ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಗಿಫ್ಟ್: ತುಟ್ಟಿ ಭತ್ಯೆ ಹೆಚ್ಚಳ
Team Udayavani, Oct 7, 2022, 8:54 PM IST
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆಯಾಗಿ ಸಿಹಿ ಸುದ್ದಿ ನೀಡಿರುವ ರಾಜ್ಯ ಸರ್ಕಾರ “ತುಟ್ಟಿ ಭತ್ಯೆ’ಯನ್ನು ಶೇ.27.25ರಿಂದ 31ಕ್ಕೆ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಇದರಿಂದ ಪ್ರಸಕ್ತ ವರ್ಷದ ತುಟ್ಟಿ ಭತ್ಯೆಯಲ್ಲಿ ಶೇ.3.75ರಷ್ಟು ಏರಿಕೆ ಆಗಲಿದೆ.
2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ 2022ರ ಜುಲೈ 1ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರುವಂತೆ ಮೂಲ ವೇತನದ ಶೇ.27.25ರಿಂದ ಶೇ.31ಕ್ಕೆ ಪರಿಷ್ಕರಿಸಿ ತುಟ್ಟಿ ಭತ್ಯೆ ದರಗಳನ್ನು ಮಂಜೂರು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರು, ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರು, ಕುಟುಂಬ ನಿವೃತ್ತಿ ವೇತನದಾರರಿಗೂ ಸಹ ಈ ತುಟ್ಟಿ ಭತ್ಯೆ ಪರಿಷ್ಕರಣೆ ಅನ್ವಯವಾಗಲಿದೆ.
ಯುಜಿಸಿ, ಎಐಸಿಟಿಇ, ಐಸಿಎಎಆರ್ ವೇತನ ಶ್ರೇಣಿಗಳ ನಿವೃತ್ತ ನೌಕರರಿಗೂ ಈ ಆದೇಶ ಅನ್ವಯಿಸುತ್ತದೆ. ಸರ್ಕಾರದ ಮತ್ತು ಜಿಲ್ಲಾ ಪಂಚಾಯಿತಿಗಳ ಪೂರ್ಣಾವಧಿ ನೌಕರರಿಗೆ, ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ವರ್ಕ್‌ಚಾರ್ಜ್ ನೌಕರರಿಗೆ ಹಾಗೂ ಸರ್ಕಾರದಿಂದ ಸಹಾಯಾನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯಗಳಲ್ಲಿ ಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರರಿಗೆ ಈ ಆದೇಶ ಅನ್ವಯಿಸುತ್ತದೆ.
ಯುಜಿಸಿ, ಎಐಸಿಟಿಇ, ಐಸಿಎಎಆರ್, ಎನ್‌ಜೆಪಿಸಿ ವೇತನ ಶ್ರೇಣಿಗಳಲ್ಲಿ ಹಾಲಿ ವೇತನ ಪಡೆಯುತ್ತಿರುವ ನೌಕರರಿಗೆ ಮತ್ತು ಎನ್‌ಜೆಪಿಸಿ ಪಿಂಚಣಿದಾರರಿಗೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.