ಅರೆ ನ್ಯಾಯಿಕ ಪ್ರಕರಣಗಳ ವಿಲೇವಾರಿ: ಅಪರ ಡಿಸಿ, ಉಪತಹಶೀಲ್ದಾರ್‌ಗೆ ಹೆಚ್ಚುವರಿ ಹೊಣೆ


Team Udayavani, Apr 26, 2022, 6:30 AM IST

ಅರೆ ನ್ಯಾಯಿಕ ಪ್ರಕರಣಗಳ ವಿಲೇವಾರಿ: ಅಪರ ಡಿಸಿ, ಉಪತಹಶೀಲ್ದಾರ್‌ಗೆ ಹೆಚ್ಚುವರಿ ಹೊಣೆ

ಬೆಂಗಳೂರು: ರಾಜ್ಯದಲ್ಲಿ ಕಂದಾಯ ನ್ಯಾಯಾಲಯಗಳಲ್ಲಿನ ಬಾಕಿ ಪ್ರಕರಣಗಳ ವಿಲೇವಾರಿ ಹೊಣೆ ಇನ್ನು ಮುಂದೆ ಅಪರ ಜಿಲ್ಲಾಧಿಕಾರಿ ಹಾಗೂ ಉಪತಹಶೀಲ್ದಾರ್‌ ಅವರ ಹೆಗಲಿಗೂ ಏರಲಿದೆ.

ಜಿಲ್ಲಾಧಿಕಾರಿಗಳು, ಉಪವಿಭಾ ಗಾಧಿಕಾರಿಗಳು ಮತ್ತು ತಹಶೀಲ್ದಾರರಿಗೆ ಇದ್ದ ಅರೆ ನ್ಯಾಯಿಕ ಪ್ರಕರಣಗಳ ವಿಚಾರಣೆ ಮತ್ತು ವಿಲೇವಾರಿ ಅಧಿಕಾರವನ್ನು ಹೆಚ್ಚುವರಿಯಾಗಿ ಅಪರ ಜಿಲ್ಲಾಧಿಕಾರಿ ಹಾಗೂ ಉಪ ತಹಶೀಲ್ದಾರರಿಗೆ ನೀಡಲು ಸರಕಾರ ನಿರ್ಧರಿಸಿದೆ.

ರಾಜ್ಯದ ಕಂದಾಯ ನ್ಯಾಯಾಲಯ ಗಳಲ್ಲಿ ಜಿಲ್ಲಾಧಿಕಾರಿಗಳು, ಉಪವಿಭಾ ಗಾಧಿಕಾರಿ, ತಹಶೀಲ್ದಾರರು ವಿಚಾರಣೆ ನಡೆಸಿ ವಿಲೇವಾರಿ ಮಾಡುವ ಬಾಕಿ ಪ್ರಕರಣಗಳು 1 ಲಕ್ಷಕ್ಕೂ ಹೆಚ್ಚು ಇವೆ. ಇವುಗಳ ತ್ವರಿತ ವಿಲೇವಾರಿಗೆ ಮತ್ತು ಜಿಲ್ಲಾಧಿಕಾರಿ ಮತ್ತು ಉಪವಿಭಾ ಗಾಧಿಕಾರಿಗಳ ಮೇಲಿನ ಒತ್ತಡ ಕಡಿಮೆ ಮಾಡಲು ಅಪರ ಜಿಲ್ಲಾಧಿಕಾರಿಗಳು ಮತ್ತು ಉಪ ತಹಶೀಲ್ದಾರರಿಗೆ ಹೆಚ್ಚು ವರಿ ಅಧಿಕಾರ ನೀಡಲಾಗುತ್ತಿದೆ ಎಂದು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸುತ್ತೋಲೆ ಹೊರಡಿಸಿದೆ
ಕಂದಾಯ ಅರೆ ನ್ಯಾಯಿಕ ಪ್ರಕರಣಗಳ ವಿಲೇವಾರಿ ನಿರೀಕ್ಷಿತ ಮಟ್ಟದಲ್ಲಿ ಇತ್ಯರ್ಥವಾಗದೇ ತೀವ್ರ ವಿಳಂಬವಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದನ್ನು ಸರ ಕಾರ ಗಂಭೀರವಾಗಿ ಪರಿಗಣಿಸಿ, ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪ್ರಕರಣಗಳು ದಾಖಲಾಗುತ್ತಿರುವುದರಿಂದ ತಹಶೀ ಲ್ದಾರರು ಅವರ ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಕರಣಗಳನ್ನು ಇತ್ಯರ್ಥಪಡಿಸಿದರೂ ಕೂಡ ಪ್ರಕರಣಗಳು ಹೆಚ್ಚಿನ ಸಂಖ್ಯೆ ಯಲ್ಲಿ ಬಾಕಿ ಉಳಿಯುತ್ತಿವೆ. ಆದ್ದ ರಿಂದ ಬಾಕಿ ಪ್ರಕರಣಗಳ ತ್ವರಿತ ವಿಲೇ ವಾರಿ ಮಾಡಲು ಹೋಬಳಿ ಮಟ್ಟದಲ್ಲಿ ಉಪತಹಶೀಲ್ದಾರ್‌ ಅವರಿಗೆ ಅರೆ ನ್ಯಾಯಿಕ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಅಧಿಕಾರ ನೀಡಲಾಗಿದೆ. ಉಪ ತಹಶೀಲ್ದಾರ್‌ ಪ್ರತೀ ಬುಧವಾರ ಅರೆ ನ್ಯಾಯಿಕ ಪ್ರಕರಣಗಳನ್ನು ಇತ್ಯರ್ಥಪಡಿಸಬೇಕು ಎಂದು ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಉಪ ತಹಶೀಲ್ದಾರ್‌ ಮಾತ್ರವಲ್ಲದೆ, ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳ ಮಟ್ಟದಲ್ಲಿ ಬಾಕಿ ಪ್ರಕರಣಗಳ ಸಂಖ್ಯೆ ಹೆಚ್ಚಿರುವುದರಿಂದ ಅಪರ ಜಿಲ್ಲಾಧಿಕಾರಿಗಳಿಗೂ, ವಿಶೇಷ ಭೂಸ್ವಾಧೀನಾಧಿಕಾರಿಗೂ ಅರೆ ನ್ಯಾಯಿಕ ಪ್ರಕರಣಗಳ ವಿಲೇವಾರಿ ಅಧಿಕಾರ ನೀಡುವ ಪ್ರಸ್ತಾವನೆಯನ್ನು ಸರಕಾರ ಸಿದ್ಧಪಡಿಸಿಕೊಂಡಿದೆ.

