ಚಂದ್ರಯಾನ -3 ರ ಬಗ್ಗೆ ಅವಹೇಳನಕಾರಿ ಪೋಸ್ಟ್: ಹುಲಿಕುಂಟೆ ಮೂರ್ತಿ ಅವರಿಗೆ ನೋಟಿಸ್
Team Udayavani, Jul 19, 2023, 11:51 PM IST
ಬೆಂಗಳೂರು: ಚಂದ್ರಯಾನ -3 ರ ಬಗ್ಗೆ ಅವಹೇಳನಕಾರಿಯಾಗಿ ಸಾಮಾಜಿಕ ಮಾಧ್ಯಮದಲ್ಲಿ ಬರೆದಿದ್ದಾರೆ ಎಂಬ ಆರೋಪಕ್ಕೆ ಈಡಾಗಿರುವ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹುಲಿಕುಂಟೆ ಮೂರ್ತಿ ಅವರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟೀಕರಣ ನೀಡುವಂತೆ ನೋಟಿಸ್ ನೀಡಿದೆ.
ಮಲ್ಲೇಶ್ವರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾಗಿರುವ ಹುಲಿಕುಂಟೆ ಮೂರ್ತಿ ಅವರು ಚಂದ್ರಯಾನ -೩ರ ಉಡಾವಣೆಗೆ ಮುನ್ನ ವಿಜ್ಞಾನಿಗಳು ತಿರುಪತಿಗೆ ಹೋಗಿ ದೇವರ ದರ್ಶನ ಮಾಡಿದ್ದನ್ನು ಖಂಡಿಸಿ ‘ಚಂದ್ರಯಾನ ಈ ಸಲ ತಿರಪತಿ ನಾಮವೇ ಗತಿ’ ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದರು.
ಈ ಬಗ್ಗೆ ವ್ಯಾಪಕ ಪರ ವಿರೋಧ ಚರ್ಚೆಯಾಗಿತ್ತು. ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹಿಸಿದ್ದರು. ಇದೀಗ ಬೆಂಗಳೂರು ಉತ್ತರ ಜಿಲ್ಲೆಯ ಉಪನಿರ್ದೇಶಕರು ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಮೂರ್ತಿ ಅವರಿಗೆ ನೋಟಿಸ್ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.