ಎರಡು ಮಕ್ಕಳ ಜನಸಂಖ್ಯಾ ನೀತಿ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡ್ತೇವೆ : ಈಶ್ವರಪ್ಪ
Team Udayavani, Jul 12, 2021, 2:35 PM IST
ಶಿವಮೊಗ್ಗ : ಕುಟುಂಬಕ್ಕೆ 2 ಮಕ್ಕಳೇ ಇರಬೇಕು ಎಂಬ ತೀರ್ಮಾನ ಮಾಡಿದ್ದನ್ನು ನಾನು ಗಮನಿಸಿದ್ದೇನೆ. ರಾಜ್ಯದಲ್ಲಿ ಏನು ಮಾಡ್ಬೇಕು ಎಂದು ಸಿಎಂ ನೇತೃತ್ವದಲ್ಲಿ ಕುಳಿತು ಚರ್ಚೆ, ಯೋಚನೆ ಮಾಡ್ತೇವೆ. ದೇಶದಲ್ಲಿ ಜನಸಂಖ್ಯೆ ದಿನೇ ದಿನೇ ಜಾಸ್ತಿಯಾಗ್ತಾ ಹೋಗ್ತಾನೆ ಇದೆ. ಅದನ್ನು ಕಡಿಮೆ ಮಾಡಲು ಬಹಳ ವರ್ಷದಿಂದ ಕೇಂದ್ರ ಎಲ್ಲಾ ಪ್ರಯತ್ನ ಮಾಡುತ್ತಿದೆ. ಅದ್ರೇ, ಯಾವುದೇ ಕಡಿಮೆ ಯಾಗುತ್ತಿಲ್ಲ ಎಂದು ಉತ್ತರ ಪ್ರದೇಶ ಸರ್ಕಾರದಿಂದ ಎರಡು ಮಕ್ಕಳ ಜನಸಂಖ್ಯಾ ನೀತಿ ವಿಚಾರವಾಗಿ ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದರು.
ಉತ್ತರ ಪ್ರದೇಶದ ಪ್ರಯತ್ನ ನೋಡಿಕೊಂಡು, ಮುಂದಿನ ತೀರ್ಮಾನ ಮಾಡ್ತೇವೆ. ಗ್ರಾಮಾಂತರ ಪ್ರದೇಶದ ಜನ ರಾಜ್ಯದಲ್ಲಿ ನಾಲ್ಕು ಕೋಟಿಗೂ ಹೆಚ್ಚಿನ ಮತದಾರರಿದ್ದಾರೆ. ಅವರೆಲ್ಲರೂ ಜಿ.ಪಂ, ತಾ.ಪಂ ಚುನಾವಣೆಯಲ್ಲಿ ಭಾಗವಹಿಸಬೇಕು. ವಿಕೇಂದ್ರೀಕರಣ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯದ ಮೂಲಕ ಮೀಸಲಾತಿ ಆಗಬೇಕು ಎಂದರು.
ಇದು ಸರ್ಕಾರದ ತೀರ್ಮಾನ. ಆ ಪ್ರಕಾರ ಚುನಾವಣಾ ಆಯೋಗಕ್ಕೆ ಅಧಿಕಾರ ಇದೆ. ಚುನಾವಣಾ ಆಯೋಗ ಮೀಸಲಾತಿ ಘೋಷಣೆ ಮಾಡಿದ್ದರ ಬಗ್ಗೆ ನನಗೆ ಯಾವುದೇ ಅಭ್ಯಂತರವಿಲ್ಲ. ಅದ್ರೇ, ಸೌಜನ್ಯಕ್ಕೆ ಸರ್ಕಾರದ ಜೊತೆ ಚರ್ಚೆ ಮಾಡಿದ್ದರೇ, ಸಲಹೆಗಳನ್ನು ಕೊಡಬಹುದಿತ್ತು. ತೀರ್ಮಾನ ಚುನಾವಣಾ ಆಯೋಗದ್ದೇ, ಅದರಲ್ಲಿ ಯಾವುದೇ ಎರಡು ಮಾತಿಲ್ಲ. ಈವಾಗ ಈಡೀ ರಾಜ್ಯದಲ್ಲಿ ಮೀಸಲಾತಿ ಸರಿ ಇಲ್ಲ, ಅನ್ಯಾಯವಾ ಗಿದೆ ಎಂಬ ಅಪಾದನೆ ಬರುತ್ತಿದೆ.
ಇದರಲ್ಲಿ ಸರ್ಕಾರ ಏನು ಮಾಡಲು ಬರಲ್ಲ.. ಆಯೋಗವೇ ತೀರ್ಮಾನ ತೆಗೆದುಕೊಳ್ಳಬೇಕು. ಈಗಾಗಲೇ ಹಲವರು ಆಕ್ಷೇಪಣೆ ಸಲ್ಲಿಸಿದ್ದಾರೆ. ಕೋರ್ಟ್ ಗೆ ಹೋಗಲು ಅವಕಾಶ ಇದೆ. ಸರ್ಕಾರ ಡಿಸೆಂಬರ್ ವರೆಗೂ ಚುನಾವಣೆ ಬೇಡ ಎಂದು ತೀರ್ಮಾನ ಮಾಡಿದೆ. ಕೋವಿಡ್ ಸಮಯದಲ್ಲೇ ಮೀಸಲಾತಿ ಪ್ರಕಟಗೊಂಡಿದೆ. ಯಾವುದೇ ಮೀಸಲಾತಿ ಬಂದರೂ ಪಕ್ಷದಿಂದ ಅಭ್ಯರ್ಥಿ ಹಾಕುತ್ತೇವೆ. ಉತ್ತರ ಪ್ರದೇಶ ಮಾದರಿಯಲ್ಲಿ ಅತೀ ಹೆಚ್ಚು ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು ಗೇಲ್ತೇವೆ ಎಂದು ಈಶ್ವರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.