ತೆನೆ ಮತದಾರರನ್ನು ಸೆಳೆಯಲು ಡಿಕೆಶಿ ಕಸರತ್ತು

ವಿಧಾನಪರಿಷತ್‌ ಚುನಾವಣೆ: ರಂಗಕ್ಕಿಳಿದ ಕೆಪಿಸಿಸಿ ಅಧ್ಯಕ್ಷ

Team Udayavani, Dec 9, 2021, 7:10 AM IST

ತೆನೆ ಮತದಾರರನ್ನು ಸೆಳೆಯಲು ಡಿಕೆಶಿ ಕಸರತ್ತು

ಬೆಂಗಳೂರು: ವಿಧಾನಪರಿಷತ್‌ ಚುನಾವಣೆಯಲ್ಲಿ ಜೆಡಿಎಸ್‌ ಸ್ಪರ್ಧಿಸದ ಕಡೆ ಯಾರಿಗೆ ಬೆಂಬಲ ನೀಡಬೇಕು ಎಂಬ ಬಗ್ಗೆ ಸ್ಥಳೀಯ ನಾಯಕರೇ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಹೇಳಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ರಂಗಕ್ಕೆ ಇಳಿದಿದ್ದಾರೆ.

ಕಲಬುರಗಿ, ಧಾರವಾಡ, ಬೆಳಗಾವಿ, ಬೀದರ್‌, ರಾಯಚೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಬೆಂಬಲ ಪಡೆಯುವ ನಿಟ್ಟಿನಲ್ಲಿ ಗುಪ್ತ ಕಾರ್ಯಾಚರಣೆ ಆರಂಭಿಸಿದ್ದಾರೆ. ವೈಯಕ್ತಿಕವಾಗಿ ತಮ್ಮ ಜತೆ ಉತ್ತಮ ಸಂಬಂಧ ಹೊಂದಿರುವ ಆ ಭಾಗದ ಜೆಡಿಎಸ್‌ ನಾಯಕರನ್ನು ಸಂಪರ್ಕಿಸಿ ಮನ ವೊಲಿಕೆಗೆ ಮುಂದಾಗಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಅವರು ಜೆಡಿಎಸ್‌ ಬೆಂಬಲದ ಸಹವಾಸವೇ ಬೇಡ ಎಂಬ ಅಭಿಪ್ರಾಯ ಹೊಂದಿದ್ದರಾದರೂ ಡಿ.ಕೆ. ಶಿವಕುಮಾರ್‌ ಸಹಕಾರ ಸಿಗುವುದಾದರೆ ಯಾಕೆ ಪ್ರಯತ್ನಿಸ ಬಾರದು ಎಂಬ ಮನಸ್ಸು ಹೊಂದಿದ್ದಾರೆ. ಹೀಗಾಗಿ ಎಚ್‌ ಡಿಕೆ ಘೋಷಣೆ ಬೆನ್ನಲ್ಲೇ ಸ್ಥಳೀಯ ಜೆಡಿಎಸ್‌ ನಾಯಕರು, ಹಾಲಿ ಶಾಸಕರು, ಮಾಜಿ ಸಚಿವರನ್ನು ಸಂಪರ್ಕಿಸಿದ್ದಾರೆ. ಕೆಲವರು ಬೆಂಬಲದ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ನಾಯಕರ ಸಂಪರ್ಕ
ಧಾರವಾಡದಲ್ಲಿ ಕೋನರೆಡ್ಡಿ, ರಾಯಚೂರಿನಲ್ಲಿ ವೆಂಕಟರಾವ್‌ ನಾಡಗೌಡ, ಬೀದರ್‌ನಲ್ಲಿ ಬಂಡೆಪ್ಪ ಕಾಶೆಂಪುರ್‌ ಅವರನ್ನು ಸಂಪರ್ಕಿಸಿ ಬೆಂಬಲ ಕೋರಲಾಗಿದೆ. ಕಲಬುರಗಿ, ಬೆಳಗಾವಿಯ ಜಿಲ್ಲಾ ನಾಯಕರ ಸಂಪರ್ಕದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರೊಬ್ಬರಿದ್ದಾರೆ ಎನ್ನಲಾಗಿದೆ.

ಕೋಲಾರ, ತುಮಕೂರು, ಬೆಂಗ ಳೂರು ಗ್ರಾಮಾಂತರ, ಮೈಸೂರು, ಹಾಸನ, ಮಂಡ್ಯದ ಕ್ಷೇತ್ರಗಳಲ್ಲಿ ಜೆಡಿಎಸ್‌-ಕಾಂಗ್ರೆಸ್‌ ನಡುವೆ ಪೈಪೋಟಿ ಇರುವ ಕಾರಣ ಅಲ್ಲಿ ಹೋರಾಟ ನಡೆಯಲಿ. ಜೆಡಿಎಸ್‌ ಸ್ಪರ್ಧಿಸದ ಕಡೆ ಕಾಂಗ್ರೆಸ್‌ಗೆ ಬೆಂಬಲ ನೀಡುವಂತೆ ಜಿಲ್ಲಾ ನಾಯಕರ ಸಹಕಾರ ಪಡೆಯಲು ಪ್ರಯತ್ನಿಸಿ ಎಂದು ಅಭ್ಯರ್ಥಿಗಳಿಗೂ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ:ಆನ್‌ ಲೈನ್‌ ಗೇಮಿಂಗ್‌ ಕಂಪನಿ ಬ್ಯಾಂಕ್‌ ಖಾತೆ ಜಪ್ತಿ ಆದೇಶಕ್ಕೆ ಹೈಕೋರ್ಟ್‌ ತಡೆ