ಉಪ ವಿಭಾಗಾಧಿಕಾರಿ ಮಟ್ಟದಲ್ಲಿ ಹೆಚ್ಚು ಬಾಕಿ
ರಾಜ್ಯದ ಕಂದಾಯ ನ್ಯಾಯಾಲಯಗಳಲ್ಲಿ 1 ಲಕ್ಷಕ್ಕೂ ಅಧಿಕ ಅರೆ ನ್ಯಾಯಿಕ ಪ್ರಕರಣಗಳು ಬಾಕಿ ಇವೆ. ಈ ಪೈಕಿ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ 15,883 ಪ್ರಕರಣಗಳು, ಉಪವಿಭಾಗಾಧಿಕಾರಿಗಳ ಮಟ್ಟದಲ್ಲಿ 63,712 ಪ್ರಕರಣಗಳು ಹಾಗೂ ತಹಶೀಲ್ದಾರರ ಮಟ್ಟದಲ್ಲಿ 25 ಸಾವಿರಕ್ಕೂ ಅಧಿಕ ಪ್ರಕರಣಗಳು ಇವೆ. ಪ್ರಕರಣಗಳ ತ್ವರಿತ ವಿಲೇವಾರಿಗೆ ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ ಮತ್ತು ತಹಶೀಲ್ದಾರರು ವಾರದ ಪ್ರತೀ ಮಂಗಳವಾರ ಮತ್ತು ಗುರುವಾರ ಪೂರ್ಣದಿನ ಕಡ್ಡಾಯವಾಗಿ ನಡೆಸಲು ನಿರ್ದೇಶನ ನೀಡಿದೆ. ಪ್ರತೀ ಜಿಲ್ಲಾಧಿಕಾರಿ ಪ್ರತೀ ತಿಂಗಳು 75 ಪ್ರಕರಣಗಳನ್ನು ಹಾಗೂ ಉಪ ವಿಭಾಗಾಧಿಕಾರಿಗಳು ಪ್ರತೀ ತಿಂಗಳು 100 ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಗುರಿ ನಿಗದಿಪಡಿಸಲಾಗಿದೆ.

 

ಟಾಪ್ ನ್ಯೂಸ್

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

HDK–Siddu

Percentage War: ಮತ್ತೆ 60 ಪರ್ಸೆಂಟ್‌ ಕಮಿಷನ್‌ ಯುದ್ಧ ; ಆರೋಪ – ಪ್ರತ್ಯಾರೋಪ

DKS–Delhi

Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.