ಕೈದಿಗಳಿಂದ ಮೊಬೈಲ್‌ನಲ್ಲಿ ಕೋರ್ಟ್‌ ಕಲಾಪ ವೀಕ್ಷಣೆ ತನಿಖೆಗೆ ವಿಶೇಷ ತಂಡ ರಚನೆ: ಹೈಕೋರ್ಟ್‌


Team Udayavani, Jul 28, 2021, 10:50 PM IST

ಕೈದಿಗಳಿಂದ ಮೊಬೈಲ್‌ನಲ್ಲಿ ಕೋರ್ಟ್‌ ಕಲಾಪ ವೀಕ್ಷಣೆ ತನಿಖೆಗೆ ವಿಶೇಷ ತಂಡ ರಚನೆ: ಹೈಕೋರ್ಟ್‌

ಬೆಂಗಳೂರು: ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣದ ಇಬ್ಬರು ಆರೋಪಿಗಳು ಆನ್‌ಲೈನ್‌ ಲಿಂಕ್‌ ಬಳಸಿ ಜೈಲಿನಿಂದಲೇ ಮೊಬೈಲ್‌ ಮೂಲಕ ಕೋರ್ಟ್‌ ಕಲಾಪ ವೀಕ್ಷಿಸಿರುವ ಪ್ರಕರಣದ ತನಿಖೆ ನಡೆಸಲು ಪ್ರತ್ಯೇಕ ತನಿಖಾ ತಂಡ ರಚಿಸುವುದಾಗಿ  ಹೈಕೋರ್ಟ್‌ ಹೇಳಿದೆ.

ಗಲಭೆ ಪ್ರಕರಣ ಸಂಬಂಧ ಜಾಮೀನು ನಿರಾಕರಿಸಿದ ಎನ್‌ಐಎ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಆರೋಪಿಗಳು ಸಲ್ಲಿಸಿದ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಅರವಿಂದ ಕುಮಾರ್‌ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸುತ್ತಿದ್ದಾಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಕರಣದ 15ನೇ ಆರೋಪಿ ಶೇಖ್‌ ಮೊಹಮ್ಮದ್‌ ಬಿಲಾಲ್‌ ಹಾಗೂ 25ನೇ ಆರೋಪಿ ಮೊಹಮ್ಮದ್‌ ಶರೀಫ್ ವೀಡಿಯೋ ಕಾನ್ಫರೆನ್ಸ್‌ ಲಿಂಕ್‌ ಬಳಸಿ ಮೊಬೈಲ್‌ ಮೂಲಕ ಕಲಾಪ ವೀಕ್ಷಿಸಿರುವುದು ಬೆಳಕಿಗೆ ಬಂದಿತ್ತು.

ಈ ಕುರಿತು ವಿವರಣೆ ನೀಡಬೇಕು ಎಂದು ನ್ಯಾಯಪೀಠ ಸರಕಾರಕ್ಕೆ ನಿರ್ದೇಶನ ನೀಡಿತ್ತು. ಅದರಂತೆ,  ಬುಧವಾರ ಅರ್ಜಿ ವಿಚಾರಣೆಗೆ ಬಂದಾಗ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಆರ್‌. ಸುಬ್ರಮಣಿ ಹಾಜರಾಗಿ, ಪ್ರಕರಣದ ತನಿಖೆ ನಡೆಸಲು ಬೆಂಗಳೂರು ದಕ್ಷಿಣ ವಲಯದ ಡಿಜಿಐ ಟಿ.ಪಿ. ಶೇಷ ಅವರನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.

