ಬೆಳ್ಳಂಬೆಳಗ್ಗೆ ಡಿಕೆ ಬ್ರದರ್ಸ್ ತುರ್ತು ಪ್ರಸ್ ಮೀಟ್:ಹೇಳಿದ್ದೇನು?
Team Udayavani, May 31, 2018, 8:49 AM IST
ಬೆಂಗಳರೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ನಮ್ಮ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದ್ದು, ನಮ್ಮ 11 ಮಂದಿಯ ವಿರುದ್ಧ ಯಾವುದೇ ಕ್ಷಣದಲ್ಲಿ ಸಿಬಿಐನಿಂದ ಸರ್ಚ್ ವಾರಂಟ್ ಹೊರಡಿಸಬಹುದು ಎಂದು ಕಾಂಗ್ರೆಸ್ ನಾಯಕರಾದ ಡಿ.ಕೆ .ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ತುರ್ತು ಸುದ್ದಿಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದಾರೆ.
ಸದಾಶಿವ ನಗರದ ನಿವಾಸದಲ್ಲಿ ಗುರುವಾರ ಬೆಳಗ್ಗೆ ತುರ್ತು ಸುದ್ದಿಗೋಷ್ಠಿ ನಡೆಸಿದ ಡಿ.ಕೆ.ಸಹೋದರರು. ‘ಮೋದಿ, ಶಾ ಸೇಡಿನ ರಾಜಕಾರಣ ನಡೆಸುತ್ತಿದ್ದಾರೆ. ನಂಜಿನ ರಾಜಕಾರಣ ಮಾಡುತ್ತಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿದ್ದಾರೆ. ನಮ್ಮ 11 ಜನರ ಮೇಲೆ ಸಿಬಿಐ,ಇಡಿ ಮತ್ತು ಐಟಿ ಮೂಲಕ ಕೇಸ್ ದಾಖಲಿಸಿ ಸರ್ಚ್ ವಾರೆಂಟ್ ಜಾರಿ ಮಾಡಲು ಸಿದ್ದತೆ ನಡೆಸಿದ್ದಾರೆ’ ಎಂದರು.
‘ನಮಗೆ ಮೂರ್‍ನಾಲ್ಕು ತಿಂಗಳುಗಳಿಂದ ಅನೇಕ ಮಾಹಿತಿಗಳು ಬಂದಿವೆ.ಎಲ್ಲೆಲ್ಲಿ ಸಭೆ ನಡೆಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದು ನಮಗೆ ಗೌಪ್ಯತೆಯನ್ನು ತಿಳಿಸಿದ್ದಾರೆ. ಅವರ ಹೆಸರು ಹೊರಗೆ ಹಾಕಲು ಇಷ್ಟಪಡುವುದಿಲ್ಲ ಅವರು ನಮಗೆ ಕೆಲ ಮಾಹಿತಿಗಳನ್ನು ಕೊಟ್ಟಿದ್ದಾರೆ’ ಎಂದರು.
‘ನಮ್ಮ ಕುಟುಂಬವನ್ನು ಬೆದರಿಸಿ ಬಗ್ಗಿಸಬಹುದು ಎಂದುಕೊಂಡರೆ ನಾವು ಜಗ್ಗುವವರಲ್ಲ. ನಾವು ಎಲ್ಲದಕ್ಕೂ ಸಿದ್ದರಿದ್ದೇವೆ. ನಾವು ಎಂದು ತಪ್ಪು ಮಾಡಿದವರಲ್ಲ, ಕಾನೂನು ಮೀರಿ ರಾಜಕಾರಣ ಮಾಡಿದವರಲ್ಲ, ಅಕ್ರಮಗಳನ್ನು ಮಾಡಿಲ್ಲ. ಸುಳ್ಳು ಕೇಸ್ ದಾಖಲಿಸಿ ನಮ್ಮ ಧ್ವನಿ ಅಡಗಿಸಬಹುದು ಎಂದರೆ ಅದು ನಿಮ್ಮ ಭ್ರಮೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.