NPS ರದ್ದುಗೊಳಿಸುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ
Team Udayavani, Jun 13, 2023, 6:46 PM IST
ಬೆಂಗಳೂರು: ಹಳೇ ಪಿಂಚಣಿ ಯೋಜನೆಯ ಜಾರಿಗೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಚರ್ಚಿಸಿ ಬಜೆಟ್ ನಲ್ಲಿ ಘೋಷಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಕೋರಿ ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳ ನಿಯೋಗವು ಇಂದು ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಮಾತನಾಡಿದರು.
ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲು ನೌಕರರು ಕೆಲಸ ಮಾಡಬೇಕು ಎಂದು ತಿಳಿಸಿದ ಅವರು, ಪ್ರಾಮಾಣಿಕವಾಗಿ ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕೆಂದು ತಿಳಿಸಿದರು.
ಮಾಜಿ ವಿಧಾನ ಪರಿಷತ್ ಸದಸ್ಯ ವಿ.ಎಸ್ ಉಗ್ರಪ್ಪ ಅವರು ಮಾತನಾಡಿ, 1.4.2006 ರಲ್ಲಿ ಎನ್.ಪಿ.ಎಸ್ ಜಾರಿಯಾಗಿದೆ. 2.98 ಲಕ್ಷ ನೌಕರರು ಇದರ ವ್ಯಾಪ್ತಿಗೆ ಒಳಪಡುತ್ತಾರೆ. ಪಿಂಚಣಿ ಮೊತ್ತವನ್ನು ಎನ್.ಎಸ್.ಡಿ.ಎಲ್ ನಲ್ಲಿ ಠೇವಾಣಿ ಇಡಲಾಗಿದೆ. ಈ ಮೊತ್ತ ಬಳಕೆ ಮಾಡಿ ಇವರು ನಿವೃತ್ತಿಯಾಗುವ ವೇಳೆಗೆ ಲಭ್ಯವಾಗುವಂತೆ ಜಿ.ಪಿ.ಎಫ್ ನಲ್ಲಿ ಇಡಬಹುದು. ವೋಟ್ ಫಾರ್ ಒ.ಪಿ.ಎಸ್ ನಲ್ಲಿ ಭಾಗಿಯಾದವರ ಮೇಲೆ ಕೈಗೊಂಡಿರುವ ಶಿಸ್ತಿನ ಕ್ರಮ ಕೈಬಿಡುವ ಕುರಿತು ಸರ್ಕಾರ ತೀರ್ಮಾನಿಸಬೇಕು ಎಂದು ವಿವರಿಸಿದರು.
ರಾಜಾಸ್ತಾನ, ಛತ್ತೀಸ್ ಗಡದಲ್ಲಿ ಎನ್.ಪಿ.ಎಸ್ ರದ್ದಾಗಿದ್ದು, ಕರ್ನಾಟಕದಲ್ಲಿಯೂ ಅದನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು. ಎನ್.ಪಿ.ಎಸ್ ರದ್ದು ಮಾಡುವುದರಿಂದ ಯೋಜನೆಯಡಿ ಲಭ್ಯವಿರುವ ಒಟ್ಟು 19 ಸಾವಿರ ಕೋಟಿ ಹಣವನ್ನು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ದೊರೆಯಲಿದೆ. ನೌಕರರ ಪಾಲಿನ 9 ಸಾವಿರ ಕೋಟಿ ಜಿಪಿಎಫ್ ಗೆ ಪರಿವರ್ತನೆ ಮಾಡಿಕೊಳ್ಳುಬಹುದು ಹಾಗೂ ಸರ್ಕಾರದ 10 ಸಾವಿರ ಕೋಟಿ ರೂ.ಗಳು ಸರ್ಕಾರದ ಪಾಲನ್ನು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಬಳಕೆ ಮಾಡಿಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ ತಿಳಿಸಿದರು.
ಮಾಜಿ ಸಚಿವ ವಿ.ಎಸ್.ಉಗ್ರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಕೆ.ಪಿ.ಟಿ.ಸಿಎಲ್, ಆರೋಗ್ಯ, ಜಲಮಂಡಳಿ, ಕಂದಾಯ ಇಲಾಖೆ ನೌಕರರ ಸಂಘ ಸೇರಿದಂತೆ ಹಲವು ಸಂಘಟನೆಗಳ ನೂರಕ್ಕೂ ಹೆಚ್ಚು ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.