ಆದರೆ ಎಚ್‌.ಡಿ. ಕುಮಾರಸ್ವಾಮಿ ಯವರ ಹೇಳಿಕೆ ಬಳಿಕ ಜೆಡಿಎಸ್‌ ಸ್ಥಳೀಯ ನಾಯಕರಿಗೆ ಬೇಡಿಕೆ ಕುದುರಿದ್ದು, ಕಾಂಗ್ರೆಸ್‌ ಮತ್ತು ಬಿಜೆಪಿ ಎರಡೂ ಪಕ್ಷಗಳ ನಾಯಕರೂ ಸಂಪರ್ಕ ಮಾಡುತ್ತಿದ್ದಾರೆ ಎನ್ನಲಾಗಿದೆ.

ಅರ್ಧಮನಸ್ಸು
ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಜತೆ ಬಹಿರಂಗವಾಗಿ ಸೀಟು ಹೊಂದಾಣಿಕೆಗೆ ಜೆಡಿಎಸ್‌ ಮುಕ್ತ ಮನಸ್ಸು ಹೊಂದಿತ್ತು. ಯಡಿಯೂರಪ್ಪ ದೂರವಾಣಿ ಮೂಲಕ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಸಂಪರ್ಕಿಸಿದ್ದರು. ಅನಂತರ ಜೆಡಿಎಸ್‌ ಸ್ಪರ್ಧೆ ಮಾಡದ ಕಡೆ ಬೆಂಬಲ ಪಡೆಯುತ್ತೇವೆ ಎಂದು ಬಹಿರಂಗ ಹೇಳಿಕೆ ನೀಡಿದ್ದರು. ಆದರೆ ಪಕ್ಷದ ಮಟ್ಟದಲ್ಲಿ ಆ ಕುರಿತು ಹೆಚ್ಚು ಆಸಕ್ತಿ ತಾಳಲಿಲ್ಲ ಎನ್ನಲಾಗಿದೆ.

ಕೋಲಾರ, ಮಂಡ್ಯ ಮತ್ತು ಬೆಂಗ ಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಣಕ್ಕಿಳಿಸದೆ ಜೆಡಿಎಸ್‌ಗೆ ಬೆಂಬಲ ನೀಡುವುದು. ಜೆಡಿಎಸ್‌ 18 ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ನೀಡುವುದು. ಆ ಮೂಲಕ ಅಧಿಕೃತವಾಗಿಯೇ ಮೈತ್ರಿ ಮಾಡಿಕೊಳ್ಳೋಣ ಎಂಬ ಪ್ರಸ್ತಾವನೆ ನೀಡಲಾಗಿತ್ತು. ಕೋಲಾರದಲ್ಲಿ ಕೊನೆ ದಿನದವರೆಗೂ ಇಬ್ಬರು ಸಚಿವರು ಮೈತ್ರಿ ಮಾಡಿಕೊಳ್ಳೋಣ, ಬಿಜೆಪಿ ಅಭ್ಯರ್ಥಿ ಹಾಕುವುದಿಲ್ಲ ಎಂದೇ ಕುಮಾರಸ್ವಾಮಿ ಜತೆ ಸಂಪರ್ಕದಲ್ಲಿದ್ದರು. ಆದರೆ ಬಿಜೆಪಿಯ ಕೆಲವು ನಾಯಕರಿಗೆ ಇದು ಇಷ್ಟ ಇರಲಿಲ್ಲ. ಮೈತ್ರಿ ಆದರೆ ಪಕ್ಷದಲ್ಲಿ ಬಿಎಸ್‌ವೈ ಮೇಲುಗೈ ಆಗಬಹುದು ಎಂಬ ಕಾರಣಕ್ಕೆ ತಪ್ಪಿಸಿದರು ಎಂಬ ಮಾತುಗಳು ಕೇಳಿಬರುತ್ತಿವೆ.

ಕೆಪಿಸಿಸಿ ಅಧ್ಯಕ್ಷನಾಗಿ ವಿಧಾನ ಪರಿಷತ್‌ ಚುನಾವಣೆಯಲ್ಲಿ ನಾನು ಜೆಡಿಎಸ್‌ ಅಷ್ಟೇ ಅಲ್ಲ ಸಿಪಿಎಂ, ರೈತ ಸಂಘ ಎಲ್ಲರ ಮತವನ್ನೂ ಕೇಳುತ್ತೇನೆ. ಮತದಾರರಿಗೆ ಮುಕ್ತ ಮತದಾನದ ಅವಕಾಶವಿದ್ದು, ಯಾರು ಯಾರಿಗೆ ಬೇಕಾದರೂ ಮತ ಹಾಕಬಹುದು.
– ಡಿ.ಕೆ. ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ

 

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.