![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 22, 2022, 8:30 PM IST
ಬೆಂಗಳೂರು: ಸರ್ಕಾರದಿಂದ ವಿಶೇಷ ಚೇತನರಿಗೆ ನೀಡುವ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ) ವಿತರಣೆಯಲ್ಲಿ ರಾಜ್ಯದಲ್ಲಿ ಗಮನಾರ್ಹ ಸಾಧನೆಯಾಗಿದ್ದು, ಈವರೆಗೆ 5.86 ಲಕ್ಷ ವಿಶೇಷ ಚೇತನರಿಗೆ ಕಾರ್ಡ್ ವಿತರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಯುಡಿಐಡಿ ಕಾರ್ಡ್ ವಿತರಣೆ ಪ್ರಕ್ರಿಯೆಯ ಪ್ರಗತಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ವಿಕಲಚೇತನರ ಸಬಲೀಕರಣ ಇಲಾಖೆಯ ಸಹಯೋಗದೊಂದಿಗೆ, ವಿಶೇಷಚೇತನರಿಗೆ ನೀಡುವ ಯುನಿವರ್ಸಲ್ ಗುರುತು ಚೀಟಿ-ಯುಡಿಐಡಿಯಲ್ಲಿ ಕರ್ನಾಟಕ ಉತ್ತಮ ಸಾಧನೆ ತೋರಿದೆ ಎಂದು ಹೇಳಿದರು.
ರಾಮನಗರ ಜಿಲ್ಲೆ ಯಲ್ಲಿ ಅತಿ ಹೆಚ್ಚು ಕಾರ್ಡ್‌ಗಳು ವಿತರಣೆಯಾಗಿವೆ. ಚಿಕ್ಕಮಗಳೂರು 2ನೇ ಸ್ಥಾನದಲ್ಲಿದ್ದು, ಬಾಗಲಕೋಟೆ, ಹಾವೇರಿ, ಉತ್ತರ ಕನ್ನಡ, ಬೆಳಗಾವಿ ಹಾಗೂ ಮಂಡ್ಯ ಜಿಲ್ಲೆಗಳು ನಂತರದ ಸ್ಥಾನಗಳಲ್ಲಿವೆ. ವಿಶೇಷಚೇತನರು ಕಡ್ಡಾಯವಾಗಿ ಯುಡಿಐಡಿ ಪೋರ್ಟಲ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು.
ಅಂಗವೈಕಲ್ಯದಲ್ಲಿ ಈ ಹಿಂದೆ 7 ಬಗೆಯ ನ್ಯೂನತೆಗಳನ್ನು ಮಾತ್ರ ಪರಿಗಣಿಸಲಾಗುತ್ತಿತ್ತು. ಆದರೆ 2016ರ ಆರ್.ಪಿ.ಡಬ್ಲ್ಯೂ .ಡಿ ಕಾಯ್ದೆಗೆ ತಿದ್ದುಪಡಿ ತಂದ ನಂತರ 21 ರೀತಿಯ ನ್ಯೂನತೆಗಳನ್ನು ಗುರುತಿಸಲಾಗಿದೆ.
ವಿಶೇಷ ಚೇತನರ ವೈಯಕ್ತಿಕ ಮತ್ತು ದೈಹಿಕ ನ್ಯೂನತೆಗಳ ಬಗ್ಗೆ ದತ್ತಾಂಶ ಸಂಗ್ರಹಿಸಲಾಗುತ್ತಿದೆ. ಶೈಕ್ಷಣಿಕ, ಉದ್ಯೋಗ ವಿವರಗಳನ್ನು ಸಹ ಇದು ಒಳಗೊಂಡಿದೆ. ಶೇ.40 ರಷ್ಟು ದೈಹಿಕ ನ್ಯೂನತೆ ಹೊಂದಿರುವವರನ್ನು ವಿಶೇಷಚೇತನರು ಎಂದು ಗುರುತಿಸಲಾಗುತ್ತಿದೆ. 2011ರ ಜನಗಣತಿ ವರದಿಯಂತೆ, ದೇಶದಲ್ಲಿ ಶೇ.2.21 ರಷ್ಟು ಮಂದಿ ಇಂತಹ ಸಮಸ್ಯೆ ಹೊಂದಿ¨ªಾರೆ. ಇವರಿಗೆ ಸೌಲಭ್ಯ ದೊರಕಿಸಿಕೊಡಲು ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.