ಇದನ್ನು ಒಪ್ಪದ ನ್ಯಾಯಪೀಠ, ಇಂಥ ತನಿಖೆ ಬೇಡ. ಒಬ್ಬ ಪೊಲೀಸ್‌ ಅಧಿಕಾರಿ ಮತ್ತೂಬ್ಬ  ಅಧಿಕಾರಿಯನ್ನು ರಕ್ಷಿಸುತ್ತಾರೆ ಎಂಬ ವಿಷಯ ನಮಗೂ ತಿಳಿದಿದೆ. ಹೀಗಾಗಿ, ನಿವೃತ್ತ ಹೈಕೋರ್ಟ್‌ ನ್ಯಾಯಮೂರ್ತಿ ಹಾಗೂ ನಿವೃತ್ತ ಐಎಎಸ್‌-ಐಪಿಎಸ್‌ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ತಂಡ ರಚಿಸಲಾಗುವುದು. ಅದಕ್ಕೆ ನಿಯೋಜಿಸಬಹುದಾದ ಅಧಿಕಾರಿಗಳ ಹೆಸರನ್ನು ತಿಳಿಸುವಂತೆ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗೆ ನ್ಯಾಯಪೀಠ ಸೂಚಿಸಿತು.

ಈ ವೇಳೆ ಎನ್‌ಐಎ ಪರ ವಕೀಲರಾದ ಪಿ. ಪ್ರಸನ್ನಕುಮಾರ್‌, ಕೇಂದ್ರ ಸರಕಾರದ ಗೃಹ ಸಚಿವಾಲಯ 2010ರ ಜೂ.7ರಂದು ದೇಶದ ಎಲ್ಲ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಕಾರಾಗೃಹ ಹಾಗೂ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದರು. ಪಶ್ವಿ‌ಮ ಬಂಗಾಳ, ಉತ್ತರ ಪ್ರದೇಶ, ಪಂಜಾಬ್‌, ಗುಜರಾತ್‌, ರಾಜಸ್ಥಾನ, ಜಮ್ಮು ಕಾಶ್ಮೀರ ಮತ್ತು ಕರ್ನಾಟಕ ಸಹಿತ ದೇಶದ ವಿವಿಧ ರಾಜ್ಯಗಳ ಕಾರಾಗೃಹಗಳು ಭಯೋತ್ಪಾದಕ ಕೃತ್ಯಗಳ ಸಂಘಟನೆ, ಹಣ ಸಂಗ್ರಹ ಮತ್ತು ಹೊಸ ಸದ್ಯಸರ ಆಯ್ಕೆ ಹಾಗೂ ಕಾರ್ಯಾಚರಣೆ ಸ್ಥಳಗಳಾಗುತ್ತಿವೆ ಎಂಬುದಾಗಿ ಆ ಪತ್ರದಲ್ಲಿ ತಿಳಿಸಲಾಗಿತ್ತು ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಅಲ್ಲದೆ, ಜೈಲು ಅಧಿಕಾರಿಗಳ ಸಹಕಾರದಿಂದ ಕೈದಿಗಳು ಮೊಬೈಲ್‌ ಫೋನ್‌ಗಳನ್ನು ದುರ್ಬಳಕೆ ಮಾಡಕೊಂಡು ಈ ರೀತಿ ಮಾಡುತ್ತಿದ್ದಾರೆ. ಇಲ್ಲಿ ಮೊಬೈಲ್‌ ಫೋನ್‌ ಬಳಕೆ ನಿಷೇಧಿಸಬೇಕು. ಭದ್ರತೆ ಹೆಚ್ಚಿಸಬೇಕು ಮತ್ತು ಮೊಬೈಲ್‌ ಫೋನ್‌ಗಳು ಜೈಲುಗಳ ಒಳಗೆ ಹೋಗುವುದನ್ನು ತಡೆಯುವಂತೆ ಪತ್ರದಲ್ಲಿ ನಿರ್ದೇಶಿಸಲಾಗಿತ್ತು ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಟಾಪ್ ನ್ಯೂಸ್

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

1-gite

Udupi: ಇಂದು ಗೀತೋತ್ಸವದ ಮಂಗಳ್ಳೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

cyber crime

Cyber ​​fraud ಬದಲಾಗಿದೆ: ನಮ್ಮವರೇ ಆಟಗಾರರು; ಆಡಿಸುವಾತ ಮಾತ್ರ ಬೇರೆ!

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.