ಸಿಎಂ ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಿ: ಸಿದ್ದರಾಮಯ್ಯ ಆಗ್ರಹ
Team Udayavani, Apr 1, 2021, 11:39 AM IST
ಬೆಂಗಳೂರು: ಮುಖ್ಯಮಂತ್ರಿಗಳ ವಿರುದ್ಧ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು, ರಾಜ್ಯದ ಆಡಳಿತ ಕುಸಿದು ಬಿದ್ದಿರುವುಕ್ಕೆ ಸಾಕ್ಷಿಯಾಗಿದೆ. ರಾಜ್ಯಪಾಲರು ತಕ್ಷಣ ಮಧ್ಯ ಪ್ರವೇಶಿಸಿ ಮುಖ್ಯಮಂತ್ರಿಯವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕನಾಗಿ ನಾನು ಮಾಡುತ್ತಾ ಬಂದಿರುವ ಆರೋಪಗಳಿಗೆ ಈಶ್ವರಪ್ಪ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಮಾತಿಗೆ ಬದ್ದರಾಗಿ ಉಳಿಯಬೇಕು ಎಂದಿದ್ದಾರೆ.
ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ. ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ದಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ, ಇದು ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡ. ಬಿಜೆಪಿ ವರಿಷ್ಠರು ಈಶ್ವರಪ್ಪನವರ ಬಾಯಿಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ:ಇಪಿಎಫ್ ಗೂ ತೆರಿಗೆ, ಪಿಂಚಣಿ ನಿಧಿ ಶುಲ್ಕ ಹೆಚ್ಚಳ…ಇಂದಿನಿಂದ ಏನೇನು ಬದಲಾವಣೆ?
ಮುಖ್ಯಮಂತ್ರಿಗಳ ವಿರುದ್ಧ ಈಶ್ವರಪ್ಪನವರು ರಾಜ್ಯಪಾಲರಿಗೆ ಮಾತ್ರ ಆರೋಪ ಪಟ್ಟಿ ಸಲ್ಲಿಸದೆ, ಅದರ ಪ್ರತಿಯನ್ನು ಪ್ರಧಾನಿ ಮೋದಿ ಮತ್ತು ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೂ ಕಳಿಸಿದ್ದಾರೆ. ಅವರೆಲ್ಲರೂ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಕೊರೊನಾ ವೈರಸ್ ಕಾರಣ ಅಲ್ಲ, ಈ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದ ವೈರಸ್ ಕಾರಣ ಎನ್ನುವುದನ್ನು ಈಶ್ವರಪ್ಪನವರ ತನ್ನ ಸಂಶೋಧನೆ ಮೂಲಕ ಬಹಿರಂಗಗೊಳಿಸಿದ್ದಾರೆ. ನಮ್ಮ ಸರ್ಕಾರ 10% ಸರ್ಕಾರ ಎಂದು ಆರೋಪಿಸಿದ್ದ ಪ್ರಧಾನಮಂತ್ರಿಯವರೇ, ನಿಮ್ಮದೇ ಸಚಿವರು ನಿಮಗೆ ಕಳಿಸಿರುವ ನಿಮ್ಮ ಸರ್ಕಾರದ ಜಾತಕಪತ್ರವನ್ನು ಪರಿಶೀಲಿಸಿ ನೀವೇ ರಾಜ್ಯಸರ್ಕಾರಕ್ಕೆ ಭ್ರಷ್ಟಾಚಾರದ ರೇಟಿಂಗ್ ಕೊಟ್ಟುಬಿಡಿ ಎಂದಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ, “ನಾ ಖಾವುಂಗಾ, ನಾ ಖಾನೆ ದೂಂಗಾ” ಎಂಬ ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು “ಮೈ ಬಿ ಖಾವೂಂಗಾ, ತುಮ್ ಬಿ ಖಾವೋ” ಎಂದು ಬದಲಿಸಿ ಬಿಡಿ ಎಂದು ಟೀಕಿಸಿದ್ದಾರೆ.
ಆಪರೇಷನ್ ಕಮಲ ಪ್ರಕರಣದ ತನಿಖೆಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ನೀಡಿರುವುದು, ರಾಜ್ಯದ ಬಿಜೆಪಿ ಸರ್ಕಾರ ಆಪರೇಷನ್ ಕಮಲ ಎಂಬ ಅನೈತಿಕ ಚಟುವಟಿಕೆಯ ಅಕ್ರಮ ಶಿಶು ಎನ್ನುವ ನಮ್ಮ ಆರೋಪವನ್ನು ಪುಷ್ಠೀಕರಿಸಿದೆ. ರಾಜ್ಯದ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಕಾರಣವಾದ ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ವಿನಿಮಯಗೊಂಡ ಕೋಟ್ಯಂತರ ರೂಪಾಯಿಗಳ ಆಮಿಷದ ಬಗ್ಗೆ ಸಮಗ್ರಸ್ವರೂಪದ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.