ದ.ಕ. ಕೋಮು ಗಲಭೆ, ಹತ್ಯೆ ಪ್ರಕರಣ ವರದಿ ಕೊಡಿ: ಕೇಂದ್ರ ತಾಕೀತು
Team Udayavani, Jul 26, 2017, 6:00 AM IST
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸಹಿತ ರಾಜ್ಯದಲ್ಲಿ ನಡೆದ ಕೋಮುಗಲಭೆ ಹಾಗೂ 24 ಜನರ “ರಾಜಕೀಯ’ ಹತ್ಯೆ ಪ್ರಕರಣದ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ರಾಜ್ಯ ಸರಕಾರಕ್ಕೆ ಕೇಂದ್ರ ಪತ್ರ ಬರೆದಿದೆ.
ರಾಜ್ಯದಲ್ಲಿ ಈಚೆಗೆ ಅತಿ ಹೆಚ್ಚು ರಾಜಕೀಯ ಹತ್ಯೆಗಳು ನಡೆಯುತ್ತಿವೆ ಎಂಬ ವಿಪಕ್ಷ ಬಿಜೆಪಿ ಆರೋಪಕ್ಕೆ ಮನ್ನಣೆ ನೀಡಿರುವ ಕೇಂದ್ರ ಗೃಹ ಸಚಿವಾಲಯ ಮಂಗಳವಾರ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಮಾಹಿತಿ ನೀಡುವಂತೆ ಸೂಚಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಮಂಗಳೂರಿನ ಶರತ್, ಬೆಂಗಳೂರಿನ ರುದ್ರೇಶ್ ಸಹಿತ ರಾಜ್ಯದಲ್ಲಿ 24 ಜನರು ರಾಜಕೀಯ ಕಾರಣಗಳಿಗಾಗಿ ಹತ್ಯೆ
ಯಾಗಿದ್ದಾರೆ ಎಂಬ ಗುಮಾನಿ ಇದ್ದು, ಈ ಬಗೆಗಿನ ತನಿಖೆ,ಆರೋಪಿಗಳ ಬಂಧನ ಮತ್ತು ಅವರಿಗೆ ವಿಧಿಸಲಾದ ಶಿಕ್ಷೆ ಕುರಿತು ಸಂಪೂರ್ಣ ವಿವರ ನೀಡುವಂತೆ ಈ ಪತ್ರದಲ್ಲಿ ನಿರ್ದೇಶಿಸಲಾಗಿದೆ. ಗಲಭೆ ಮತ್ತು ಹತ್ಯೆಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರಕಾರ ತೆಗೆದು ಕೊಂಡಿರುವ ಕ್ರಮಗಳ ಬಗ್ಗೆಯೂ ಮಾಹಿತಿ ನೀಡಬೇಕೆಂದು ಪತ್ರದಲ್ಲಿ ತಿಳಿಸಿದೆ.
ಕಳೆದ ವಾರವಷ್ಟೇ ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಅವರು, ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು “”ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಸಂಘ ಪರಿವಾರದ ಮತ್ತು ಬಿಜೆಪಿಯ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಹತ್ಯೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಒಟ್ಟು ಇದುವರೆಗೂ 24 ಅಮಾಯಕರ ಕೊಲೆಗಳಾಗಿವೆ. ಇದು ರಾಜಕೀಯ ಪ್ರೇರಿತ ಹತ್ಯೆಯಾಗಿದ್ದು, ಎನ್‌ಐಎ ತನಿಖೆಗೆ ವಹಿಸಬೇಕು” ಎಂದು ಆಗ್ರಹಿಸಿದ್ದರು.
ಇದನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಗೃಹ ಸಚಿವಾಲಯದ ಅಧೀನ ಕಾರ್ಯದರ್ಶಿ ಎನ್.ಎಸ್.ಬಿಸ್ತ ಅವರು, ರಾಜ್ಯದ ಮುಖ್ಯ ಕಾರ್ಯದರ್ಶಿ ಸುಭಾಶ್ಚಂದ್ರ ಕುಂಟಿಯಾ ಅವರಿಗೆ ಪತ್ರ ಬರೆದು ವಿವರ ನೀಡುವಂತೆ ಕೋರಿದ್ದಾರೆ.
ಜತೆಗೆ ಸಂಸದೆ ಶೋಭಾ ಅವರ ಪತ್ರವನ್ನೂ ಅಡಕ ಮಾಡಲಾಗಿದೆ. ಕೇಂದ್ರದ ಪತ್ರವನ್ನು ಮುಖ್ಯ ಕಾರ್ಯದರ್ಶಿಗಳು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದ್ದಾರೆ.
ಮಂಗಳೂರಿನಲ್ಲಿ ನಡೆದ ಕೋಮು ಗಲಭೆ ಮತ್ತು ಶರತ್ ಮಡಿವಾಳ್ ಹತ್ಯೆ ಕುರಿತಂತೆ ಮಾಹಿತಿ ಪಡೆದು ಕೇಂದ್ರಕ್ಕೆ ಉತ್ತರಿಸಲು ಗೃಹ ಇಲಾಖೆ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿಯಿಂದ ಶೀಘ್ರವೇ ಅಗತ್ಯ ಮಾಹಿತಿ ಪಡೆದುಕೊಂಡು ಕೇಂದ್ರ ಸರಕಾರಕ್ಕೆ ವರದಿ ನೀಡಲಾಗುವುದು ಎಂದು ಗೃಹ ಇಲಾಖೆ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.