾದರಿಯಾಗಿ ಮಾಡಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.